10:42 AM (IST) Dec 14

India Latest News Liveನಿರ್ಮಲಾ ಸೀತಾರಾಮನ್ ಭಾರತದ ನಂ.1 ಪ್ರಭಾವಿ ಮಹಿಳೆ - ವಿಶ್ವದ ಪ್ರಭಾವಿಗಳಲ್ಲಿ ಭಾರತದ ಮೂವರಿಗೆ ಸ್ಥಾನ

ಫೋರ್ಬ್ಸ್‌ ಮ್ಯಾಗಜಿನ್ 2025ರ ಪ್ರಭಾವಿ ಸ್ತ್ರೀಯರ ಪಟ್ಟಿ ಬಿಡುಗಡೆ ಮಾಡಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

Read Full Story
10:05 AM (IST) Dec 14

India Latest News LiveInd vs SA 3rd T20I - ಹರಿಣಗಳಿಗೆ ತಿರುಗೇಟು ನೀಡುತ್ತಾ ಟೀಂ ಇಂಡಿಯಾ?

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಬಳಿಕ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಹಲವು ಪ್ರಶ್ನೆಗಳನ್ನು ಎದುರಿಸುತ್ತಿದೆ. ಮೂರನೇ ಟಿ20 ಪಂದ್ಯದಲ್ಲಿ, ಕಳಪೆ ಫಾರ್ಮ್‌ನಲ್ಲಿರುವ ಶುಭ್‌ಮನ್‌ ಗಿಲ್‌ ಮತ್ತು ಸೂರ್ಯಕುಮಾರ್ ಯಾದವ್‌ ಮೇಲೆ ಎಲ್ಲರ ಕಣ್ಣಿದ್ದು, ಇದು ಅವರಿಗೆ ಅಗ್ನಿಪರೀಕ್ಷೆಯಾಗಲಿದೆ.
Read Full Story
09:41 AM (IST) Dec 14

India Latest News Liveಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು - ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ

ಕಾಂಗ್ರೆಸ್‌ನಲ್ಲಿ ಆತ್ಮಾವಲೋಕನದ ಆವಶ್ಯಕತೆಯಿದೆ. ಸರ್ಕಾರ ಅಥವಾ ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನುವುದು ಸರಿಯಲ್ಲ. ಪಕ್ಷವು ಸಂಕುಚಿತ ಮನೋಭಾವ ಬಿಟ್ಟು ಉದಾರ ಮನಃ ಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಮಾಜಿ ಕಾಂಗ್ರೆಸ್ಸಿಗ ಅಶ್ವನಿ ಕುಮಾರ್ ಹೇಳಿದ್ದಾರೆ.

Read Full Story
09:00 AM (IST) Dec 14

India Latest News Liveಲಿಯೋನೆಲ್ ಮೆಸ್ಸಿ ನೋಡಲಾಗದೇ ರೊಚ್ಚಿಗೆದ್ದ ಕೋಲ್ಕತಾ! ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಪೊಲೀಸರಿಂದ ಲಾಠಿಚಾರ್ಜ್

ಫುಟ್ಬಾಲ್‌ ದಂತಕತೆ ಲಿಯೋನೆಲ್‌ ಮೆಸ್ಸಿಯವರ ಕೋಲ್ಕತಾ ಭೇಟಿಯು ರಾಜಕೀಯ ಮೇಲಾಟ ಮತ್ತು ದುರಾಡಳಿತದಿಂದಾಗಿ ಗದ್ದಲ, ಗಲಾಟೆಯಲ್ಲಿ ಅಂತ್ಯಗೊಂಡಿತು. ದುಬಾರಿ ಟಿಕೆಟ್‌ ಖರೀದಿಸಿದ್ದ ಸಾವಿರಾರು ಅಭಿಮಾನಿಗಳು ನಿರಾಸೆಗೊಂಡು ದಾಂಧಲೆ ನಡೆಸಿದರು, ಇದರಿಂದಾಗಿ ಕಾರ್ಯಕ್ರಮವನ್ನು ಮೊಟಕುಗೊಳಿಸಲಾಯಿತು.
Read Full Story
08:31 AM (IST) Dec 14

India Latest News Liveಪಶ್ಚಿಮ ಬಂಗಾಳದಲ್ಲಿ 1 ಕೋಟಿ ನಕಲಿ ಮತದಾರರಿಗೆ ಕೊಕ್ ಸಾಧ್ಯತೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ 85 ಲಕ್ಷ ಮತದಾರರ ಮಾಹಿತಿಗಳು ತಪ್ಪಾಗಿ ದಾಖಲಾಗಿರುವುದು ಬೆಳಕಿಗೆ ಬಂದಿದೆ.

Read Full Story
08:09 AM (IST) Dec 14

India Latest News Liveಜಮ್ಮುವಿನ ಜೈಲಿನಲ್ಲಿ ಸುರಂಗ ತೋಡಿ ಜೈಲಿನಿಂದ ಪರಾರಿಗೆ ಯತ್ನಿಸಿದ್ದಿ - ಅಜ‌ರ್

'ಜಮ್ಮುವಿನ ಕೋಟ್ ಬಲ್ವಾಲ್ ಜೈಲಿನಿಂದ ತಪ್ಪಿಸಿಕೊಳ್ಳಲು ಸುರಂಗ ಕೊರೆದಿದ್ದೆವು. ಆದರೆ ಕೊನೆಯ ಕ್ಷಣದಲ್ಲಿ ಸಿಕ್ಕಿಹಾಕಿಕೊಂಡು ಚಿತ್ರಹಿಂಸೆ ಅನುಭವಿಸಿದೆ' ಎಂದು ಜೈಷ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿದ್ದಾನೆ.

Read Full Story
07:16 AM (IST) Dec 14

India Latest News Liveದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡೇಕಿಲ್ಲ - ಹೈಕೋರ್ಟ್ ಮಹತ್ವದ ತೀರ್ಪು

ವಿಚ್ಛೇದಿತ ಮಹಿಳೆಯು ದುಡಿಯುವ ಸಾಮರ್ಥ್ಯ ಹೊಂದಿದ್ದು, ಜೀವನ ನಡೆಸಲು ಶಕ್ತಳಾಗಿದ್ದರೆ ಪತಿಯಿಂದ ಜೀವನಾಂಶ ಪಡೆಯುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

Read Full Story