ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಎಎನ್ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.
BREAKING: ಕದನ ವಿರಾಮಕ್ಕೆ ಒಪ್ಪಿದ ಭಾರತ-ಪಾಕಿಸ್ತಾನ: ಅಮೆರಿಕ ಅಧ್ಯಕ್ಷ ಟ್ರಂಪ್
ನವದೆಹಲಿ: ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ. ಇತ್ತ ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ. ಎರಡು ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರೋದಕ್ಕೆ ಸಂತೋಷವಾಗಿದೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇತ್ತ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ ಅವರು ಸಹ ಟ್ರಂಪ್ ಟ್ವೀಟ್‌ನ್ನ ರೀ ಟ್ವೀಟ್ ಮಾಡಿದ್ದಾರೆ.
ಭಾರತ-ಪಾಕ್ ಯುದ್ಧ ಹಿನ್ನೆಲೆ ಏನು?:
ಏಪ್ರಿಲ್ 22, 2025ರಂದು ಭಾರತದ ಮುಕುಟಮಣಿ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಬ್ಬರು ಕನ್ನಡಿಗರು ಸೇರಿ 26 ಹಿಂದೂಗಳನ್ನು ಧರ್ಮ ಕೇಳಿ ಬಲಿ ಪಡೆದ ಪ್ರತೀಕಾರವಾಗಿ ಪಾಕಿಸ್ತಾನಕ್ಕೆ ಆಪರೇಷನ್ ಸಿಂದೂರದ ಮೂಲಕ ಮೇ 7, 2025ರಂದು ತಕ್ಕ ಪ್ರತೀಕಾರ ತೀರಿಸಿಕೊಂಡಿತ್ತು.
ಯಾವುದೇ ನಾಗರಿಕರ ಪ್ರಾಣಕ್ಕೆ ಹಾನಿಯಾಗದಂತೆ ಪಾಕಿಸ್ತಾನದ ಉಗ್ರರ ಅಡಗು ತಾಣಗಳ ಮೇಲೆ ಭಾರತ ದಾಳಿ ನಡೆಸಿ, 9 ಉಗ್ರ ತಾಣಗಳನ್ನು ನಾಶ ಪಡಿಸಿದೆ. ಅಷ್ಟೇ ಅಲ್ಲ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕರ್ನಲ್ ಸೋಫಿಯಾ ಖುರೇಷಿ ಮೂಲಕ ಭಾರತೀಯ ಮಹಿಳೆಯ ಸಿಂಧೂರ ಕಿತ್ತು ಕೊಂಡಿದ್ದಕ್ಕೆ ಪ್ರತೀಕಾರವಾಗಿ ತೆಗೆದುಕೊಂಡ ಕ್ರಮಕ್ಕೆ ಇಡೀ ಜಗತ್ತಿಗೆ ಮಹಿಳೆಯರ ನೇತೃತ್ವದಲ್ಲಿಯೇ ಪ್ರತೀಕಾರ ತೀರಿಸಿದೆ. ಇಡೀ ಜಗತ್ತಿಗೆ ಈ ಮಹಿಳಾ ನಾಯಕರಿಂದಲೇ ಪತ್ರಿಕಾ ಗೋಷ್ಠಿ ಮಾಡಿಸಿ ಹೇಳಿದ್ದು ದೇಶದ ನಾರಿ ಶಕ್ತಿ ಸಾಮರ್ಥ್ಯವನ್ನು ಸಾರಿ ಸಾರಿ ಹೇಳಿದಂತಾಗಿದೆ. ಅಷ್ಟೇ ಅಲ್ಲ ಹಿಂದೂ ಎನ್ನುವ ಕಾರಣಕ್ಕೆ 26 ಅಮಾಯಕಕನ್ನು ಬಲಿ ಪಡೆದಿದ್ದಕ್ಕೆ ಪ್ರತೀಕಾರವಾಗಿ ಹಿಂದು-ಮುಸ್ಲಿಂ ಜಂಟಿಯಾಗಿಯೇ ನಡೆದ ಕಾರ್ಯಾಚರಣೆ ಬಗ್ಗೆ ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿ, ದೇಶದ ಭದ್ರತಾ ವಿಷಯವಾಗಿ ಬಂದಾಗ ಭಾರತದಲ್ಲಿ ಮಹಿಳೆಯರೊಡಗೂಡಿ ಹಿಂದೂ-ಮುಸ್ಲಿಂ ಎಂದೆಂದಿಗೂ ಒಂದೇ ಎಂದು ಜಗತ್ತಿಗೆ ಸಾರಿ ಹೇಳಿದ ಭಾರತದ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಭಾರತ ಅಳವಡಿಸಿಕೊಂಡಿರುವ ರಷ್ಯಾದ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ಸ್ ಪಾಕಿಸ್ತಾನದ ಪಾಲಿಗೆ ದುಸ್ವಪ್ನವಾಗಿದೆ. ಭಾರತದ 15 ನಗರಗಳ ಮಿಲಿಟರಿ ಮತ್ತು ರೇಡಾರ್ ವ್ಯವಸ್ಥೆಗಳನ್ನು ಗುರಿಯಾಗಿರಿಸಿಕೊಂಡು ಪಾಕ್ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದರೂ ಅವುಗಳನ್ನೆಲ್ಲ ಆಗಸದಲ್ಲೇ ಕರಾರುವಕ್ಕಾಗಿ ಹೊಡೆದುರುಳಿಸುವಲ್ಲಿ ಈ ರಕ್ಷಣಾ ವ್ಯವಸ್ಥೆ ಯಶಸ್ವಿಯಾಗಿದೆ. ಇದು ಪಾಕಿಸ್ತಾನಕ್ಕೆ ತೀವ್ರ ಮುಖಭಂಗವನ್ನುಂಟುಮಾಡಿದೆ. 'ಸುದರ್ಶನ ಚಕ್ರ' ಎಂದೇ ಕರೆಯಲ್ಪಡುವ ಈ ಏರ್ ಡಿಫೆನ್ಸ್ ಸಿಸ್ಟಮ್ ಭಾರತದ ಪಾಲಿನ ರಕ್ಷಾ ಕವಚವಾಗಿದೆ. ವಿಶ್ವದಲ್ಲೇ ಅತ್ಯಾಧುನಿಕ ಎನ್ನಲಾದ ಈ ರಕ್ಷಣಾ ವ್ಯವಸ್ಥೆ 600 ಕಿ.ಮೀ.ದೂರದಿಂದಲೇ ತನ್ನನ್ನ ಬರುವ ಗುರಿಯನ್ನು ಗುರುತಿಸಿ, 400 ಕಿ.ಮೀ.ದ ದೂರದಲ್ಲೇ ಅವುಗಳನ್ನು ಹೊಡೆದುರುಳಿಸಬಲ್ಲದು. ಭಾರತ ಇಂಥ ನಾಲ್ಕು ಎಸ್-400 ಡಿಫೆನ್ಸ್ ಸಿಸ್ಟಮ್ ಅನ್ನು ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನ ರಕ್ಷಣೆಗಾಗಿ ನಿಯೋಜಿಸಿದೆ.
ಭಾರತ-ಫಾಕಿಸ್ತಾನ ಸಂಘರ್ಷದ ಪ್ರತಿ ಕ್ಷಣದ ಮಾಹಿತಿಗಾಗಿ ಸುವರ್ಣ ನ್ಯೂಸ್‌ಗೆ ಟ್ಯೂನ್ ಆಗಿರಿ.


