ನವದೆಹಲಿ(ಮೇ.11): ಕಳೆದ ವರ್ಷದ ಮಾರ್ಚ್‌ನಿಂದ ಈವರೆಗೆ ಭಾರತೀಯ ರೈಲ್ವೆ 1,952 ಉದ್ಯೋಗಿಗಳು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ನಿತ್ಯ ಸುಮಾರು 1,000 ಮಂದಿ ಸೋಂಕಿಗೆ ತುತ್ತಾಗುತ್ತಿದ್ದಾರೆ ಎಂದು ರೈಲ್ವೆ ಬೋರ್ಡ್‌ ಮುಖ್ಯಸ್ಥ ಸುನೀತ್‌ ಶರ್ಮಾ ಅವರು ಸೋಮವಾರ ತಿಳಿಸಿದ್ದಾರೆ.

ರೈಲ್ವೆ ಮಂಡಳಿ ಅಧ್ಯಕ್ಷ ಸುನೀತ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದು ರೈಲ್ವೆ ಕೂಡಾ ಯಾವುದೇ ರಾಜ್ಯ ಅಥವಾ ಪ್ರದೇಶಕ್ಕಿಂತ ಭಿನ್ನವಾಗಿಲ್ಲ. ಯಾಕೆಂದರೆ ನಾವು ಕೂಡಾ ಕೋವಿಡ್ 19 ಸೋಂಕಿಗೆ ಒಳಗಾಗುತ್ತೇವೆ. ನಮ್ಮದು ವಾಣಿಜ್ಯ ಉದ್ದೇಶದ ಸಾರಿಗೆ ವ್ಯವಸ್ಥೆ. ನಾವು ಸರಕು ಮತ್ತು ಜನರನ್ನು ಸಾಗಿಸುತ್ತೇವೆ. ಹೀಗೆ ದಿನಂಪ್ರತಿ ಒಂದು ಸಾವಿರ ಕೋವಿಡ್ 19 ಸೋಂಕು ಪ್ರಕರಣ ವರದಿಯಾಗುತ್ತಿದೆ ಎಂದಿದ್ದಾರೆ.

ಹಿರಿಯರಾ? ಯುವಕರಾ?: ಯಾರ ಜೀವ ಉಳಿಸೋದು? ನೈತಿಕ ಸಂದಿಗ್ಧತೆಯಲ್ಲಿ ವೈದ್ಯ ಸಮೂಹ!

ರೈಲ್ವೆ ದೇಶದಲ್ಲಿ ಮಾತ್ರವಲ್ಲ ಇಡೀ ಜಗತ್ತಿನಲ್ಲಿಯೇ ಅತೀ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಇಲಾಖೆಯಾಗಿದ್ದು, ಅಂದಾಜು 13 ಲಕ್ಷ ಉದ್ಯೋಗಿಗಳು ಇರುವುದಾಗಿ ವಿವರಿಸಿದೆ. ನಮ್ಮಲ್ಲಿ ಆಸ್ಪತ್ರೆಗಳಿವೆ, ನಾವು ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೇವೆ, ರೈಲ್ವೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲ್ಯಾಂಟ್ ಸಿದ್ದಪಡಿಸುತ್ತಿದ್ದೇವೆ. ರೈಲ್ವೆ ಇಲಾಖೆಯ ಆಸ್ಪತ್ರೆ ಇದೆ. ಆಮ್ಲಜನಕ ಘಟಕ ಇದೆ. ಉದ್ಯೋಗಿಗಳ ಯೋಗಕ್ಷೇಮ ನೋಡಿಕೊಳ್ಳಲಾಗುತ್ತಿದೆ. ಉದ್ಯೋಗಿಗಳು ಮತ್ತು ಕುಟುಂಬದವರ ಸೇರಿ 4000 ಹಾಸಿಗೆಗಳು ಭರ್ತಿಯಾಗಿವೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ನಾವು ನಮ್ಮ ಸಿಬಂದಿಗಳ ಸುರಕ್ಷತೆ ಬಗ್ಗೆ ಒತ್ತು ನೀಡುತ್ತಿದ್ದೇವೆ ಎಂದು ಹೇಳಿದರು. ಆದರೂ ಕಳೆದ ವರ್ಷ ಮಾರ್ಚ್ ನಿಂದ ಈವರೆಗೆ ಕೋವಿಡ್ ಸೋಂಕಿನಿಂದ 1,952 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಎಂದೂ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona