ಭೂಮಿಯನ್ನು ಕಬಳಿಸುವ ಉದ್ದೇಶದಿಂದ ಬುಡಕಟ್ಟು ಮಹಿಳೆಯರನ್ನು ಮದುವೆಯಾಗುತ್ತಿರುವ ನುಸುಳುಕೋರರ ಕುರಿತು ಜಾರ್ಖಂಡ್‌ ಸರ್ಕಾರ ನಿಗಾ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ರಾಂಚಿ: ಭೂಮಿಯನ್ನು ಕಬಳಿಸುವ ಉದ್ದೇಶದಿಂದ ಬುಡಕಟ್ಟು ಮಹಿಳೆಯರನ್ನು ಮದುವೆಯಾಗುತ್ತಿರುವ ನುಸುಳುಕೋರರ ಕುರಿತು ಜಾರ್ಖಂಡ್‌ ಸರ್ಕಾರ ನಿಗಾ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ ಜಿಲ್ಲೆಯಲ್ಲಿನ ಚೈಬಾಸಾದಲ್ಲಿ ವಿಜಯ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, 'ರಾಜ್ಯದಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದೆ, ಆದಿವಾಸಿಗಳ ಭೂಮಿಯನ್ನು ನುಸುಳುಕೋರರಿಗೆ ಹಸ್ತಾಂತರಿಸಲಾಗುತ್ತಿದೆ ಜೆಎಂಎಂ ಸರ್ಕಾರ ಜಾರ್ಖಂಡನ್ನು ನಾಶಪಡಿಸುತ್ತಿದೆ. ರಾಜ್ಯದಲ್ಲಿ ಸರ್ಕಾರ ಖನಿಜ ಸಂಪನ್ಮೂಲಗಳನ್ನು ಲೂಟಿ ಮಾಡುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಆದಿವಾಸಿಗಳಿಗೆ ದ್ರೋಹ ಮಾಡುತ್ತಿದೆ' ಎಂದು ಹೇಮಂತ್‌ ಸೋರೆನ್‌ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 2024ರ ಚುನಾವಣೆಯಲ್ಲಿ ರಾಜ್ಯದ ಒಟ್ಟು 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

5 ನುಸುಳುಕೋರರ ಹತ್ಯೆ: ಗಡಿಯಲ್ಲಿ ಇಷ್ಟು ದೊಡ್ಡ ಬೇಟೆ ದಶಕದಲ್ಲೇ ಫಸ್ಟ್‌!

'ಮುಸ್ಲಿಮರನ್ನು ಯಾಕೆ ನುಸುಳುಕೋರರು ಎನ್ನು​ತ್ತೀ​ರಿ?'