ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಪ್ರಧಾನಿ ಮೋದಿ ಭಜನೆ ಮಾಡಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗದ ಪ್ರಶ್ನೆಗಳಿಗೆ ಉತ್ತರಿಸದ ಮೋದಿ ಭಜನೆಗೆ ಸಮಯ ನೀಡುತ್ತಾರೆ ಎಂದು ಅವರು ಟೀಕಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಏನು ಹೇಳಿದೆ?
- Home
- News
- India News
- India News Live: 'ಭಜನೆ ಮಾಡೋಕೆ ಟೈಂ ಇದೆ, ಉತ್ರ ಕೊಡೋಕೆ ಇಲ್ಲ..'ಪ್ರಧಾನಿ ಮೋದಿ ಬಗ್ಗೆ ಪ್ರಿಯಾಂಕ್ ಖರ್ಗೆ-ಬಿಜೆಪಿ ಭಾರಿ ಜಟಾಪಟಿ! ಹೇಳಿದ್ದೇನು?
India News Live: 'ಭಜನೆ ಮಾಡೋಕೆ ಟೈಂ ಇದೆ, ಉತ್ರ ಕೊಡೋಕೆ ಇಲ್ಲ..'ಪ್ರಧಾನಿ ಮೋದಿ ಬಗ್ಗೆ ಪ್ರಿಯಾಂಕ್ ಖರ್ಗೆ-ಬಿಜೆಪಿ ಭಾರಿ ಜಟಾಪಟಿ! ಹೇಳಿದ್ದೇನು?

ಎಸ್ಐಆರ್ ಸೇರಿ ಹಲವು ವಿಚಾರಗಳಲ್ಲಿ ಇನ್ನಿಬ್ಬರು ಆಯುಕ್ತರ ಅಭಿಪ್ರಾಯಗಳನ್ನು ಕಡೆಗಣಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ನಿರ್ಣಯ ಕೈಗೊಂಡಿದ್ದರು ಎಂಬ ಆರೋಪ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ ನಡುವೆಯೇ, ‘ಎಲ್ಲಾ ಆದೇಶಗಳನ್ನು ಮೂವರೂ ಚುನಾವಣಾ ಆಯುಕ್ತರ ಸರ್ವಾನುಮತದ ಅನುಮೋದನೆಯೊಂದಿಗೆ ಹೊರಡಿಸಲಾಗಿದೆ’ ಎಂದು ಭಾರತೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಮೂವರೂ ಆಯುಕ್ತರನ್ನು ಒಳಗೊಂಡ ಪೂರ್ಣ ಆಯೋಗ ಶನಿವಾರ ಮಹತ್ವದ ಸಭೆ ನಡೆಸಿ, ಆರೋಪಗಳ ಕುರಿತು ಸ್ಪಷ್ಟನೆ ನೀಡಿದೆ. ಇದೇ ವೇಳೆ, ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಲು ಬಳಸುವ ‘ಫಾರ್ಮ್ 6’ರಲ್ಲಿ ಮಾಡಲಾದ ಬದಲಾವಣೆಗಳನ್ನು ಸುಪ್ರೀಂ ಕೋರ್ಟ್ ಈಗಾಗಲೇ ಎತ್ತಿಹಿಡಿದಿದೆ ಎಂದೂ ಆಯೋಗ ತಿಳಿಸಿದೆ.
‘ದೇಶಾದ್ಯಂತ ಎಸ್ಐಆರ್ ಪ್ರಕ್ರಿಯೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಮತ್ತು ಇಬ್ಬರು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ. ಇನ್ನಿಬ್ಬರ ಆಕ್ಷೇಪಗಳನ್ನು ಕಡೆಗಣಿಸಿ ಸಿಇಸಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ’ ಎಂದು ‘ದಿ ಇಂಡಿಯನ್ ಎಕ್ಸ್ಪ್ರೆಸ್’ ಪತ್ರಿಕೆ ವರದಿ ಮಾಡಿತ್ತು. ಇದಾದ ಬೆನ್ನಲ್ಲೇ ‘ಯಾವುದೇ ಭಿನ್ನಮತವಿಲ್ಲ’ ಎಂಬ ಸ್ಪಷ್ಟನೆ ಬಂದಿದೆ.