Covid-19 Crisis: 3.17 ಲಕ್ಷ ಕೋವಿಡ್‌ ಪ್ರಕರಣಗಳು: 8 ತಿಂಗಳ ಗರಿಷ್ಠ

ಮತ್ತೆ ಕೋವಿಡ್‌ ಪ್ರಕರಣಗಳು ಗುರುವಾರ ಅಬ್ಬರಿಸಿವೆ. ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 3,17,532 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದ 249 ದಿನ (8 ತಿಂಗಳು)ಗಳ ಗರಿಷ್ಠ ಸಂಖ್ಯೆಯಾಗಿದೆ.

India logs 3.17 lakh fresh cases in last 24 hrs, highest in 8 months 491 deaths gvd

ನವದೆಹಲಿ (ಜ.21): ಮತ್ತೆ ಕೋವಿಡ್‌ ಪ್ರಕರಣಗಳು (Covid19 Cases) ಗುರುವಾರ ಅಬ್ಬರಿಸಿವೆ. ದೇಶದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 3,17,532 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದ 249 ದಿನ (8 ತಿಂಗಳು)ಗಳ ಗರಿಷ್ಠ ಸಂಖ್ಯೆಯಾಗಿದೆ. ಇನ್ನು ಇದೇ ಅವಧಿಯಲ್ಲಿ 491 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಹೊಸ ಸೋಂಕಿತರೂ ಸೇರಿ ಸಕ್ರಿಯ ಸೋಂಕಿನ ಪ್ರಮಾಣ 19.24ಲಕ್ಷಕ್ಕೆ ಹೆಚ್ಚಿದೆ. ಇದು ಕಳೆದ 234 ದಿನಗಳ (7.5 ತಿಂಗಳ) ಗರಿಷ್ಠ ಸಂಖ್ಯೆಯಾಗಿದೆ. ಚೇತರಿಕೆ ಪ್ರಮಾಣ ಶೇ.93.09ಕ್ಕೆ ಕುಸಿದಿದೆ. ದೈನಂದಿನ ಪಾಸಿಟಿವಿಟಿ ದರ 16.41ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರವೂ 16.06ನಷ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3.82 ಕೋಟಿಗೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 4,87,693ಕ್ಕೆ ತಲುಪಿದೆ. ಒಟ್ಟು ಸೋಂಕಿತರ ಪೈಕಿ 3.58 ಕೋಟಿ ಮಂದಿ ಗುಣಮುಖರಾಗಿದ್ದಾರೆ. ಈ ನಡುವೆ 159.67 ಕೋಟಿ ಡೋಸ್‌ ಲಸಿಕೆ (Vaccine) ವಿತರಣೆ ಮಾಡಲಾಗಿದೆ.

326 ಒಮಿಕ್ರೋನ್‌ ಕೇಸ್‌: ಗುರುವಾರ ದೇಶದಲ್ಲಿ 326 ಒಮಿಕ್ರೋನ್‌ ಪ್ರಕರಣಗಳು (Omicron Cases) ಪತ್ತೆಯಾಗಿವೆ. ತನ್ಮೂಲಕ ಒಟ್ಟು ಒಮಿಕ್ರೋನ್‌ ಸೋಂಕಿತರ ಸಂಖ್ಯೆ 9,287ಕ್ಕೆ ಏರಿಕೆಯಾಗಿದೆ.

Coronavirus: ಒಮಿಕ್ರೋನ್‌, ಡೆಲ್ಟಾಗೆ  ಕೋವ್ಯಾಕ್ಸಿನ್‌ ಬೂಸ್ಟರ್ ಡೋಸ್‌ ಭರ್ಜರಿ ಮದ್ದು!

ಒಟ್ಟಿಗೆ ಎರಡು ಪ್ರತ್ಯೇಕ ಕೋವಿಡ್‌ ಅಲೆ: ಒಮಿಕ್ರೋನ್‌ (Omicron) ರೂಪಾಂತರಿ ಕೊರೋನಾ ವೈರಸ್‌ನ (Coronavirus) ಗುಣಲಕ್ಷಣಗಳು, ಸೋಂಕಿನ ಲಕ್ಷಣಗಳ ಬಗ್ಗೆ ವಿಜ್ಞಾನಿಗಳು ಕುತೂಹಲ ಹೊಂದಿರುವ ಹೊತ್ತಿನಲ್ಲೇ, ಇದುವರೆಗೆ ಪತ್ತೆಯಾದ ಯಾವುದೇ ರೂಪಾಂತರಿ ಜೊತೆಗೂ ಒಮಿಕ್ರೋನ್‌ಗೆ ನಂಟಿಲ್ಲ. ಇದೊಂದು ಪ್ರತ್ಯೇಕ ಪ್ರಭೇದ. ಹೀಗಾಗಿ ಭಾರತದಲ್ಲೀಗ ಸಮಾನಾಂತರಾವಾಗಿ ಎರಡು ಕೋವಿಡ್‌ ಅಲೆ ಕಾಣಿಸಿಕೊಂಡಿದೆ ಎಂದು ಹಿರಿಯ ವೈದ್ಯರೊಬ್ಬರು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಮಾಜಿ ಮುಖ್ಯಸ್ಥ, ಹಿರಿಯ ವೈರಾಣು ತಜ್ಞ ಡಾ. ಟಿ.ಜಾಕೋಬ್‌ ಜಾನ್‌ (T Jacob John) ಮಾತನಾಡಿ, ‘ವುಹಾನ್‌ನಲ್ಲಿ ಮೊತ್ತ ಮೊದಲಿಗೆ ಸೋಂಕಿಗೆ ಕಾರಣವಾದ ವುಹಾನ್‌-ಡಿ614ಜಿ, ನಂತರ ಕಾಣಿಸಿಕೊಂಡ ಆಲ್ಪಾ, ಬೀಟಾ, ಗಾಮಾ, ಡೆಲ್ಟಾ, ಕಪ್ಪಾ, ಮು ಸೇರಿದಂತೆ ಯಾವುದೇ ರೂಪಾಂತರಿ ಜೊತೆಗೂ ಒಮಿಕ್ರೋನ್‌ ಸಂಬಂಧ ಹೊಂದಿಲ್ಲ. ಇದು ಸಂಪೂರ್ಣವಾಗಿ ಬೇರೆ ಮೂಲದಿಂದ ಉಗಮವಾಗಿರುವ ವೈರಸ್‌’ ಎಂದು ಹೇಳಿದ್ದಾರೆ.

Covid Vaccine: ಬಲವಂತವಾಗಿ ಲಸಿಕೆ ನೀಡುವಂತಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

‘ಕೋವಿಡ್‌ ಸಾಂಕ್ರಾಮಿಕದ ಬೆಳವಣಿಗೆಯ ಹಾದಿಯಲ್ಲಿ ಕಂಡುಬಂದ ಯಾವುದೇ ವೈರಸ್‌ ಜೊತೆಗೆ ಇದು ನಂಟು ಹೊಂದಿಲ್ಲ. ಹೀಗಾಗಿ ನಾವೀಗ ಭಾರತದಲ್ಲಿ ಡೆಲ್ಟಾಮತ್ತು ಒಮಿಕ್ರೋನ್‌ ಎಂಬ ಎರಡು ಪ್ರತ್ಯೇಕ ಕೋವಿಡ್‌ ಅಲೆಯನ್ನು ಎದುರಿಸುತ್ತಿದ್ದೇವೆ ಎಂಬ ಚಿಂತನೆಯತ್ತ ಸಾಗಬೇಕಿದೆ’ ಎಂದು ಜಾನ್‌ ಹೇಳಿದ್ದಾರೆ.  ‘ಸಾಂಪ್ರದಾಯಿಕ ಕೋವಿಡ್‌ ವೈರಸ್‌ಗಳಿಗೆ ಹೋಲಿಸಿದರೆ ಒಮಿಕ್ರೋನ್‌ ಸಾಕಷ್ಟುಭಿನ್ನವಾಗಿದೆ. ಹೀಗಾಗಿಯೇ ಒಮಿಕ್ರೋನ್‌ ಅನ್ನು ಕೇವಲ ಜಿನೋಮ್‌ ಸೀಕ್ವೆನ್ಸಿಂಗ್‌ ಮೂಲಕ ಮಾತ್ರವೇ ಪತ್ತೆ ಹಚ್ಚಬಹುದು. ಇತರೆ ವೈರಸ್‌ ಶ್ವಾಸಕೋಶಕ್ಕೆ ತೊಂದರೆ ಮೂಡಿಸಿದರೆ, ಒಮಿಕ್ರೋನ್‌ ಕೇವಲ ಗಂಟಲು ಭಾಗದಲ್ಲಿ ಇರುತ್ತದೆ’ ಎಂದು ಜಾನ್‌ ಹೇಳಿದ್ದಾರೆ.

Latest Videos
Follow Us:
Download App:
  • android
  • ios