Asianet Suvarna News Asianet Suvarna News

ಕೋವಿಡ್‌ ನಿಯಂತ್ರಣ: ದೇಶದಲ್ಲಿ ರಾಜ್ಯ ನಂ. 1!

* ಕೋವಿಡ್‌ ಫೈಟ್‌: ಕರ್ನಾಟಕಕ್ಕೆ ಪ್ರಶಸ್ತಿ

* ಕೊರೋನಾ ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ ಎಂಬ ಗೌರವ

* ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಗೌರವ ಸ್ವೀಕರಿಸಿದ ಆರೋಗ್ಯ ಸಚಿವ ಡಾ| ಕೆ.ಸುಧಾಕರ್‌

India Today Healthgiri Awards 2021 Karnataka Best State Combating Covid 19 pod
Author
Bangalore, First Published Oct 3, 2021, 9:47 AM IST
  • Facebook
  • Twitter
  • Whatsapp

ಬೆಂಗಳೂರು(ಆ.03): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದೇ ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’(BEST STATE COMBATING COVID-19) ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು(The India Today Healthgiri Awards 2021) ರಾಜ್ಯಕ್ಕೆ ನೀಡಿದೆ.

ಶನಿವಾರ ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌(Dr K Sudhakar) ಅವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯ ಅಂತಿಮ ಸುತ್ತಿಗೆ ಐದು ರಾಜ್ಯಗಳು ಆಯ್ಕೆಯಾಗಿದ್ದವು. ಕೊರೋನಾ ನಿಯಂತ್ರಣಕ್ಕೆ ಅತ್ಯುತ್ತಮ ಕ್ರಮಗಳನ್ನು ಕೈಗೊಂಡು ಸಾಧನೆ ತೋರಿದ ಕಾರಣಕ್ಕೆ ಕರ್ನಾಟಕಕ್ಕೆ(Karnataka) ಪ್ರಶಸ್ತಿ ನೀಡಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ(Mansukh Mandaviya) ಅವರು ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್‌ ಲಸಿಕೆ ನೀಡಿರುವುದು, ಕೊರೋನೋತ್ತರ ತಪಾಸಣೆ ಸೇರಿದಂತೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ.

ಪ್ರಶಸ್ತಿಯಿಂದ ಹೊಸ ಹುರುಪು:

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಳ, ಆಕ್ಸಿಜನ್‌ ಹಾಗೂ ವೆಂಟಿಲೇಟರ್‌ ಸೌಲಭ್ಯ, ದಾಖಲೆ ಸಂಖ್ಯೆಯ ಲಸಿಕೆ ನೀಡಿಕೆ, ಪರೀಕ್ಷೆ ಹೆಚ್ಚಿಸಿ ಸಂಪರ್ಕಿತರನ್ನು ಪತ್ತೆ ಮಾಡಿ ಚಿಕಿತ್ಸೆ ನೀಡಿರುವುದು ಈ ಎಲ್ಲಾ ಕ್ರಮಗಳಿಂದಾಗಿ ಕೋವಿಡ್‌ ನಿಯಂತ್ರಣಕ್ಕೆ ತರಲಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ರಾಜ್ಯ ಸರ್ಕಾರದ ದಿಟ್ಟಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಪ್ರಶಸ್ತಿಯಿಂದಾಗಿ ಇನ್ನಷ್ಟುಕೆಲಸ ಮಾಡಲು ಉತ್ತೇಜನ ದೊರೆತಿದೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು ಕಠಿಣ ಹಾಗೂ ತ್ವರಿತ ಕ್ರಮಗಳನ್ನು ವಹಿಸಿದೆ. ಇನ್ನಷ್ಟುಕ್ರಮಗಳ ಮೂಲಕ ಕೊರೋನಾವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಹೊಸ ಹುರುಪು ದೊರೆತಿದೆ. ಇದಕ್ಕಾಗಿ ಇಂಡಿಯಾ ಟುಡೇ ಗ್ರೂಪ್‌ಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

Follow Us:
Download App:
  • android
  • ios