ಜಾಗತಿಕವಾಗಿ ಭಾರತ ಅತ್ಯಂತ ಪ್ರಭಾವಶಾಲಿ ದೇಶವಾಗಿ ಹೊರಹೊಮ್ಮಿದೆ. ಮತ್ತೊಮ್ಮೆ ಭಾರತ ಸಂಕಷ್ಟಕ್ಕೆ ಸಿಲುಕಿದ ಭಾರತೀಯರನ್ನು ಸುರಕ್ಷಿತವಾಗಿ ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಇಸ್ರೇನ್ ಮೇಲಿನ ಯುದ್ದದ ನಡುವೆ ಇರಾನ್ ವಶಪಡಿಸಿದ ಹಡಗಿನಲ್ಲಿದ್ದ ಭಾರತದ ಮಹಿಳಾ ಸಿಬ್ಬಂದಿ ತವರಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ನವದೆಹಲಿ(ಏ.18) ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಹಲವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇರಾನ್ ಸತತವಾಗಿ ದಾಳಿ ನಡೆಸುತ್ತಿದೆ. ಈ ದಾಳಿಗೂ ಮೊದಲು ಇಸ್ರೇಲ್ ಮೂಲದ ಹಡಗಿನ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿತ್ತು. ಈ ಹಡಗಿನಲ್ಲಿ 17 ಭಾರತೀಯ ಸಿಬ್ಬಂದಿಗಳು ಸಿಲುಕಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಭಾರತ, ರಾಜತಾಂತ್ರಿಕ ಮಾತುಕತೆ ನಡೆಸಿ ಇದೀಗ ಈ ಹಡಗಿನಲ್ಲಿದ್ದ ಭಾರತೀಯ ಮಹಿಳಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ತವರಿಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಕೇರಳದ ತ್ರಿಶೂರು ಮೂಲದ ಆ್ಯನ್ ತೀಸಾ ಜೊಸೆಫ್ ಮನೆಗೆ ಮರಳಿದ್ದಾರೆ. ಕುಟುಂಬದ ಸಂತಸ ಇಮ್ಮಡಿಗೊಂಡಿದೆ.
ಈ ಕುರಿತು ಮಾಹಿತಿ ಹಂಚಿಕೊಂಡ ಭಾರತೀಯ ವಿದೇಶಾಂಗ ಇಲಾಖೆ, ಇರಾನ್ ವಶಪಡಿಸಿದ ಸರಕು ಹಡಗಿನಲ್ಲಿದ್ದ ಮಹಿಳಾ ಸಿಬ್ಬಂದಿ ಆ್ಯನ್ ತೀಸಾ ಜೊಸೆಫ್ ಸುರಕ್ಷಿತವಾಗಿ ಮನಗೆ ಮರಳಿದ್ದಾರೆ. ಇರಾನ್ ಆಧಿಕಾರಿಗಳಿಗೆ ಧನ್ಯವಾದ. ಇನ್ನುಳಿದ ಭಾರತೀಯರ ಬಿಡುಗಡೆಗೆ ಇರಾನ್ ಅಧಿಕಾರಿಗಳ ಜೊತೆ ನಿರಂತರ ಮಾತುಕತೆ ನಡೆಯುತ್ತಿದೆ ಎಂದು ಟ್ವೀಟ್ ಮಾಡಿದೆ.
ಭಾರತಕ್ಕೆ ರಾಜತಾಂತ್ರಿಕ ಗೆಲುವು, ಇರಾನ್ ವಶಪಡಿಸಿದ ಹಡಗಿನಲ್ಲಿದ್ದ 17 ಭಾರತೀಯರ ಭೇಟಿಗೆ ಅವಕಾಶ!
ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು, ಇರಾನ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಭಾರತ ವಿದೇಶಾಂಗ ಇಲಾಖೆ ಭಾರತೀಯರ ಸುರಕ್ಷಿತ ಬಿಡುಗಡೆ ಒತ್ತಾಯಿಸಿತ್ತು. ರಾಜತಾಂತ್ರಿಕ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿತ್ತು. ಇದರ ಪರಿಣಾಮ ಭಾರತೀಯ ಮಹಿಳಾ ಸಿಬ್ಬಂದಿಯನ್ನು ಇರಾನ್ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದೆ.
