ಡಿಜಿಎಂಒಗಳ ಮಾತುಕತೆ ನಂತರ, ಸಾಂಬಾದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಭಾರತ ಹೊಡೆದುರುಳಿಸಿದೆ.

ಸಾಂಬಾದಲ್ಲಿ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಲಾಗಿದೆ: ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮದ ನಂತರ, ಎರಡೂ ದೇಶಗಳ ಡಿಜಿಎಂಒಗಳ ನಡುವಿನ ಮಾತುಕತೆಯ ಕೆಲವೇ ಗಂಟೆಗಳಲ್ಲಿ, ಪಾಕಿಸ್ತಾನವು ಮತ್ತೆ ಭಾರತೀಯ ಗಡಿಯಲ್ಲಿ ಡ್ರೋನ್ ಮೂಲಕ ದಾಳಿ ಮಾಡಲು ಪ್ರಯತ್ನಿಸಿದೆ. ಸಾಂಬಾದಲ್ಲಿ ಕಾಣಿಸಿಕೊಂಡ ಪಾಕಿಸ್ತಾನಿ ಡ್ರೋನ್ ಅನ್ನು ಭಾರತೀಯ ವಾಯು ರಕ್ಷಣಾ ಪಡೆ ಹೊಡೆದುರುಳಿಸಿದೆ. ಮುಂಜಾಗ್ರತ ಕ್ರಮವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಸದ್ಯ ಯಾವುದೇ ಡ್ರೋನ್ ಕಾಣಿಸಿಲ್ಲ ಎಂದು ಭಾರತೀಯ ಸೇನೆ ಹೇಳಿದೆ. 

ಸೋಮವಾರ ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಬಹುನಿರೀಕ್ಷಿತ ಮಾತುಕತೆ ಪೂರ್ಣಗೊಂಡಿತು. ಮೂಲಗಳ ಪ್ರಕಾರ, ಪಾಕಿಸ್ತಾನಿ ಡಿಜಿಎಂಒ ಅವರ ಉಪಕ್ರಮದ ಮೇರೆಗೆ ಶನಿವಾರ ಹಾಟ್‌ಲೈನ್ ಕರೆಯ ಮೂಲಕ ಎರಡೂ ಕಡೆಯವರ ನಡುವೆ ಮಾತುಕತೆಗೆ ದಾರಿ ಮಾಡಿಕೊಡಲಾಯಿತು.ಭಾರತದ ಪರವಾಗಿ ಲೆಫ್ಟಿನೆಂಟ್ ಜನರಲ್ ರಾಜೀವ್ ಘೈ ಮಾಧ್ಯಮಗಳಿಗೆ ತಿಳಿಸಿದರು, ಪಾಕಿಸ್ತಾನ 'ಗುಂಡಿನ ದಾಳಿ ನಿಲ್ಲಿಸಲು ಮತ್ತು ಮಿಲಿಟರಿ ಕಾರ್ಯಾಚರಣೆ ಕೊನೆಗೊಳಿಸಲು' ಪ್ರಸ್ತಾಪಿಸಿದೆ. ಉಲ್ಲಂಘನೆ ಮರುಕಳಿಸಿದರೆ 'ತೀವ್ರ' ಪ್ರತಿಕ್ರಿಯೆ ನೀಡಲಾಗುವುದು ಎಂದು ಭಾರತ ಸ್ಪಷ್ಟಪಡಿಸಿದೆ.

ಭಾರತ-ಪಾಕ್ ಯುದ್ಧ ಹಿನ್ನೆಲೆ ಏನು?: 
ಏಪ್ರಿಲ್ 22, 2025ರಂದು ಭಾರತದ ಮುಕುಟಮಣಿ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಬ್ಬರು ಕನ್ನಡಿಗರು ಸೇರಿ 26 ಹಿಂದೂಗಳನ್ನು ಧರ್ಮ ಕೇಳಿ ಬಲಿ ಪಡೆದ ಪ್ರತೀಕಾರವಾಗಿ ಪಾಕಿಸ್ತಾನಕ್ಕೆ ಆಪರೇಷನ್ ಸಿಂದೂರದ ಮೂಲಕ ಮೇ 7, 2025ರಂದು ತಕ್ಕ ಪ್ರತೀಕಾರ ತೋರಿದೆ. ನಾಗರಿಕರ ಪ್ರಾಣಕ್ಕೆ ಹಾನಿಯಾಗದಂತೆ ಪಾಕ್ ಉಗ್ರರ ಅಡಗು ತಾಣಗಳ ಮೇಲೆ ಭಾರತ ದಾಳಿ ನಡೆಸಿ, 9 ಉಗ್ರ ತಾಣಗಳನ್ನು ನಾಶ ಪಡಿಸಿದೆ. ಅಷ್ಟೇ ಅಲ್ಲ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕ.ಸೋಫಿಯಾ ಖುರೇಷಿ ಮೂಲಕ ಭಾರತೀಯ ಮಹಿಳೆಯ ಸಿಂಧೂರ ಕಿತ್ತು ಕೊಂಡಿದ್ದಕ್ಕೆ ಪ್ರತೀಕಾರವಾಗಿ ತೆಗೆದುಕೊಂಡ ಕ್ರಮಕ್ಕೆ ಇಡೀ ಜಗತ್ತಿಗೆ ಮಹಿಳೆಯರ ನೇತೃತ್ವದಲ್ಲಿಯೇ ಪ್ರತೀಕಾರ ತೀರಿಸಿದೆ. ಇಡೀ ಜಗತ್ತಿಗೆ ಈ ಮಹಿಳಾ ನಾಯಕರಿಂದಲೇ ಪತ್ರಿಕಾ ಗೋಷ್ಠಿ ಮಾಡಿಸಿ ಹೇಳಿದ್ದು ದೇಶದ ನಾರಿ ಶಕ್ತಿ ಸಾಮರ್ಥ್ಯವನ್ನು ಸಾರಿ ಸಾರಿ ಹೇಳಿದಂತಾಗಿದೆ. ಅಷ್ಟೇ ಅಲ್ಲ ಹಿಂದೂ ಎನ್ನುವ ಕಾರಣಕ್ಕೆ 26 ಅಮಾಯಕಕನ್ನು ಬಲಿ ಪಡೆದಿದ್ದಕ್ಕೆ ಪ್ರತೀಕಾರವಾಗಿ ಹಿಂದು-ಮುಸ್ಲಿಂ ಜಂಟಿಯಾಗಿಯೇ ನಡೆದ ಕಾರ್ಯಾಚರಣೆ ಬಗ್ಗೆ ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿ, ದೇಶದ ಭದ್ರತಾ ವಿಷಯವಾಗಿ ಬಂದಾಗ ಭಾರತದಲ್ಲಿ ಮಹಿಳೆಯರೊಡಗೂಡಿ ಹಿಂದೂ-ಮುಸ್ಲಿಂ ಎಂದೆಂದಿಗೂ ಒಂದೇ ಎಂದು ಜಗತ್ತಿಗೆ ಸಾರಿ ಹೇಳಿದ ಭಾರತದ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ. 

ಭಾರತ ಅಳವಡಿಸಿಕೊಂಡಿರುವ ರಷ್ಯಾದ ಎಸ್‌-400 ಏರ್‌ ಡಿಫೆನ್ಸ್‌ ಸಿಸ್ಟಮ್ಸ್‌ ಪಾಕಿಸ್ತಾನದ ಪಾಲಿಗೆ ದುಸ್ವಪ್ನವಾಗಿದೆ. ಭಾರತದ 15 ನಗರಗಳ ಮಿಲಿಟರಿ ಮತ್ತು ರೇಡಾರ್‌ ವ್ಯವಸ್ಥೆಗಳನ್ನು ಗುರಿಯಾಗಿರಿಸಿಕೊಂಡು ಪಾಕ್ ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿದರೂ ಅವುಗಳನ್ನೆಲ್ಲ ಆಗಸದಲ್ಲೇ ಕರಾರುವಕ್ಕಾಗಿ ಹೊಡೆದುರುಳಿಸುವಲ್ಲಿ ಈ ರಕ್ಷಣಾ ವ್ಯವಸ್ಥೆ ಯಶಸ್ವಿಯಾಗಿದೆ. ಇದು ಪಾಕಿಸ್ತಾನಕ್ಕೆ ತೀವ್ರ ಮುಖಭಂಗವನ್ನುಂಟುಮಾಡಿದೆ. 'ಸುದರ್ಶನ ಚಕ್ರ' ಎಂದೇ ಕರೆಯಲ್ಪಡುವ ಈ ಏರ್‌ ಡಿಫೆನ್ಸ್‌ ಸಿಸ್ಟಮ್‌ ಭಾರತದ ಪಾಲಿನ ರಕ್ಷಾ ಕವಚವಾಗಿದೆ. ವಿಶ್ವದಲ್ಲೇ ಅತ್ಯಾಧುನಿಕ ಎನ್ನಲಾದ ಈ ರಕ್ಷಣಾ ವ್ಯವಸ್ಥೆ 600 ಕಿ.ಮೀ.ದೂರದಿಂದಲೇ ತನ್ನನ್ನ ಬರುವ ಗುರಿಯನ್ನು ಗುರುತಿಸಿ, 400 ಕಿ.ಮೀ.ದ ದೂರದಲ್ಲೇ ಅವುಗಳನ್ನು ಹೊಡೆದುರುಳಿಸಬಲ್ಲದು. ಭಾರತ ಇಂಥ ನಾಲ್ಕು ಎಸ್‌-400 ಡಿಫೆನ್ಸ್‌ ಸಿಸ್ಟಮ್ ಅನ್ನು ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌, ರಾಜಸ್ಥಾನ ಮತ್ತು ಗುಜರಾತ್‌ನ ರಕ್ಷಣೆಗಾಗಿ ನಿಯೋಜಿಸಿದೆ.

ಭಾರತ-ಫಾಕಿಸ್ತಾನ ಸಂಘರ್ಷದ ಪ್ರತಿ ಕ್ಷಣದ ಮಾಹಿತಿಗಾಗಿ ಸುವರ್ಣ ನ್ಯೂಸ್‌ಗೆ ಟ್ಯೂನ್ ಆಗಿರಿ.

Scroll to load tweet…
Scroll to load tweet…