Asianet Suvarna News Asianet Suvarna News

ಕಾಶ್ಮೀರಿ ಹಿಂದು ರಾಹುಲ್ ಭಟ್ ಹತ್ಯೆ ಮಾಡಿದ 3 ಭಯೋತ್ಪಾದಕರಿಗೆ ಗುಂಡಿಕ್ಕಿದ ಭಾರತೀಯ ಸೇನೆ!

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ನಡೆದಿದ್ದು,  ಭದ್ರತಾ ಸಂಸ್ಥೆಯ ಮೂಲಗಳ ಪ್ರಕಾರ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಭಯೋತ್ಪಾದಕರು ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ.
 

Indian Army Attacks All 3 terrorists involved in the murder of Kashmiri Hindu Rahul Bhat have been neutralized san
Author
Bengaluru, First Published May 13, 2022, 8:09 PM IST

ಶ್ರೀನಗರ (ಮೇ.13): ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ (bandipora )ಬ್ರಾರ್ (Brar) ಅರಗಮ್ ಪ್ರದೇಶದಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ(encounter) ಮೂವರು ಉಗ್ರರು ಹತರಾಗಿದ್ದಾರೆ. ಈ ಮೂವರಲ್ಲಿ ಇಬ್ಬರು ಗುರುವಾರ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ (Rahul Bhat) ಹತ್ಯೆಯಲ್ಲಿ ಭಾಗಿಯಾಗಿದ್ದವರು ಎಂದು ಮೂಲಗಳು ತಿಳಿಸಿವೆ.

ಬುಧವಾರ, ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಂಡಿಪೋರಾ ಜಿಲ್ಲೆಯ ಸಲಿಂದರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದ್ದರೆ,  ಇನ್ನಿಬ್ಬರು ಪಾರಾಗಿದ್ದರು. ಕಾಶ್ಮೀರದ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರಕಾರ, ಬುಧವಾರ ತಪ್ಪಿಸಿಕೊಂಡ ಇಬ್ಬರು ಶುಕ್ರವಾರದ ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ.

ಗುರುವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಕೇಂದ್ರ ಕಾಶ್ಮೀರದ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ, ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ‘ಕಾಶ್ಮೀರ ಟೈಗರ್ಸ್’ ಉಗ್ರಗಾಮಿ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿತ್ತು. ಘಟನೆಯ ನಂತರ, ಕಾಶ್ಮೀರಿ ಪಂಡಿತ್ ಸಮುದಾಯದ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಬ್ರಾರ್‌ನಲ್ಲಿ ಕೊಲ್ಲಲ್ಪಟ್ಟ ಇಬ್ಬರು ಭಯೋತ್ಪಾದಕರು ಇತ್ತೀಚೆಗೆ ಭಾರತದೊಳಗೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಗಳಾಗಿದ್ದರು. ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾ ಗುಂಪಿಗೆ ಸೇರಿದವರಾಗಿದ್ದು, ಮೇ 11 ರಂದು ನಡೆದ ಕಾರ್ಯಾಚರಣೆಯ ವೇಳೆ ಪರಾರಿಯಾಗಿದ್ದರು. ವರದಿಗಳು ಕೊನೆಯದಾಗಿ ಬಂದಾಗ ಬ್ರಾರ್‌ನಲ್ಲಿ ಕಾರ್ಯಾಚರಣೆ ಇನ್ನೂ ನಡೆಯುತ್ತಿತ್ತು ಎಂದು ಹೇಳಲಾಗಿದೆ.

'ಬಂಡಿಪೋರಾದ ಬ್ರಾರ್ (ಅರಗಂ) ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ತಟಸ್ಥಗೊಳಿಸಲಾಯಿತು. ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ತಿಳಿಸಲಾಗುವುದು' ಜೆ & ಕೆ ಪೊಲೀಸರು ಹೇಳಿದ್ದಾರೆ. ಈ ಘಟನೆಯು ಕೇಂದ್ರಾಡಳಿತ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು. ರಾಹುಲ್ ಭಟ್ ಹತ್ಯೆಯನ್ನು ಖಂಡಿಸಿ ಡೋಗ್ರಾ ಫ್ರಂಟ್ ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ನೂ ನಡೆಸಿದ್ದರು. ನೂರಾರು ಡೋಗ್ರಾ ಫ್ರಂಟ್ ಗುಂಪಿನ ಸದಸ್ಯರು ಭಯೋತ್ಪಾದಕ ಗುಂಪಿನ ವಿರುದ್ಧ ಪ್ರತಿಭಟಿಸಲು ಬೀದಿಗಿಳಿದಿರುವುದನ್ನು ಕಾಣಬಹುದಾಗಿತ್ತು. ಪ್ರತಿಭಟನಾಕಾರರು ಭಯೋತ್ಪಾದಕ ಗುಂಪಿನ ವಿರುದ್ಧ ತಮ್ಮ ಕೋಪವನ್ನು ತೋರಿಸಲು ಫಲಕಗಳನ್ನು ಮತ್ತು ಭಯೋತ್ಪಾದಕರ ಚಿತ್ರಗಳನ್ನು ಹಿಡಿದು ಬೆಂಕಿ ಹಚ್ಚುವುದನ್ನು ಕಾಣಬಹುದಾಗಿತ್ತು. 

Terror Attack ಜಮ್ಮು ಕಾಶ್ಮೀರದಲ್ಲಿ ಮತ್ತೆ ಪಂಡಿತರ ಮೇಲೆ ದಾಳಿ, ಉಗ್ರರ ಗುಂಡಿಗೆ ಪಂಡಿತ್ ಬಲಿ!

ತಹಸಿಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ಭಟ್ ಟಾರ್ಗೆಟ್ ಮಾಡಿದ್ದ ಉಗ್ರರು, ನೇರವಾಗಿ ಕಚೇರಿಗ ನುಗ್ಗಿ ರಾಹುಲ್ ಭಟ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕಚೇರಿಯಲ್ಲಿದ್ದ ಸಿಬ್ಬಂದಿಗಳು, ನಾಗರೀಕರು ಭಯಭೀತರಾಗಿ ಹೊರಗೆ ಬಂದಿದ್ದಾರೆ. ಇದರಿಂದ ಉಗ್ರರು ಸುಲಭವಾಗಿ ತಪ್ಪಿಸಿಕೊಂಡಿದ್ದರು.

ಗೆದ್ದ ಮಾನವೀಯತೆ: ಕಾಶ್ಮೀರಿ ಪಂಡಿತ್ ಮಹಿಳೆಯ ಅಂತ್ಯಕ್ರಿಯೆಗೆ ಸಹಾಯ ಮಾಡಿದ ಮುಸ್ಲಿಂ ವ್ಯಕ್ತಿ!

ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಹುಲ್ ಭಟ್‌ನನ್ನು SMHS ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬದುಕುಳಿಯಲಿಲ್ಲ. ಕಾಶ್ಮೀರದಲ್ಲಿ ಉಗ್ರರು ಮತ್ತೆ ಪಂಡಿತ್ ಹಾಗೂ ಹಿಂದೂ ಸಮುದಾಯವನ್ನು ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದ್ದಾರೆ. ಜಿಹಾದಿ ನಿಲ್ಲದವರೆಗೆ ಈ ದಾಳಿಗಳು ನಿಲ್ಲುವುದಿಲ್ಲ. ಕಾಶ್ಮೀರ ಪಂಡಿತರ ಮೇಲೆ ನಿರಂತರ ದಾಳಿಗಳು ನಡೆಯುತ್ತಲೇ ಇದೆ. ದಾಳಿಕೋರರು, ಮೊಘಲರು, ಬ್ರಿಟೀಷರ ಆಡಳಿತದಲ್ಲಿ ಹಾಗೂ ಸ್ವತಂತ್ರ ಭಾರತದಲ್ಲೂ ಕಾಶ್ಮೀರ ಪಂಡಿತರ ಮೇಲೆ ದಾಳಿ ನಡೆಯುತ್ತಿದೆ. 1990ರ ಹತ್ಯಾಕಾಂಡ ಕಣ್ಣಮುಂದಿದೆ. ಆದರೂ ಪಂಡಿತರಿಗೆ ಭದ್ರತೆ ಸಿಕ್ಕಿಲ್ಲ. ತಕ್ಷಣವೇ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬ್ರೇಕ್ ಹಾಕಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸುಶೀಲ್ ಪಂಡಿತ್ ಆಗ್ರಹಿಸಿದ್ದಾರೆ.

Follow Us:
Download App:
  • android
  • ios