ಚೀನಾ ಗಡಿ ವಿಚಾರ: ಮದ್ಯಸ್ಥಿಕೆಗೆ ಬಂದ ಟ್ರಂಪ್‌ಗೆ ಮತ್ತೆ ಮುಖಭಂಗ!

ಚೀನಾ ಗಡಿ ವಿಚಾರದಲ್ಲಿ ಟ್ರಂಪ್‌ ಮಧ್ಯಸ್ಥಿಕೆ ಬೇಡ| ಲಡಾಖ್‌ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ಹಾಗೂ ಚೀನಾ ಪರಸ್ಪರ ಮಾತುಕತೆಯಲ್ಲಿ ತೊಡಗಿವೆ| ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಮತ್ತೆ ಮುಖಭಂಗ

India in talks with China to resolve border conflict says defense minister Rajnath Singh

ನವದೆಹಲಿ(ಮೇ.31): ಲಡಾಖ್‌ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಭಾರತ ಹಾಗೂ ಚೀನಾ ಪರಸ್ಪರ ಮಾತುಕತೆಯಲ್ಲಿ ತೊಡಗಿವೆ. ರಾಜತಾಂತ್ರಿಕ ಹಾಗೂ ಸೇನಾ ಮಟ್ಟಗಳೆರಡರಲ್ಲೂ ಮಾತುಕತೆ ನಡೆದಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ. ತನ್ಮೂಲಕ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಮೊದಲ ಕೇಂದ್ರ ಸಚಿವರಾಗಿದ್ದಾರೆ.

ಚೀನಾಕ್ಕೆ ಪೆಟ್ಟಿನ ಮೇಲೆ ಪೆಟ್ಟು

ಶನಿವಾರ ಟೀವಿ ಚಾನೆಲ್‌ ಒಂದರ ಜತೆ ಮಾತನಾಡಿದ ಅವರು, ‘ಎರಡೂ ದೇಶಗಳು ಸಮಸ್ಯೆ ಇತ್ಯರ್ಥಕ್ಕೆ ಬಯಸಿದ್ದಾಗಿ ಈಗಾಗಲೇ ಸ್ಪಷ್ಟಪಡಿಸಿ ಅಗಿದೆ. ಈ ವಿಷಯದಲ್ಲಿ ಅಮೆರಿಕ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಯಾವುದೇ ಹಂತದಲ್ಲೂ ಭಾರತದ ಗೌರವಕ್ಕೆ ಧಕ್ಕೆಯಾಗಲು ಬಿಡುವುದಿಲ್ಲ. ರಾಜತಾಂತ್ರಿಕ ಹಾಗೂ ಸೇನಾ ಮಾರ್ಗಗಳ ಮೂಲಕ ಮಾತುಕತೆ ನಡೆಯುತ್ತಿದೆ. ಅಮೆರಿಕ ರಕ್ಷಣಾ ಸಚಿವ ಮಾರ್ಕ್ ಎಸ್ಪರ್‌ ಜತೆ ಶುಕ್ರವಾರ ಸಂಜೆ ನಾನು ಮಾತನಾಡುವಾಗಲೂ ಈ ವಿಷಯ ತಿಳಿಸಿದ್ದೇನೆ’ ಎಂದು ಹೇಳಿದರು.

ಲೇಹ್‌ದೆ ಮೋದಿ ಭೇಟಿ, ರೂವಾರಿ ಧೋವಲ್

ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ‘ಭಾರತ-ಚೀನಾ ಬಿಕ್ಕಟ್ಟು ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ನಾನು ಸಿದ್ಧ’ ಎಂದಿದ್ದರು. ಈ ಹಿನ್ನೆಲೆಯಲ್ಲಿ ರಾಜನಾಥ್‌ ಹೇಳಿಕೆ ಮಹತ್ವ ಪಡೆದಿದೆ. ಟ್ರಂಪ್‌ ಮಧ್ಯಸ್ಥಿಕೆ ಆಹ್ವಾನವನ್ನು ಚೀನಾ ಈಗಾಗಲೇ ತಿರಸ್ಕರಿಸಿದೆ.

Latest Videos
Follow Us:
Download App:
  • android
  • ios