10:02 AM (IST) Sep 26

India News Live Updates Today Sep 26th: ಭಾರತ ಜತೆಗಿನ ಯುದ್ಧ ಸ್ಥಗಿತಕ್ಕೆ ಟ್ರಂಪ್‌ ಮಧ್ಯಸ್ಥಿಕೆ ಕಾರಣ, ಕಾಶ್ಮೀರ ಸಮಸ್ಯೆಗೆ ಪರಿಹಾರ ಬೇಕಿದೆ - ಶೆಹಬಾಜ್‌

2025ರ ಭಾರತ-ಪಾಕ್ ಯುದ್ಧ ತಡೆಯಲು ಟ್ರಂಪ್ ಕಾರಣ ಎಂದು ವಿಶ್ವಸಂಸ್ಥೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಇದೇ ವೇಳೆ ಅವರು ಕಾಶ್ಮೀರ ಸಮಸ್ಯೆ ಮತ್ತು ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಬಗ್ಗೆಯೂ ಮಾತನಾಡಿದ್ದಾರೆ. ಮತ್ತೊಂದೆಡೆ, ಅಮೆರಿಕ ಮತ್ತು ಚೀನಾ ಅಧ್ಯಕ್ಷರು ದ್ವಿಪಕ್ಷೀಯ ಸಂಬಂಧ ಬಲಪಡಿಸಲು ಪಣತೊಟ್ಟಿದ್ದಾರೆ.
Read Full Story
09:31 AM (IST) Sep 26

India News Live Updates Today Sep 26th: ವಿಶ್ವಸಂಸ್ಥೆಯಲ್ಲಿ ಜಮ್ಮು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಪಾಕಿಸ್ತಾನದ ಜನ್ಮ ಜಾಲಾಡಿದ ಭಾರತ!

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು-ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಭಾರತ ತಕ್ಕ ತಿರುಗೇಟು ನೀಡಿದೆ. ಪಾಕಿಸ್ತಾನವು ಉಗ್ರರಿಗೆ ಆಶ್ರಯ ನೀಡುವ, ಸೇನೆಯ ಕೈಗೊಂಬೆ ಸರ್ಕಾರವನ್ನು ಹೊಂದಿರುವ ರಾಷ್ಟ್ರ ಎಂದು ಭಾರತೀಯ ರಾಜತಾಂತ್ರಿಕ ಅಧಿಕಾರಿ ಪೆಟಲ್ ಗೆಹ್ಲೋಟ್ ಕಟುವಾಗಿ ಟೀಕಿಸಿದ್ದಾರೆ.
Read Full Story
09:20 AM (IST) Sep 26

India News Live Updates Today Sep 26th: ಏಷ್ಯನ್ ಗೇಮ್ಸ್ ಶೂಟಿಂಗ್ - ಭಾರತಕ್ಕೆ ಶೂಟಿಂಗ್‌ನಲ್ಲಿ ಕೊನೆಗೂ ಸಿಕ್ತು ಚಿನ್ನ!

2026ರ ನಗೋಯಾ ಏಷ್ಯನ್‌ ಗೇಮ್ಸ್‌ನಲ್ಲಿ ಕಮಲ್‌ಜೀತ್‌ ಮತ್ತು ಸುರುಚಿ ಜೋಡಿಯು 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಭಾರತಕ್ಕೆ 2ನೇ ಚಿನ್ನ ತಂದುಕೊಟ್ಟಿದ್ದಾರೆ. ಪುರುಷರ 50 ಮೀ. ರೈಫಲ್‌ 3 ಪೊಸಿಷನ್‌ನಲ್ಲಿ ಭಾರತ ತಂಡ ಬೆಳ್ಳಿ ಗೆದ್ದಿದ್ದು, ಒಟ್ಟು 23 ಪದಕಗಳೊಂದಿಗೆ 12ನೇ ಸ್ಥಾನದಲ್ಲಿದೆ.
Read Full Story