Asianet Suvarna News Asianet Suvarna News

ಕೋವಿಡ್ ಹೆಚ್ಚಳದಿಂದ ಭಾರತದಲ್ಲಿ ಮಾರ್ಗಸೂಚಿ ಜಾರಿ, ಮತ್ತೆ ಬಂತು ಮಾಸ್ಕ್!

ಭಾರತದಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೀಗ ಕೇಂದ್ರ ಸರ್ಕಾರ ಮತ್ತೆ ಮಾರ್ಗಸೂಚಿ ಜಾರಿ ಮಾಡಿದೆ. ಮಾಸ್ಕ್, ಸೇರಿದಂತೆ ಕೆಲ ನಿಯಮಗಳು ಮತ್ತೆ ಬಂದಿದೆ.

India report rise of Covid 19 cases Govt Advise Face mask for air passenger on Flight ckm
Author
First Published Apr 4, 2023, 4:31 PM IST

ನವದೆಹಲಿ(ಏ.04): ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇತ್ತ ಭಾರತದಲ್ಲೂ ಕೊರೋನಾ ಮತ್ತೆ ಕಾಣಿಸಿಕೊಂಡಿದೆ. ಪ್ರತಿ ದಿನ ಸರಾಸರಿ 3,000 ಪ್ರಕರಣ ದಾಖಲಾಗುತ್ತಿದೆ. ಸಕ್ರೀಯ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೆಲ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿದೇಶಿ ಪ್ರಯಾಣಿಕರು, ಹಾಗೂ ವಿಮಾನ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ವಿಮಾನ ಪ್ರಯಾಣಿಕರು ಮಾಸ್ಕ್ ಧರಿಸುವಂತೆ ಸೂಚಿಸಿದೆ. 

ವಿದೇಶಿ ಪ್ರಯಾಣಿಕರು ಮೇಲೆ ನಿಗಾ ಇಡಲಾಗುತ್ತಿದೆ. ವಿಮಾನ ಪ್ರಯಾಣಿಕರು ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಆದರೆ ಕಡ್ಡಾಯ ಮಾಡಿಲ್ಲ. ಸದ್ಯ ಸರಾಸರಿ 3,000 ಕೋವಿಡ್ ಪ್ರಕರಣ ದಾಖಲಾಗುತ್ತಿದೆ. ಆದರೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಹೀಗಾಗಿ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಲಾಗುತ್ತಿದೆ. ಕೋವಿಡ್ ವೈರಸ್ ಅಂಟಿಕೊಳ್ಳದಂತೆ ದೂರವಿರಲಿ ತಜ್ಞರು ಸೂಚಿಸಿದ ಸಲಹೆಗಳನ್ನೂ ಸೂಚಿಸಲಾಗಿದೆ ಎಂದು ರಾಜ್ಯಸಭೆಯಲ್ಲಿ ವಿಮಾನಯಾನ ರಾಜ್ಯ ಸಚಿವ ನಿವೃತ್ತ ಜನರಲ್ ವಿಕೆ ಸಿಂಗ್ ಹೇಳಿದ್ದಾರೆ.

Covid Case ಹೆಚ್ಚಳ, ಮತ್ತೊಮ್ಮೆ ಬೂಸ್ಟರ್‌ ಡೋಸ್‌ ನೀಡಲು ಡಬ್ಲ್ಯುಎಚ್‌ಒ ಸಲಹೆ

ವಿದೇಶದಲ್ಲಿ ಗಣನೀಯವಾಗಿ ಕೋವಿಡ್ ಏರಿಕೆಯಾಗುತ್ತಿದೆ. ಇದರ ಆತಂಕ ಭಾರತದಲ್ಲೂ ಇದೆ. ಆದರೆ ಭಾರತದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೂ ಆತಂಕಪಡವು ಅಗತ್ಯವಿಲ್ಲ. ದೇಶದಲ್ಲಿನ ಕೋವಿಡ್ ಪ್ರಕರಣ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ನಿಗಾವಹಿಸಲಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿ ಅಧಿಕಾರಿಗಳಿಗೆ ಮಹ್ವದ ಸೂಚನೆ ನೀಡಿದ್ದಾರೆ ಎಂದು ವಿಕೆ ಸಿಂಗ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,038 ಕೋವಿಡ್ ಪ್ರಕರಣ ದಾಖಲಾಗಿದೆ. 9 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.ಇದೀಗ ಸರಾಸರಿ 3,000 ಕೋವಿಡ್ ಪ್ರಕರಗಳು ದಾಖಲಾಗುತ್ತಿದೆ. ಇದರ ಪರಿಣಾಮ ದೇಶದಲ್ಲಿ ಸಕ್ರೀಯ ಕೋವಿಡ್ ಪ್ರಕರಣಗಳ ಸಂಖ್ಯೆ 21,179ಕ್ಕೆ ಏರಿಕೆಯಾಗಿದೆ. 

 

ಕರ್ನಾಟಕದಲ್ಲಿ ಕೊರೋನಾ ಹೆಚ್ಚಳ: ಹೊಸ ಅಲೆಯ ಮುನ್ಸೂಚನೆಯಾ?

ಸೋಮವಾರ(ಏ.03) ಭಾರತದಲ್ಲಿ 3,641 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಕಳೆದ 6 ತಿಂಗಳಲ್ಲಿ ದಾಖಲಾದ ಗರಿಷ್ಠ ಕೋವಿಡ್ ಪ್ರಕರಣ ಇದಾಗಿತ್ತು.  ಇದೇ ವೇಳೆ 11 ಸೋಂಕಿತರು ಸಾವನ್ನಪ್ಪಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 20,219ಕ್ಕೆ ಏರಿಕೆಯಾಗಿತ್ತು. ಇದೀಗ ಸಕ್ರೀಯ ಕೋವಿಡ್ ಪ್ರಕರಣ ಸಂಖ್ಯೆ 21,179ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 4.47ಕೋಟಿ ಕೋವಿಡ್‌ ಪ್ರಕರಣಗಳು ದಾಖಲಾಗಿದೆ. ದೈನಂದಿನ ಪಾಸಿಟಿವಿಟಿ ದರವು ಶೇ.6.12 ರಷ್ಟಿದ್ದು, ವಾರದ ಪಾಸಿಟಿವಿಟಿ ದರವು ಶೆ.2.45 ರಷ್ಟಿದೆ. ಕೋವಿಡ್‌ ಚೇತರಿಕೆ ಪ್ರಮಾಣವು ಶೇ.98.76 ರಷ್ಟಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 220.66 ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳನ್ನು ವಿತರಿಸಲಾಗಿದೆ.

Follow Us:
Download App:
  • android
  • ios