ಜೈಪುರ [ಮಾ.20] : ಡೆಡ್ಲಿ ಕೊರೋನಾ ಸೋಂಕಿಗೆ ಭಾರತದಲ್ಲಿ  ಐದನೇ ಬಲಿಯಾಗಿದೆ. ರಾಜಸ್ಥಾನದ ಜೈಪುರದಲ್ಲಿ ಇಟಲಿ ಮೂಲದ ಪ್ರವಾಸಿಗ ಸಾವಿಗೀಡಾಗಿದ್ದಾನೆ. 

ಜೈಪುರಕ್ಕೆ ಆಗಮಿಸಿದ್ದ ಇಟಲಿ ಪ್ರವಾಸಿಗ ಸಾವಿಗೀಡಾಗಿದ್ದು, ಒಟ್ಟು ಭಾರತದಲ್ಲಿ ಮಾರಣಾಂತಿಕ ಕೊರೋನಾ ಸೋಂಕಿಗೆ ಐವರು ಬಲಿಯಾದಂತಾಗಿದೆ. 

ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿಗೆ ಭಾರತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದಲೂ ಬಳಲುತ್ತಿದ್ದ ಇಟಲಿ ಪ್ರವಾಸಿಗ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಕಾಸರಗೋಡು ಪ್ರಯಾಣಿಕರ ಗಡಿ ದಾಟಿಸಲು ವಿಶೇಷ ಬಸ್‌...

ಅವರ ಪತ್ನಿಯೂ ಕೂಡ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಇದೀಗ ಸೋಂಕಿತ ಇಟಲಿ ವ್ಯಕ್ತಿ ಸಾವಿಗೀಡಾಗಿದ್ದಾರೆ.

ಅಮೆರಿಕದ ಸಮುದ್ರ ಮಧ್ಯೆ ಹಡಗಲ್ಲಿ 131 ಭಾರತೀಯರ ದಿಗ್ಬಂಧನ..

ಭಾರತದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ಸೋಂಕು ಪೀಡಿತರ ಸಂಖ್ಯೆ ಏರುಗತಿಯಲ್ಲಿಯೇ ಸಾಗುತ್ತಿದೆ. 

ಭಾರತದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಾಕಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕವಾಗಿ ವಿವಿಧ ರೀತಿಯ ನಿರ್ಬಂಧ ವಿಧಿಸಲಾಗಿದೆ. 

ಮಾರ್ಚ್ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ