ಸಂಕಷ್ಟದ ಸಮಯದಲ್ಲಿ ಭಾರತ ಇಸ್ರೇಲ್ ಜತೆ ದೃಢವಾಗಿ ನಿಂತಿದೆ: ಇಸ್ರೇಲ್ ಪ್ರಧಾನಿಗೆ ಮೋದಿ ಅಭಯ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ದೂರವಾಣಿ ಕರೆಗಾಗಿ ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಅಪ್‌ಡೇಟ್ ಒದಗಿಸಿದ್ದಕ್ಕಾಗಿ ನಾನು ಪ್ರಧಾನಿ ನೆತನ್ಯಾಹು ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಿಢೀರನೇ ದಾಳಿ ನಡೆಸಿದ್ದು, ಹಾಗೂ 20 ನಿಮಿಷದಲ್ಲಿ 5000 ರಾಕೆಟ್ ದಾಳಿ ಮಾಡಿತ್ತು. ಇದರಿಂದ ಇಸ್ರೇಲ್ ಪರಿಸ್ಥಿತಿ ಸಾಮಾನ್ಯವಾಗಿಲ್ಲ. ಆದರೂ, ತಕ್ಷಣ ಸೆಟೆದೆದ್ದು ನಿಂತ ಇಸ್ರೇಲ್ ಹಮಾಸ್ ವಿರುದ್ಧ ಯುದ್ಧಸಾರಿದೆ. ಪ್ಯಾಲೆಸ್ತೀನ್‌ನಲ್ಲಿ ತಕ್ಷಣ ಪ್ರತಿ ಕಾರ್ಯಾಚರಣೆಯನ್ನೂ ನಡೆಸ್ತಿದೆ.
ಇಸ್ರೇಲ್ - ಪ್ಯಾಲೆಸ್ತೀನ್ ನಡುವಣ ಯುದ್ಧ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡಲು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ: ಪ್ಯಾಲೆಸ್ತೀನ್ ಪರ ನಿಂತ ಮಾಜಿ ನೀಲಿ ತಾರೆ ಕೆಲಸಕ್ಕೇ ಬಂತು ಕುತ್ತು!
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ದೂರವಾಣಿ ಕರೆಗಾಗಿ ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಅಪ್‌ಡೇಟ್ ಒದಗಿಸಿದ್ದಕ್ಕಾಗಿ ನಾನು ಪ್ರಧಾನಿ @netanyahu ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ಜೊತೆ ದೃಢವಾಗಿ ನಿಂತಿದ್ದಾರೆ. ಭಾರತವು ತನ್ನ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಭಾರತ ಇಸ್ರೇಲ್‌ಗೆ ತನ್ನ ಬೆಂಬಲವನ್ನೂ ನೀಡಿದೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ಜೊತೆ ದೃಢವಾಗಿ ನಿಂತಿದ್ದಾರೆ. ಭಾರತವು ತನ್ನ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದೂ ಪ್ರಧಾನಿ ಮೋದಿ ಎಕ್ಸ್‌ನಲ್ಲಿ (ಈ ಹಿಂದಿನ ಟ್ವಿಟ್ಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಹಮಾಸ್ ವಿರುದ್ಧ ಯುದ್ಧದಲ್ಲಿ ಭಾಗಿಯಾದ ಇಸ್ರೇಲ್ ಮಾಜಿ ಪ್ರಧಾನಿ: ಸೈನಿಕರ ಜತೆ ಯುದ್ಧಭೂಮಿಗಿಳಿದ ರಾಜಕಾರಣಿ!