Asianet Suvarna News Asianet Suvarna News

ಅಯೋಧ್ಯೆ ರಾಮಮಂದಿರಕ್ಕೆ ಇಸ್ರೇಲಿ ರಾಯಭಾರಿ ರುವೆನ್ ಪತ್ನಿ ಸಮೇತ ಭೇಟಿ

ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೆನ್ ಅಜರ್‌ ಅವರು ತಮ್ಮ ಪತ್ನಿಯೊಂದಿಗೆ ಬುಧವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. 

Israeli Ambassador Visits Ayodhyas Ram Temple with Wife
Author
First Published Oct 17, 2024, 11:05 AM IST | Last Updated Oct 17, 2024, 11:06 AM IST

ಅಯೋಧ್ಯೆ: ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೆನ್ ಅಜರ್‌ ಅವರು ತಮ್ಮ ಪತ್ನಿಯೊಂದಿಗೆ ಬುಧವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ ಲಖನೌದಲ್ಲಿ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ರುವೆನ್ ಬುಧವಾರ ಆಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದರು. ನಂತರ ಬಸ್ತಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹಾಜರಾಗಿದ್ದರು.

ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ರುವೆನ್ ಅಜರ್, ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ನೋಡಿ ಅಚ್ಚರಿಗೊಂಡಿದ್ದೇನೆ ಎಂದರು. ಅಲ್ಲದೇ ಇಲ್ಲಿನ ಜನರೊಂದಿಗೆ ಸಂಪರ್ಕ ಸಾಧಿಸುವ ಹಾಗೂ ಭಾರತದ ಸಂಸ್ಕೃತಿಯನ್ನು ಅಳವಾಗಿ ಅನ್ವೇಷಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು. ಅಯೋಧ್ಯೆಯಯಲ್ಲಿ ಭವ್ಯವಾದ ರಾಮ ಮಂದಿರಕ್ಕೆ ಭೇಟಿ ಮಾಡುವ ಅವಕಾಶ ಸಿಕ್ಕಿದ್ದು, ನನಗೆ ಸಿಕ್ಕ ಗೌರವ ಎಂದರು.

ಹರ್ಯಾಣ ಸಿಎಂ ಆಗಿ ಇಂದು ನಯಾಬ್‌ ಸಿಂಗ್ ಸೈನಿ ಪ್ರಮಾಣ

ಚಂಡೀಗಢ: ಇತ್ತೀಚೆಗೆ ನಡೆದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ, ಹಾಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಆಯ್ಕೆ ಮಾಡಲಾಗಿದೆ. ಕೇಂದ್ರದ ವಿಕ್ಷಕರಾಗಿ ಆಗಮಿಸಿದ್ದ ಅಮಿತ್ ಶಾ ಸಮ್ಮುಖದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಆಯ್ಕೆ ಬೆನ್ನಲ್ಲೇ ಸೈನಿ, ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಇಂದು ಪ್ರಮಾಣ: ಸಿಎಂ ಆಗಿ ಸೈನಿ ಇಂದು ಪ್ರಮಾಣವಚನ ಸ್ವೀಕರಿಸಲಿದು. ಶಪಥ ಪ್ರಮಾಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆ. ಈ ಮೂಲಕ ಮಾರ್ಚ್‌ ನಲ್ಲಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ಸಿಎಂ ಆಗಿ ನೇಮಕಗೊಂಡಿದ್ದ ಸೈನಿ ಅದೇ ಹುದ್ದೆಯಲ್ಲಿ ಮುಂದುವರೆಯುವ ಅವಕಾಶ ಪಡೆದುಕೊಂಡಿದ್ದಾರೆ. ಅ. 5ರಂದು 90 ಸ್ಥಾನ ಬಲದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನ ಗೆದ್ದಿತ್ತು, ಅಧಿಕಾರ ಚುಕ್ಕಾಣಿ ಹಿಡಿಯುವ ಕನಸಿನಲ್ಲಿದ್ದ ಕಾಂಗ್ರೆಸ್ ಕೇವಲ 37 ಸ್ಥಾನಗಳಲ್ಲಿ ಜಯಗಳಿಸಿದ್ದು, ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಂಡಿದೆ.

Latest Videos
Follow Us:
Download App:
  • android
  • ios