ಪಾಕಿಸ್ತಾನ ನಾಗರಿಕರ ಮೇಲೆ ದಾಳಿ ಮಾಡುತ್ತಿದ್ದರೆ, ಭಾರತ ಸೇನಾ ನೆಲೆಗಳನ್ನು ಮಾತ್ರ ಗುರಿಯಾಗಿಸುತ್ತಿದೆ. ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಿಸುತ್ತಿದ್ದು, ಭಾರತ ಸೂಕ್ತ ಪ್ರತ್ಯುತ್ತರ ನೀಡುತ್ತಿದೆ ಎಂದು ಜೈಶಂಕರ್ ಅಮೆರಿಕದ ರೂಬಿಯೋಗೆ ತಿಳಿಸಿದ್ದಾರೆ. ಭಾರತ ಜವಾಬ್ದಾರಿಯುತವಾಗಿ ವರ್ತಿಸುತ್ತಿದ್ದು, ಹಿಂದೆ ಸರಿಯುವ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭಾರತ ಕೇವಲ ಸೇನಾ ನೆಲೆಗಳ ಮೇಲೆ ದಾಳಿ ಮಾಡಿದರೆ, ಪಾಕಿಸ್ತಾನ ಭಾರತೀಯ ನಾಗರಿಕರ ಮೇಲೆ ದಾಳಿ ಮಾಡುತ್ತಿದೆ. ಇಲ್ಲಿ ಮುಖ್ಯವಾಗಿ ಪಾಕಿಸ್ತಾನ ಉದ್ವಿಗ್ನತೆಯನ್ನು ಹೆಚ್ಚಳ ಮಾಡುತ್ತಿದೆ. ನಾವು ಅದಕ್ಕೆ ತಕ್ಕ ಪ್ರತ್ಯುತ್ತರವನ್ನು ನೀಡುತ್ತಿದ್ದೇವೆ. ಭಾರಯ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕ್ ರೂಬಿಯೋ ಅವರಿಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.
ಭಾರತ ಉದ್ವಿಗ್ನತೆಯನ್ನು ಕಡಿಮೆಗೊಳಿಸುವಂತೆ ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕ್ ರೂಬಿಯೋ ಭಾರತ-ಪಾಕ್ ಮಾತುಕತೆ ನಡೆಸುವುದು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದ್ದರು. ಇದಾದ ನಂತರ ಪಾಕಿಸ್ತಾನಕ್ಕೆ ಕರೆ ಮಾಡಿದ್ದ ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಅವರಿಗೆ ಕರೆ ಮಾಡಿ ಮಾತನಾಡಿದ ನಂತರ ಭಾರತದ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆಯನ್ನು ನೀಡಿರುವ ಭಾರತದ ವಿದೇಶಾಂಗ ಕಾರ್ಯದರ್ಶಿ ಅವರು ನಾವು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಬೆಳಗ್ಗೆ ಮಾತುಕತೆ ನಡೆಸಿದೆ. ಭಾರತ ಎಂದಿಗೂ ಉದ್ವಿಗ್ನತೆ ಮಾಡುತ್ತಿಲ್ಲ. ಅವರಿಗೆ ಸರಿಯಾದ ರೀತಿಯಲ್ಲಿ ಉತ್ತರ ಕೊಡುತ್ತಿದ್ದೇವೆ. ನಾವು ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ಆದರೆ, ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅಮೇರಿಕಾದ ವಿದೇಶ ಕಾರ್ಯದರ್ಶಿ ಮಾರ್ಕೋ ರೋಬಿಯೋ ಅವರಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಎಂದಿಗೂ ಜವಾಬ್ದಾರಿಯುತವಾಗಿ ವರ್ತಿಸುತ್ತಿದೆ, ಈಗಲೂ ಕೂಡ ನಾವು ಜವಾಬ್ದಾರಿಯನ್ನು ಮರೆತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಪರೇಷನ್ ಸಿಂದೂರ ನಡೆಸಿದ ನಂತರ ಭಾರತಕ್ಕೆ ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ ಭಾರತದ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ಅವರಿಗೆ ಕರೆ ಮಾಡಿದ್ದು, ದಾಳಿ ನಿಲ್ಲಿಸುವಂತೆ ಮನವಿ ಮಾಡಿದ್ದರು. ಆಗ ನಾವು ಉಗ್ರರ ದಮನ ಮಾಡುವ ಕಾರ್ಯವನ್ನು ಕೈಬಿಡುವುದಿಲ್ಲ ಎಂದು ಹೇಳಿದ್ದರು. ಇದೀಗ ನಿನ್ನೆ ರಾತ್ರಿ ವೇಳೆ ಪಾಕಿಸ್ತಾನವು ಕಾಶ್ಮೀರದ ಗಡಿ ಪ್ರದೇಶಗಳ ಸಾರ್ವಜನಿಕ ವಸತಿ ಪ್ರದೇಶಗಳ ಮೇಲೆ, ದೇವಸ್ಥಾನಗಳ ಮೇಲೆ ದಾಳಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಲು ಭಾರತ ಪ್ರತಿದಾಳಿ ನಡೆಸಿ ಸೇನಾ ನೆಲೆಗಳನ್ನು ಹೊಡೆದು ಹಾಕಿದೆ.
ಭಾರತ ಕೇವಲ ಸೇನಾ ನೆಲೆಗಳ ಮೇಲೆ ಟಾರ್ಗೆಟ್ ಮಾಡುತ್ತಿದೆ. ಭಾರತದ ದಾಳಿಯಲ್ಲಿ ಒಂದು ಶಿಸ್ತು ಕಾಪಾಡಿಕೊಂಡು ಹೋಗುತ್ತಿದ್ದೇವೆ. ಆದರೆ, ಪಾಕಿಸ್ತಾನ ಭಾರತದ ನಾಗರೀಕ ನೆಲೆಗಳನ್ನು ಗುರುಯಾಗಿಸಿ ದಾಳಿ ಮಾಡುತ್ತಿದೆ. ಪಾಕಿಸ್ತಾನ ಉದ್ವಿಗ್ನತೆಯನ್ನು ಸೃಷ್ಟಿ ಮಾಡುತ್ತಿದೆ, ನಾವು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತುದ್ದೇವೆ. ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಆಗುತ್ತಿದೆ. ಆದರೆ, ನಾವು ಪಾಕಿಸ್ತಾನದ ದಾಳಿ ಯತ್ನವನ್ನು ವಿಫಲಗೊಳಿಸಿದ್ದೇವೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ.
ದೆಹಲಿ ಮೇಲೆ ದಾಳಿ ಮಾಡಲು ಪಾಕಿಸ್ತಾನ ಯತ್ನ ವಿಫಲಗೊಳಿಸಿದ ಭಾರತ:
ಪಾಕಿಸ್ತಾನದಿಂದ ಮೇ 10ರ ಶನಿವಾರ ಮುಂಜಾನೆ ದೆಹಲಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದ್ದು, ಹರಿಯಾಣದ ಸಿರ್ಸಾ ಬಳಿ ಪಾಕಿಸ್ತಾನದ ಫತಾಹ್ 2 ಕ್ಷಿಪಣಿಯನ್ನು ಭಾರತ ಹೊಡೆದುರುಳಿಸಿದೆ. ಈ ಮೂಲಕ ಪಾಕಿಸ್ತಾನದ ಪ್ರಯತ್ನವನ್ನು ವಿಫಲಗೊಳಿಸಲು ಮೇಲ್ಮೈಗೆ ಚಿಮ್ಮುವ ಕ್ಷಿಪಣಿಯನ್ನು ಬಳಸಲಾಗಿದೆ. ಇದರ ಜೊತೆಗೆ ಭಾರತದ ವಾಯುನೆಲೆಗಳು, ಆಸ್ಪತ್ರೆಗಳು, ಶಾಲೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ 1.40 ರಿಂದ ಪಾಕಿಸ್ತಾನ ನಿರಂತರ ದಾಳಿ ನಡೆಸಿದೆ. ಭಾರತದ ಎಲ್ಲಾ ವಾಯುನೆಲೆಗಳು ಸುರಕ್ಷಿತವಾಗಿವೆ ಎಂದು ತಿಳಿಸಿದೆ.


