ಸೇನಾ ನೇಮಕಾತಿಗೆ ಕೇಂದ್ರದಿಂದ ಅಗ್ನಿಪಥ ಯೋಜನೆ ಘೋಷಣೆ ಯೋಜನೆ ವಿರುದ್ಧ ದೇಶದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರತಿಭಟನೆ, ರೈಲಿಗೆ ಬೆಂಕಿ ತೀವ್ರ ಪ್ರತಿಭಟನೆಯಿಂದ 200ಕ್ಕೂ ಹೆಚ್ಚು ರೈಲು ಸಂಚಾರ ವ್ಯತ್ಯಯ
ನವದೆಹಲಿ(ಜೂ.17): ದೇಶದ ಯುವಕರಿಗೆ ಸೇನೆ ಸೇರಲು ಹೊಸ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಹೊಸ ಅಗ್ನಿಪಥ ಯೋಜನೆ ಘೋಷಿಸಿದೆ. ಈ ಘೋಷಣೆ ದೇಶದಲ್ಲಿ ಮತ್ತೊಂದು ಸುತ್ತಿನ ಪ್ರತಿಭಟನೆಗೆ ಕಾರಣವಾಗಿದೆ. ಉತ್ತರ ಪ್ರದೇಶ, ಬಿಹಾರ, ಹರ್ಯಾಣ, ತೆಲಂಗಾಣ ಸೇರಿದಂತೆ ಕೆಲ ರಾಜ್ಯಗಳು ಹೊತ್ತಿ ಉರಿಯುತ್ತಿದೆ. ರೈಲು, ಬಸ್ ಸೇರಿದಂತೆ ವಾಹನಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮ ದೇಶದ ಸುಮಾರು 200ಕ್ಕೂ ಹೆಚ್ಚು ರೈಲು ಸಂಚಾರ ಸ್ಥಗಿತಗೊಂಡಿದೆ.
ಸೇನೆ ಸೇರಲು ಬಯಸಿದ ಹಲವು ಯುವಕರು ಹೊಸ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈಲು ನಿಲ್ದಾಣಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ರೈಲುಗಳಿಗೆ ಬೆಂಕಿ ಹಚ್ಚಿದ್ದಾರೆ. ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಇದರಿಂದ 200ಕ್ಕೂ ಹೆಚ್ಚು ರೈಲು ಸಂಚಾರ ವ್ಯತ್ಯಯವಾಗಿದೆ. 35ಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ.
ಸೇನೆಗೆ ಪುಂಡರ ಅಗತ್ಯವಿಲ್ಲ, ರೈಲನ್ನು ಸುಡುವ ವ್ಯಕ್ತಿಗಳು ಆರ್ಮಿಗೆ ಸೂಕ್ತರಲ್ಲ ಎಂದ ಮಾಜಿ ಸೇನಾಧಿಕಾರಿ!
13 ಕ್ಕೂ ಹೆಚ್ಟು ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಹರ್ಯಾಣ, ಬಿಹಾರ ಸೇರಿದಂತೆ ಕಲ ರಾಜ್ಯಗಳ ರೈಲು ಸಂಚಾರ ಬಹುತೇಕ ವ್ಯತ್ಯಯವಾಗಿದೆ. ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣ ಸಂಪೂರ್ಣ ಭಸ್ಮವಾಗಿದೆ. ಹೀಗಾಗಿ ಹೈದರಾಬಾದ್- ಸಿಂಗಪಲ್ಲಿ ಸೇರಿದಂತೆ ಹಲವು ರೈಲುಗಳುನ್ನು ಸ್ಥಗಿತಗೊಳಿಸಲಾಗಿದೆ.
ಅಗ್ನಿಪಥ ಯೋಜನೆ ವಿರೋಧಿಸಿ ಬಿಹಾರದಲ್ಲಿ ಬುಧವಾರ ಆರಂಭವಾಗಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದೆ. ಜೆಹಾನಾಬಾದ್, ಬಕ್ಸರ್, ನವಾಡಾ ಜಿಲ್ಲೆಗಳಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರು ಭಭುವಾ ಮತ್ತು ಛಪ್ರಾ ರೈಲು ನಿಲ್ದಾಣಗಳ ಮೇಲೆ ದಾಳಿ ನಡೆಸಿ, ಕಟ್ಟಡ ಮತ್ತು ರೈಲುಗಳಿಗೆ ಬೆಂಕಿ ಹಚ್ಚಿದ್ದಾರೆ. ಜೆಹನಾಬಾದ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಡ್ಡಗಟ್ಟಿದ ಪ್ರತಿಭಟನಾಕಾರರು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಜೊತೆಗೆ ಇತರೆ ಹಲವು ನಗರಗಳಲ್ಲಿ ವಾಹನಗಳ ಮೇಲೆ ದಾಳಿ ನಡೆಸಲಾಗಿದೆ. ಮತ್ತೊಂದೆಡೆ ನವಾಡದಲ್ಲಿ ಬಿಜೆಪಿ ಶಾಸಕಿ ಅರುಣಾ ದೇವಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಘಟನೆಯಲ್ಲಿ ಶಾಸಕಿ ಸೇರಿ 5 ಜನರು ಗಾಯಗೊಂಡಿದ್ದಾರೆ.
ಏನಿದು ಅಗ್ನಿಪಥ ಯೋಜನೆ? ಯಾರೆಲ್ಲ ಅಗ್ನಿವೀರ್ ಆಗಬಹುದು? ಅರ್ಹತೆ ಏನು? ವೇತನ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ
ಮತ್ತೊಂದೆಡೆ ಉತ್ತರಪ್ರದೇಶದ ಬುಲಂದ್‌ಶಹರ್, ಬಲಿಯಾ, ಹರ್ಯಾಣದ ಗುರುಗ್ರಾಮ, ರೆವಾರಿ, ರಾಜಸ್ಥಾನದ ಜೋಧ್‌ಪುರ, ಸಿಕಾರ್, ಜೈಪುರ, ನಾಗೌರ್, ಅಜ್ಮೇರ್, ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲೂ ಪ್ರತಿಭಟನೆ ನಡೆಸಲಾಗಿದೆ. ಮಧ್ಯಪ್ರದೇಶ ಬಿರ್ಲಾನಗರ್ ರೈಲ್ವೆ ನಿಲ್ದಾಣದ ಮೇಲೆ ದಾಳಿ ನಡೆಸಿರುವ ಪ್ರತಿಭಟನಾಕಾರರು, ಕಟ್ಟಡ ಮತ್ತು ರೈಲಿಗೆ ಬೆಂಕಿ ಹಚ್ಚಿದ್ದಾರೆ. ಸ್ಟೇಷನ್ ಮಾಸ್ಟರ್ ಕೊಠಡಿ ಧ್ವಂಸಗೊಳಿಸಿ ಕಂಟ್ರೋಲ್ ಸಿಸ್ಟಂಗೂ ಹಾನಿ ಮಾಡಿದ್ದಾರೆ. ಇದಲ್ಲದೆ ದೆಹಲಿಯ ನನ್‌ಗ್ಲೋಯ್ ರೈಲ್ವೆ ನಿಲ್ದಾಣ ಮತ್ತು ಹಿಮಾಚಲ ಪ್ರದೇಶದ ಗಗ್ಗಾಲ್‌ನಲ್ಲೂ ಪ್ರತಿಭಟನೆ ನಡೆಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ವೃತ್ತಿಪರ ಸೈನ್ಯವನ್ನು ಬೆಳೆಸುವ ಬದಲು, ಪಿಂಚಣಿ ಹಣವನ್ನು ಉಳಿಸಲು ಒಪ್ಪಂದದ ಮೇಲೆ ಸೈನಿಕರನ್ನು ನೇಮಕ ಪ್ರಸ್ತಾಪಿಸುವ ಈ ಅಗ್ನಿಪಥ್ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಬಸವರಾಜ ಭೋವಿ ಆಗ್ರಹಿಸಿದ್ದಾರೆ.
