08:00 AM (IST) Sep 22

India News Live ಅಯೋಧ್ಯೆ ರಾಮಮಂದಿರ ದೇಣಿಗೆ 105 ಬಾರಿ ಕಳ್ಳತನ: ಸಿಸಿಟಿವಿಯಲ್ಲಿ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌

ಅಯೋಧ್ಯೆ ರಾಮಮಂದಿರದ ದೇಣಿಗೆಯನ್ನು 105 ಬಾರಿ ಕಳ್ಳತನ ಮಾಡಿರುವ ಆಘಾತಕಾರಿ ದೃಶ್ಯಗಳು ಸಿಸಿಟೀವಿಯಲ್ಲಿ ಸೆರೆಯಾಗಿವೆ ಎಂದು ಎಸ್‌ಐಟಿ ವರದಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಆರೋಪಿಗಳಿಗೆ ಜಾಮೀನು ಸಿಗದಂತೆ ತಡೆಯಲು ಸೆಪ್ಟೆಂಬರ್ 25ರೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು.

ರಾಮಮಂದಿರದ ದೇಣಿಕೆ ಕಳವು ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಿತು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಎಸ್‌ಐಟಿ ವರದಿಯನ್ನು ಉಲ್ಲೇಖಿಸಿ ಕೋರ್ಟ್‌ಗೆ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟೀವಿ ದೃಶ್ಯಾವಳಿಗಳು, ಸಾಕ್ಷಿಗಳ ಹೇಳಿಕೆಗಳು ಹಾಗೂ ಲಭ್ಯವಿರುವ ಎಲ್ಲಾ ತಾಂತ್ರಿಕ ಆಧಾರಗಳನ್ನು ಕೋರ್ಟ್‌ಗೆ ಸಲ್ಲಿಸಲಾಯಿತು. ಈವರೆಗೆ ಕೈಗೊಂಡಿರುವ ತನಿಖೆಯ ಸಂಪೂರ್ಣ ವಿವರವನ್ನು ಮುಖ್ಯ ನ್ಯಾ. ಸೂರ್ಯಕಾಂತ್‌, ನ್ಯಾ. ಜಯಮಾಲ್ಯ ಬಾಗ್ಚಿ ಹಾಗೂ ನ್ಯಾ. ವಿ. ಮೋಹನ ಅವರ ಪೀಠ ದಾಖಲಿಸಿಕೊಂಡಿತು.

Read Full Story