ರಾಹುಲ್ ಗಾಂಧಿಯವರ ವೀಡಿಯೋವೊಂದು ಭಾರಿ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನಾಯಕರು ಈ ವೀಡಿಯೋ ಹಂಚಿಕೊಂಡು ಕಾಂಗ್ರೆಸ್ ನಾಯಕನ ಕಾಲೆಳೆದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಸದ್ಯ ಬ್ಯುಸಿಯಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಪಣ ತೊಟ್ಟಿದ್ದಾರೆ. ಈ ಮಧ್ಯೆ ರಾಹುಲ್ ಗಾಂಧಿಯವರ ವೀಡಿಯೋವೊಂದು ಭಾರಿ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನಾಯಕರು ಈ ವೀಡಿಯೋ ಹಂಚಿಕೊಂಡು ಕಾಂಗ್ರೆಸ್ ನಾಯಕನ ಕಾಲೆಳೆದಿದ್ದಾರೆ.

ಟ್ವಿಟ್ಟರ್‌ನಲ್ಲಿ ವೈರಲ್ ಆಗುತ್ತಿರುವ ವೀಡಿಯೋ ಭಾರತ್ ಜೋಡೋ ಯಾತ್ರೆಯದ್ದಾಗಿದ್ದು, ರಾಹುಲ್ ಗಾಂಧಿ ಜೊತೆ ಅವರ ಪ್ರೀತಿಯ ಶ್ವಾನವೂ ಇದೆ. ವೀಡಿಯೋದಲ್ಲಿ ಕಾಣಿಸುವಂತೆ ತನ್ನೊಂದಿಗೆ ಇದ್ದ ನಾಯಿಗೆ ಬಿಸ್ಕೆಟ್ ನೀಡುವ ರಾಹುಲ್ ಅದು ತಿನ್ನದೇ ಇದ್ದಾಗ ಪಕ್ಕದಲ್ಲಿದ್ದ ಕಾರ್ಯಕರ್ತರೊಬ್ಬರಿಗೆ ಈ ಬಿಸ್ಕೆಟ್ ನೀಡಿದ್ದಾರೆ. ಈ ವೀಡಿಯೋ ಈಗ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು ಹೊಸ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿಗಿಂತ ಕಡೆಯೇ ಎಂದು ಅನೇಕರು ಟೀಕೆ ಮಾಡುತ್ತಿದ್ದಾರೆ.

ಬಿಜೆಪಿ ನಾಯಕ, ಬಿಜೆಪಿ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಈ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಪಕ್ಷದ ಬೂತ್ ಏಜೆಂಟರ್‌ಗಳನ್ನು ನಾಯಿಯೊಂದಿಗೆ ಹೋಲಿಕೆ ಮಾಡಿದ್ದರು. ಆದರೆ ಈಗ ರಾಹುಲ್ ಗಾಂಧಿಯವರು ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ನಾಯಿಯೊಂದಕ್ಕೆ ಬಿಸ್ಕೆಟ್ ತಿನ್ನಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಆ ನಾಯಿ ಬಿಸ್ಕೆಟ್ ತಿನ್ನದೇ ಇದ್ದಾಗ ಅದನ್ನು ಪಕ್ಕದಲ್ಲಿದ್ದ ಕಾರ್ಯಕರ್ತರಿಗೆ ನೀಡುತ್ತಾರೆ. 

ಈ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಯುವ ರಾಜ ತಮ್ಮ ಪಕ್ಷದ ಕಾರ್ಯಕರ್ತರನ್ನು ನಾಯಿಗೆ ಹೋಲಿಕೆ ಮಾಡುತ್ತಿದ್ದಾರೆ. ಇಂತಹ ಪಕ್ಷ ಕಣ್ಮರೆಯಾಗುವುದು ಸಹಜ ಎಂದು ಅಮಿತ್ ಮಾಳವೀಯ ಟೀಕೆ ಮಾಡಿದ್ದಾರೆ. ಈ ವೀಡಿಯೋ ನೋಡಿದ ಒಬ್ಬರು ಇವರ ಸ್ಟೋರಿಯನ್ನು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಅವರು ಇದಕ್ಕಿಂತ ಚೆನ್ನಾಗಿ ಹೇಳುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Scroll to load tweet…