Asianet Suvarna News Asianet Suvarna News

ಪುಲ್ವಾಮಾದಲ್ಲಿ ಎನ್‌ಕೌಂಟರ್‌: ಯೋಧ ಹುತಾತ್ಮ, ಮುಂದುವರೆದ ಕಾರ್ಯಾಚರಣೆ!

* ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಎನ್‌ಕೌಂಟರ್

* ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮ

* ಸ್ಥಳದಲ್ಲಿ ನಾಲ್ಕು ಜನ ಭಯೋತ್ಪಾದಕರು ಬೀಡು

Indian Army jawan martyred in encounter with terrorists in Jammu Kashmir Pulwama pod
Author
Bangalore, First Published Jul 2, 2021, 11:52 AM IST
  • Facebook
  • Twitter
  • Whatsapp

ಪುಲ್ವಾಮಾ(ಜು.02): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ತಡರಾತ್ರಿ ಪ್ರಾರಂಭವಾದ ಭದ್ರತಾ ಪಡೆ ಹಾಗೂ ಉಗ್ರರ ನಡುವಿನ ಎನ್ಕೌಂಟರ್‌ ಮುಂದುವರೆದಿದೆ. ಘರ್ಷಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ನಾಲ್ವರು ಉಗ್ರರು ಸಿಕ್ಕಾಕೊಂಡಿದ್ದಾರೆ. ಉಗ್ರರಿಗೆ ಶರಣಾಗುವಂತೆ ಕೇಳಿಕೊಳ್ಳಲಾಗಿತ್ತು, ಆದರೆ ಇದಕ್ಕೊಪ್ಪದೇ ದಾಳಿ ನಡೆಸಿದ್ದಾರೆ. ಹೀಗಿರುವಾಗ ಭದ್ರತಾ ಪಡೆಗಳೂ ದಾಳಿ ನಡೆಸಿವೆ ಎನ್ನಲಾಗಿದೆ.

ಭಯೋತ್ಪಾದಕರ ಜೊತೆಗಿನ ಕಾಳಗದಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ಖಚಿತಪಡಿಸಿದೆ. ಕಾಶ್ಮೀರ ಪೊಲೀಸ್ ಅಧಿಕಾರಿಗಳೂ ಈ ಬಗ್ಗೆ ಮಾಹಿತಿ ನೀಡಿದ್ದು, ಯೋಧನಿಗೆ ಗುಂಡು ತಗಲಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಧರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. 

ಶ್ರೀನಗರ ಎನ್‌ಕೌಂಟರ್‌ನಲ್ಲಿ CRPF ಯೋಧರಿಗೆ ಗಾಯ, ಬೆಚ್ಚಿ ಬೀಳಿಸುವ ಗುಂಡಿನ ಚಕಮಕಿ ವಿಡಿಯೋ!

ಪುಲ್ವಾಮಾ ಜಿಲ್ಲೆಯ ರಾಜ್‌ಪೋರಾ ಪ್ರದೇಶದ ಹಂಜನ್ ಬಾಲಾದಲ್ಲಿ ಭಯೋತ್ಪಾದಕರು ಬೀಡುಬಿಟ್ಟಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿತ್ತು.  ಈ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಭಯೋತ್ಪಾದಕ ದಾಳಿಗೆ ಭದ್ರತಾ ಪಡೆಗಳು ಕೂಡಾ ಪ್ರತಿದಾಳಿ ಮೂಲಕ ಸೂಕ್ತ ಉತ್ತರವನ್ನೇ  ನೀಡಿವೆ. ಮೂರು ದಿನಗಳ ಹಿಂದೆ, ಜಮ್ಮು ಮತ್ತು ಕಾಶ್ಮೀರದ ಪರಿಂಪೋರಾ ಪ್ರದೇಶದಲ್ಲಿ ನಡೆದ ಘರ್ಷಣೆ ವೇಳೆ ಕೂಡಾ  ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಅವರಲ್ಲಿ  ಒಬ್ಬ ಲಷ್ಕರ್-ಎ-ತೊಯ್ಬಾ ಕಮಾಂಡರ್ ನದೀಮ್ ಅಬ್ರಾರ್ ಮತ್ತು ಇನ್ನೊಬ್ಬ ಭಯೋತ್ಪಾದಕ ಪಾಕ್‌ ಪ್ರಜೆ ಎನ್ನಲಾಗಿದೆ. 

Follow Us:
Download App:
  • android
  • ios