LIVE NOW
India Latest News Live: ಜಮ್ಮು ಪ್ರಾಂತ್ಯದಲ್ಲಿ 30 ಉಗ್ರರು ಸಕ್ರಿಯ: ಗುಪ್ತಚರ ಎಚ್ಚರಿಕೆ

ಸಾರಾಂಶ
ಜಮ್ಮು: ಪಾಕ್ ಬೆಂಬಲಿತ 30 ಉಗ್ರರು ಜಮ್ಮು ಪ್ರಾಂತ್ಯದಲ್ಲಿ ಬೀಡು ಬಿಟ್ಟಿದ್ದಾರೆ. ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ಎತ್ತರದ ಪ್ರದೇಶಗಳು, ಹಿಮಭರಿತ ಪರ್ವತಗಳಲ್ಲಿ ಅಡಗಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.
ಡಿ.21ರಿಂದ ತೀವ್ರ ಚಳಿಯ ಅವಧಿ ಆರಂಭವಾಗಿದ್ದು, ಈ ವೇಳೆ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಕೊಂಚ ಮಟ್ಟಿಗೆ ಕಡಿಮೆಗೊಳಿಸುತ್ತದೆ. ಈ ಅವಧಿಯ ಲಾಭ ಪಡೆಯಲು ಉಗ್ರರು ಜಮಾಯಿಸಿದ್ದು, ಕಿಶ್ತ್‌ವಾರ್ ಮತ್ತು ದೋಡಾ ಪ್ರದೇಶದಲ್ಲಿದ್ದಾರೆ ಎನ್ನಲಾಗಿದೆ.