Asianet Suvarna News Asianet Suvarna News

Covid Crisis: 1.07 ಲಕ್ಷ ಹೊಸ ಕೋವಿಡ್‌ ಕೇಸು: 1 ತಿಂಗಳ ಕನಿಷ್ಠ

ಕೋವಿಡ್‌ ಪ್ರಕರಣಗಳ ಇಳಿಕೆ ಪ್ರವೃತ್ತಿ ಮುಂದುವರಿದಿದೆ. ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 1.07 ಲಕ್ಷ ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 1 ತಿಂಗಳ ಕನಿಷ್ಠ ಸಂಖ್ಯೆಯಾಗಿದೆ. ಇನ್ನು ಇದೇ ಅವಧಿಯಲ್ಲಿ 865 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Indias Daily Covid Cases Drop Below 1 Lakh 83 876 After A Month gvd
Author
Bangalore, First Published Feb 7, 2022, 11:27 AM IST

ನವದೆಹಲಿ (ಫೆ.07): ಕೋವಿಡ್‌ ಪ್ರಕರಣಗಳ (Covid Cases) ಇಳಿಕೆ ಪ್ರವೃತ್ತಿ ಮುಂದುವರಿದಿದೆ. ದೇಶದಲ್ಲಿ ಭಾನುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 1.07 ಲಕ್ಷ ಹೊಸ ಕೊರೋನಾ ಪ್ರಕರಣಗಳು (Corona Positive) ದೃಢಪಟ್ಟಿವೆ. ಇದು ಕಳೆದ 1 ತಿಂಗಳ ಕನಿಷ್ಠ ಸಂಖ್ಯೆಯಾಗಿದೆ. ಇನ್ನು ಇದೇ ಅವಧಿಯಲ್ಲಿ 865 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಹೊಸ ಸೋಂಕಿತರೂ ಸೇರಿ ಸಕ್ರಿಯ ಸೋಂಕಿನ ಪ್ರಮಾಣ 12.25 ಲಕ್ಷಕ್ಕೆ ಇಳಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ.95.91ಕ್ಕೆ ಸುಧಾರಿಸಿದೆ. ದೈನಂದಿನ ಪಾಸಿಟಿವಿಟಿ ದರ ಶೇ.7.42ಕ್ಕೆ ತಗ್ಗಿದೆ. ಈ ನಡುವೆ 169.46 ಕೋಟಿ ಡೋಸ್‌ ಲಸಿಕೆ ವಿತರಣೆ ಮಾಡಲಾಗಿದೆ. ಹೊಸ ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4.21 ಕೋಟಿಗೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 4.04 ಕೋಟಿ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಸಾವಿಗೀಡಾದವರ ಸಂಖ್ಯೆ 5.01 ಲಕ್ಷಕ್ಕೆ ತಲುಪಿದೆ.

ಸಿಂಗಲ್‌ ಡೋಸ್‌ ಸ್ಪುಟ್ನಿಕ್‌ ಲೈಟ್‌ ಬಳಕೆಗೆ ಕೇಂದ್ರ ಅಸ್ತು: ಭಾರತದಲ್ಲಿ ಕೋವಿಡ್‌ 3ನೇ ಅಲೆ ಇಳಿಮುಖವಾಗುತ್ತಿದೆ. ಈ ನಡುವೆ ರಷ್ಯಾದ ಸ್ಪುಟ್ನಿಕ್‌ ಲೈಟ್‌ ಸಿಂಗಲ್‌ ಡೋಸ್‌ (Pputnik Light Single Dose Vaccine) ಕೋವಿಡ್‌-19 ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಭಾನುವಾರ ಅನುಮೋದನೆ ನೀಡಿದೆ. ಭಾರತೀಯ ಔಷಧ ನಿಯಂತ್ರಣದ ಪ್ರಾಧಿಕಾರ (ಡಿಸಿಜಿಐ)ದ ಅನುಮೋದನೆ ಮೂಲಕ ಭಾರತದಲ್ಲಿ ಕೊರೋನಾ ವಿರುದ್ಧದ 9ನೇ ಲಸಿಕೆ ಬಳಕೆಗೆ ಹಸಿರು ನಿಶಾನೆ ಲಭಿಸಿದಂತಾಗಿದೆ. ಇದು ಭಾರತದ ಲಸಿಕಾ ಅಭಿಯಾನಕ್ಕೆ ಮತ್ತಷ್ಟುಬಲ ನೀಡಲಿದೆ. ಸ್ಪುಟ್ನಿಕ್‌ ಲೈಟ್‌ ಕೊರೋನಾ ವಿರುದ್ಧ ಶೇ.65.4ರಷ್ಟುಪರಿಣಾಮಕಾರಿ ಎನ್ನಲಾಗಿದೆ.

Covid Crisis: 1.27 ಲಕ್ಷ ಕೋವಿಡ್‌ ಕೇಸು ದಾಖಲು: 1 ತಿಂಗಳ ಕನಿಷ್ಠ

ನಿರ್ಬಂಧ ಹಿಂತೆಗೆತ: ಮಧ್ಯಪ್ರದೇಶದಲ್ಲಿ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ, ಮದುವೆ ಕಾರ್ಯಕ್ರಮಗಳ ಮೇಲೆ ವಿಧಿಸಲಾಗಿದ್ದ 250 ಅತಿಥಿಗಳ ಮಿತಿಯನ್ನು ತೆಗೆದುಹಾಕಲಾಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan), ‘ನಿಮ್ಮೆಲ್ಲರಿಗೂ ಬಸಂತ ಪಂಚಮಿಯ ಶುಭಾಷಯಗಳು. ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣದಲ್ಲಿರುವುದು ತೃಪ್ತಿಯ ವಿಷಯವಾಗಿದೆ. 

ಆದ್ದರಿಂದ ಮದುವೆ ಮತ್ತು ಇನ್ನಿತರ ಸಮಾರಂಭಗಳ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಪಂಚಮಿ ದಿನದಿಂದ ತೆಗೆದು ಹಾಕಲಾಗುತ್ತಿದೆ. ಎಲ್ಲರೂ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ಅವರು ಟ್ವೀಟ್‌ (Tweet) ಮಾಡಿದ್ದಾರೆ. ಕೋವಿಡ್‌ ಸೋಂಕು ಹೆಚ್ಚಾಗಿದ್ದ ಕಾರಣ ಜ.15ರಿಂದ ಮದುವೆಗಳಲ್ಲಿ ಭಾಗವಹಿಸುವವವರ ಮೇಲಿನ ಮಿತಿಯನ್ನು 250ಕ್ಕೆ ನಿಗದಿ ಮಾಡಲಾಗಿತ್ತು.

5 ಲಕ್ಷ ಗಡಿ ದಾಟಿದ ಕೊರೋನಾ ಸಾವು: ಭಾರತದಲ್ಲಿ ಕೊರೋನಾ ಸಾಂಕ್ರಾಮಿಕಕ್ಕೆ ಬಲಿಯಾದವರ ಸಂಖ್ಯೆ ಶುಕ್ರವಾರಕ್ಕೆ 5 ಲಕ್ಷ ಗಡಿ ದಾಟಿದೆ. ಈ ಮೂಲಕ ಅಮೆರಿಕ, ಬ್ರೆಜಿಲ್‌ ಬಳಿಕ ಕೋವಿಡ್‌ ಸೋಂಕಿಗೆ ಅತಿ ಹೆಚ್ಚು ಜನರು ಮೃತಪಟ್ಟಮೂರನೇ ದೇಶವಾಗಿ ಭಾರತ ಮಾರ್ಪಟ್ಟಿದೆ. ಅಮೆರಿಕದಲ್ಲಿ ಈವರೆಗೆ 9.2 ಲಕ್ಷ ಮತ್ತು ಬ್ರೆಜಿಲ್‌ನಲ್ಲಿ 6.3 ಲಕ್ಷ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಶುಕ್ರವಾರ 1072 ಸಾವು ವರದಿ ಆಗುವ ಮೂಲಕ ಒಟ್ಟು ಸಾವಿನ ಸಂಖ್ಯೆ 5,00,055ಕ್ಕೆ ಏರಿಕೆ ಆಗಿದೆ.

Covid Crisis: ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಮತ್ತಷ್ಟು ಇಳಿಕೆ

ಭಾರತದಲ್ಲಿ ಮೊದಲ ಕೊರೋನಾ ಸಾವು 2020ರ ಮಾರ್ಚ್‌ 10ರಂದು ಕರ್ನಾಟಕದ ಕಲಬುರಗಿಯಲ್ಲಿ ಸಂಭವಿಸಿತ್ತು. ಕಳೆದ ಜು.1ರಂದು ಸಾವಿಗೀಡಾದವರ ಸಂಖ್ಯೆ 4 ಲಕ್ಷ ಗಡಿ ದಾಟಿತ್ತು. ಅನಂತರ 217 ದಿನಗಳ ಬಳಿಕ 4ರಿಂದ 5 ಲಕ್ಷ ಗಡಿ ದಾಟಿದೆ. ಕಳೆದ ಏಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿ ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿತ್ತು. ಸಾವಿನ ಪ್ರಮಾಣ ಕಳೆದ ಮೇ 23ರಂದು 3 ಲಕ್ಷ ಗಡಿದಾಟಿತ್ತು. ಮತ್ತು ಏ.27ರಂದು 2 ಲಕ್ಷ ಗಡಿ ದಾಟಿತ್ತು. ಇದಕ್ಕೆ ಹೋಲಿಸಿದರೆ 4ರಿಂದ 5 ಲಕ್ಷಕ್ಕೆ ತಲುಪಲು ಅತ್ಯಂತ ಸುದೀರ್ಘ ಕಾಲ ಹಿಡಿದಿದೆ.

Latest Videos
Follow Us:
Download App:
  • android
  • ios