Asianet Suvarna News Asianet Suvarna News

ಕೊರೋನಾಗೆ ದೇಶದಲ್ಲಿ 491 ಸಾವು, ಹೊಸ ಸೋಂಕಿತರ ಸಂಖ್ಯೆ 39 ಸಾವಿರ!

  • ದೇಶದಲ್ಲಿ ಕೊರೋನಾ ವೈರಸ್ ಪ್ರಕರಣ ಹೆಚ್ಚಳ
  • ಇಂದು 39,070 ಹೊಸ ಕೊರೋನ ಪ್ರಕರಣ ಪ್ರತ್ತೆ,491 ಸಾವು, 
  • ಕರ್ನಾಟಕದಲ್ಲಿ ಪ್ರಕರಣ ಸಂಖ್ಯೆ ಇಳಿಕೆ
India witness 39070 fresh coronavirus cases with 491 fresh fatalities ckm
Author
Bengaluru, First Published Aug 8, 2021, 9:56 PM IST

ನವದೆಹಲಿ(ಆ.08): ಕೊರೋನಾ ವೈರಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಡೆಲ್ಟಾ ಪ್ಲಸ್ ವೈರಸ್ ಕೂಡ ಕಾಣಿಸಿಕೊಳ್ಳುತ್ತಿದೆ. ಇಂದು ದೇಶದ ಹೊಸ ಕೊರೋನ  ಸಂಖ್ಯೆ 39,070 , ಇನ್ನು 491 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. 

ಗುಡ್‌ನ್ಯೂಸ್: ಕರ್ನಾಟಕದಲ್ಲಿ ಕೊರೋನಾ ಪಾಸಿಟಿವ್, ಸಾವಿನ ಸಂಖ್ಯೆಯಲ್ಲೂ ಇಳಿಕೆ

ಇದರ ಜೊತೆಗೆ ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಲಾಗಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಕೋವಿಡ್-19 ಲಸಿಕೆ ಅಭಿಯಾನದ ಸಾರ್ವತ್ರೀಕರಣದ ಹೊಸ ಹಂತದಲ್ಲಿ, ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಲಸಿಕೆಗಳಲ್ಲಿ ಶೇ.75ರಷ್ಟನ್ನು ಕೇಂದ್ರ ಸರಕಾರವೇ ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ (ಉಚಿತವಾಗಿ) ಪೂರೈಕೆ ಮಾಡುತ್ತಿದೆ.

ಕೊರೋನಾ ಭೀತಿ: ಮತ್ತೆ ಸವದತ್ತಿ ಯಲ್ಲಮ್ಮ ದೇವಿ ದರ್ಶನಕ್ಕೆ ನಿರ್ಬಂಧ..!

ಇಲ್ಲಿಯವರೆಗೆ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲಾ ಮೂಲಗಳ ಮೂಲಕ 52.37ಕೋಟಿಗಿಂತಲೂ ಅಧಿಕ (52,37,50,890) ಲಸಿಕೆ ಡೋಸ್‌ಗಳನ್ನು ಒದಗಿಸಲಾಗಿದೆ ಮತ್ತು ಇನ್ನೂ 8,99,260 ಡೋಸ್‌ಗಳು ಪೂರೈಕೆ ಹಂತದಲ್ಲಿವೆ.  

ಈ ಪೈಕಿ, ವ್ಯರ್ಥವಾದ ಲಸಿಕೆಗಳೂ ಸೇರಿದಂತೆ ಒಟ್ಟು 50,32,77,942 ಡೋಸ್‌ಗಳನ್ನು ಬಳಕೆ ಮಾಡಲಾಗಿದೆ  ಉಳಿಕೆಯಾದ ಮತ್ತು ಬಳಕೆಯಾಗದ ಇನ್ನೂ 2.42 ಕೋಟಿಗೂ ಅಧಿಕ (2,42,87,160) ಕೋವಿಡ್ ಲಸಿಕೆ ಡೋಸ್‌ಗಳು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಲಭ್ಯವಿವೆ.
 

Follow Us:
Download App:
  • android
  • ios