ನವದೆಹಲಿ, [ಜ.22]: ಅತ್ಯಾಚಾರ ಹಾಗೂ ದೇಣಿಗೆ ಸಂಗ್ರಹಕ್ಕೆ ಮಕ್ಕಳ ಬಳಕೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ವಿರುದ್ಧ ಇಂಟರ್‌ಪೋಲ್‌ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಿದೆ.

ಬಂಧನ ಪಾರಾಗಲು ವಿದೇಶದಲ್ಲಿ ತಲೆಮರೆಸಿಕೊಂಡಿರುವ ನಿತ್ಯಾನಂದನ ಪತ್ತೆಗೆ ಇಂಟರ್‌ಪೋಲ್‌ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಿದೆ. 

ಸ್ವಯಂಘೋಷಿತ ದೇವ ಮಾನವ ನಿತ್ಯಾನಂದ ಎಲ್ಲಿದ್ದಾನೆ..?

ಗುಜಾರತಿನ ಆಶ್ರಮದಲ್ಲಿ ನಾಲ್ಕು ವಿದ್ಯಾರ್ಥಿಗಳ ಅಪಹರಣದ ಆರೋಪದ ಮೇಲೆ ನಿತ್ಯಾನಂದನ ವಿರುದ್ಧ ಗುಜರಾತ್‌ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. 

ಇದೇ ವಿಚಾರವಾಗಿ ಗುಜರಾತ್‌ ಪೊಲೀಸರು ದೇಶ ಬಿಟ್ಟು ಪರಾರಿಯಾಗಿರುವ ನಿತ್ಯಾನಂದನಿಗೆ ನೋಟಿಸ್‌ ಜಾರಿ ಮಾಡುವಂತೆ ಮನವಿ ಮಾಡಿದ್ದರು.  ಇದೀಗ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ವಿರುದ್ಧ ಇಂಟರ್‌ಪೋಲ್‌ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಿದೆ.

ಬಿಡದಿ ಬಳಿಯ ಆಶ್ರಮದಲ್ಲಿ ಆತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಬಿಡದಿ ಪೊಲೀಸರು ದೂರು ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆಗೆ ನಿತ್ಯಾನಂದ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್‌ ಆತನ ಬಂಧನಕ್ಕೆ ವಾರೆಂಟ್‌ ಜಾರಿ ಮಾಡಿತ್ತು. ಹೀಗಾಗಿ ನಿತ್ಯಾನಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾನೆ.