08:48 PM (IST) Dec 06

India Latest News Liveಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!

ವಿಶಾಖಪಟ್ಟಣದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಯಶಸ್ವಿ ಜೈಸ್ವಾಲ್ ಅವರ ಅಮೋಘ ಶತಕ ಹಾಗೂ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಭಾರತವು 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿತು.

Read Full Story
08:22 PM (IST) Dec 06

India Latest News Liveಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್ - ಏನಿದು ಥಾಯ್‌ ವಿಚಿತ್ರ ನಿಯಮ!

ಪ್ರಪಂಚದಾದ್ಯಂತ ಆಲ್ಕೋಹಾಲ್ ಪ್ರಿಯರಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ದೇಶದಲ್ಲೂ ವಿಭಿನ್ನ ನಿಯಮಗಳಿವೆ. ಆದರೆ, ಥೈಲ್ಯಾಂಡ್‌ನಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಒಂದು ವಿಚಿತ್ರ ನಿಯಮವಿದೆ. ಅದೇನು ಅಂತೀರಾ..

Read Full Story
07:53 PM (IST) Dec 06

India Latest News Liveರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್ - ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ

ಅನ್ನದಾತ ರೈತರ ಕಲ್ಯಾಣಕ್ಕಾಗಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿವೆ.

Read Full Story
07:48 PM (IST) Dec 06

India Latest News Liveಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!

ಇಂಡಿಗೋ ವಿಮಾನಗಳ ಸರಣಿ ರದ್ದತಿಯಿಂದ ಉಂಟಾದ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದ್ದು, ರದ್ದಾದ ಟಿಕೆಟ್‌ಗಳಿಗೆ 8 ಗಂಟೆಯೊಳಗೆ ಮರುಪಾವತಿ ಮಾಡಲು ಮತ್ತು ಲಗೇಜ್‌ಗಳನ್ನು 48 ಗಂಟೆಯೊಳಗೆ ಹಿಂತಿರುಗಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

Read Full Story
06:18 PM (IST) Dec 06

India Latest News Liveವೈವಾಹಿಕ ಜೀವನಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಹಿಂದೂ ಮುಸ್ಲಿಂ ಸಂಪ್ರದಾಯದಂತೆ ಮದುವೆ

ವೈವಾಹಿಕ ಜೀವನಕ್ಕೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಹಿಂದೂ ಮುಸ್ಲಿಂ ಸಂಪ್ರದಾಯದಂತೆ ಮದುವೆ, ನವ ಜೋಡಿಗಳಿಗೆ ಬಿಗ್ ಬಾಸ್ ಸ್ಪರ್ಧಿಗಳು, ಸೆಲೆಬ್ರೆಟಿಗಳು ಶುಭಹಾರೈಸಿದ್ದಾರೆ. ಅಷ್ಟಕ್ಕೂ ಈ ಜೋಡಿ ಎರಡು ಸಂಪ್ರದಾಯದಲ್ಲಿ ಮದುವೆಯಾಗಿದ್ದೇಕೆ?

Read Full Story
05:46 PM (IST) Dec 06

India Latest News Liveಮುಸ್ಲಿಂ ಆಗಿ ಮತಾಂತರವಾದ್ರಾ ಬಾಲಿವುಡ್‌ನ ಪ್ರಖ್ಯಾತ ನಟಿಯ ಸಹೋದರಿ? ಬುರ್ಖಾ, ಹಿಜಾಬ್‌ ಧರಿಸಿ ಮಸೀದಿ ಪ್ರವೇಶ!

Priyanka Chopra sister:ಪ್ರಿಯಾಂಕಾ ಚೋಪ್ರಾ ಅವರ ಸಹೋದರಿ ಹಾಗೂ ಬಿಗ್‌ಬಾಸ್‌ ಖ್ಯಾತಿಯ ಮನಾರಾ ಚೋಪ್ರಾ ಅವರು ಬಹರೇನ್‌ನ ಮಸೀದಿಯೊಂದಕ್ಕೆ ಬುರ್ಖಾ ಧರಿಸಿ ಭೇಟಿ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಅಲ್ಲಾ ಒಬ್ಬನೇ ಎಂದು ಹೇಳಿರುವ ಅವರ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ.

Read Full Story
05:25 PM (IST) Dec 06

India Latest News Liveಕುಲ್ದೀಪ್-ಪ್ರಸಿದ್ದ್ ಮಾರಕ ದಾಳಿ; ಏಕದಿನ ಸರಣಿ ಗೆಲ್ಲಲು ಭಾರತಕ್ಕೆ ಸ್ಪರ್ಧಾತ್ಮಕ ಗುರಿ

ವಿಶಾಖಪಟ್ಟಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ, ಕ್ವಿಂಟನ್ ಡಿ ಕಾಕ್ (106) ಅವರ ಆಕರ್ಷಕ ಶತಕದ ಹೊರತಾಗಿಯೂ ದಕ್ಷಿಣ ಆಫ್ರಿಕಾ 270 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಕುಲ್ದೀಪ್ ಯಾದವ್ ಮತ್ತು ಪ್ರಸಿದ್ದ್ ಕೃಷ್ಣ ತಲಾ ನಾಲ್ಕು ವಿಕೆಟ್ ಪಡೆದು ಮಿಂಚಿದರು.

Read Full Story
04:45 PM (IST) Dec 06

India Latest News Liveಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್ - ರೆಡ್ ಕಾರ್ಪೆಟ್ ಹಾಸಿ ಸ್ವಾಗತ

ಶ್ವಾನಗಳಿಗಾಗಿಯೇ 'ಝುಟೊಪಿಯಾ 2' ಅನಿಮೇಟೆಡ್ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ರೆಡ್ ಕಾರ್ಪೆಟ್ ಸ್ವಾಗತ, ವಿಶೇಷ ಆಹಾರ ವ್ಯವಸ್ಥೆಯೊಂದಿಗೆ ಮಾಲೀಕರು ತಮ್ಮ ಶ್ವಾನಗಳ ಜೊತೆ ಥಿಯೇಟರ್‌ನಲ್ಲಿ ಕುಳಿತು ಸಿನಿಮಾ ವೀಕ್ಷಿಸಿದರು. 

Read Full Story
04:45 PM (IST) Dec 06

India Latest News Liveಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ , ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರಯಾಣಿಕರು ಪರಿತಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಈ ಪ್ರಯಾಣಿಕರಿಗೆ ವಿಶೇಷ ನೆರವು ನೀಡುತ್ತಿದೆ.

Read Full Story
04:44 PM (IST) Dec 06

India Latest News LiveInd vs SA - ಶುಭ್‌ಮನ್ ಗಿಲ್ ಫುಲ್ ಫಿಟ್; ಈ ಡೇಟ್‌ಗೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡೋದು ಫಿಕ್ಸ್!

ಕತ್ತು ನೋವಿನಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಟೀಂ ಇಂಡಿಯಾದ ಶುಭ್‌ಮನ್ ಗಿಲ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರು ಡಿಸೆಂಬರ್ 09 ರಿಂದ ಆರಂಭವಾಗಲಿರುವ ಟಿ20 ಸರಣಿಯಲ್ಲಿ ಭಾರತ ತಂಡಕ್ಕೆ ಮರಳುವ ನಿರೀಕ್ಷೆಯಿದೆ.

Read Full Story
04:06 PM (IST) Dec 06

India Latest News Liveಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ

ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ರೈಟ್ ಟು ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ, ನೀವು ಕಚೇರಿಯಿಂದ ಮನಗೆ ತೆರಳಿದ ಬಳಿಕ, ಅಥವಾ ನಿಮ್ಮ ಕೆಲಸದ ಸಮಯ ಮುಗಿದ ಬಳಿಕ ಆಫೀಸ್ ವಿಚಾರವಾಗಿ ಕರೆ, ಇಮೇಲ್ ಮಾಡಿದರೆ ಅಪರಾಧ. ಈ ಬಿಲ್ ಮಂಡಿಸಿದೆ.

Read Full Story
03:52 PM (IST) Dec 06

India Latest News Livesculptor makeup - ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!

ತುಂಬಾ ಸೊಗಸಾಗಿ ಕಾಣಬೇಕು ಎಂಬುದು ಬಹುತೇಕರ ಆಸೆ. ಅದೇ ರೀತಿ ಚೀನಾದಲ್ಲಿ ಈಗ ಹೆಣ್ಣು ಮಕ್ಕಳು ಚೆನ್ನಾಗಿ ಕಾಣುವುದಕ್ಕೆ ಕೃತಕ ಮೂಗಿನ ಮೊರೆ ಹೋಗಿದ್ದು, ಈ ಕೃತಕ ಮೂಗುಗಳು ಅವರನ್ನು ಗುರುತು ಸಿಗದಷ್ಟು ಬದಲಾಯಿಸಿ ಬಿಡುತ್ತವೆ.

Read Full Story
03:30 PM (IST) Dec 06

India Latest News Liveಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಮನತಣಿಸಲು ಸರ್ಕಾರ ದಿನಕ್ಕೊಂದು ಪದವಿ ನೀಡುತ್ತಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ಕೋಲಾಹಲ ಸೃಷ್ಟಿಸಿದೆ.

Read Full Story
02:47 PM (IST) Dec 06

India Latest News Liveಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ, ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಬಾಬರಿ ಮಸೀದಿಯನ್ನು ಹೋಲುವ ಮಸೀದಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬಿಗಿ ಭದ್ರತೆಯ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

Read Full Story
01:29 PM (IST) Dec 06

India Latest News Liveಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು

ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿಯವರ ₹1,120 ಕೋಟಿ ಮೌಲ್ಯದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರೊಂದಿಗೆ, ಯೆಸ್ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ಮುಟ್ಟುಗೋಲು ಹಾಕಿಕೊಂಡ ಒಟ್ಟು ಆಸ್ತಿಗಳ ಮೌಲ್ಯ ₹10,117 ಕೋಟಿಗೆ ಏರಿದೆ. 

Read Full Story
01:12 PM (IST) Dec 06

India Latest News Liveನಿರ್ಣಾಯಕ ಪಂದ್ಯದಲ್ಲಿ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ಕೆ ಎಲ್ ರಾಹುಲ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 20 ಪಂದ್ಯಗಳ ನಂತರ ಭಾರತ ಟಾಸ್ ಗೆದ್ದಿದ್ದು, ತಂಡದಲ್ಲಿ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿದೆ.

Read Full Story
12:51 PM (IST) Dec 06

India Latest News Liveಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!

ವಿಶಾಖಪಟ್ಟಣ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಆರಂಭಕ್ಕೆ ಕೆಲವೇ ಗಂಟೆ ಬಾಕಿ ಉಳಿದಿದೆ. ಹೀಗಿರುವಾಗಲೇ ಹರಿಣಗಳ ಪಡೆಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಇಬ್ಬರು ಆಟಗಾರರು ಪಂದ್ಯದಿಂದ ಹೊರಬಿದ್ದಿದ್ದಾರೆ.

Read Full Story
12:36 PM (IST) Dec 06

India Latest News Liveಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ

ಮನೆ ಮುಂದೆ ಹಸು ಸಗಣಿ ಹಾಕಿದ ವಿಚಾರಕ್ಕೆ ಸಂಬಂಧಿಕರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ. ತಾಯಿ ಮತ್ತು ಅತ್ತೆಯ ಜಗಳ ಬಿಡಿಸಲು ಹೋದ ಕಾನೂನು ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

Read Full Story
12:14 PM (IST) Dec 06

India Latest News Liveಮದುವೆ ಮುಂದೂಡಿಕೆ ಬಳಿಕ ಸ್ಮೃತಿ ಮಂಧನಾ ಮೊದಲ ಪೋಸ್ಟ್ - ನಿಶ್ಚಿತಾರ್ಥ ಉಂಗುರ ನಾಪತ್ತೆ! ಏನಾಯ್ತು ಎಂದ ಫ್ಯಾನ್ಸ್

ನವದೆಹಲಿ: ಮದುವೆ ಮುಂದೂಡಿಕೆ ಬಳಿಕ ಭಾರತ ಮಹಿಳಾ ಕ್ರಿಕೆಟರ್ ಸ್ಮೃತಿ ಮಂಧನಾ ಇದೇ ಮೊದಲ ಸಲ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಆಕೆಯ ಎಂಗೇಜ್‌ಮೆಂಟ್ ರಿಂಗ್ ನಾಪತ್ತೆಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Read Full Story
11:43 AM (IST) Dec 06

India Latest News Liveಪುರುಷರ ಕೊರತೆ - ಈ ದೇಶದಲ್ಲಿ ಗಂಡನ ಬಾಡಿಗೆಗೆ ಪಡೆಯುತ್ತಾರೆ ಹೆಣ್ಣು ಮಕ್ಕಳು

ಇಲ್ಲೊಂದು ದೇಶದಲ್ಲಿ ಮನೆ ಕೆಲಸಕ್ಕಾಗಿ ಮಹಿಳೆಯರು ಗಂಡನನ್ನು ಬಾಡಿಗೆಗೆ ಪಡೆಯುತ್ತಾರೆ. ಹೌದು ಆ ದೇಶದಲ್ಲಿ ಲಿಂಗ ಅಸಮತೋಲನ ತೀವ್ರವಾಗಿದ್ದು, ಮಹಿಳೆಯರಿಗೆ ಹೋಲಿಸಿದರೆ ಪುರುಷರ ಸಂಖ್ಯೆ ತೀರ ಕಡಿಮೆ ಇದೆ. ಇದೇ ಕಾರಣಕ್ಕೆ ಇಲ್ಲಿ ಪುರುಷರನ್ನು ಮಹಿಳೆಯರು ದುಡ್ಡು ನೀಡಿ ಬಾಡಿಗೆಗೆ ಪಡೆದುಕೊಳ್ಳುತ್ತಾರೆ.

Read Full Story