1997 ರ ನಂತರದ ಅತಿ ಹೆಚ್ಚು ಅಂತರದೊಂದಿಗೆ ಆಗಸ್ಟ್ 6 ರಂದು ದೇಶದ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್ ಆಯ್ಕೆಯಾಗಿದ್ದರು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಜಗದೀಪ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. 

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಮಧ್ಯಾಹ್ನ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೆಂದ್ರ ಗೃಹ ಸಚಿವ ಅಮಿತ್‌ ಶಾ, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಹಲವರು ಗಣ್ಯರು ಭಾಗಿಯಾಗಿದ್ದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ,ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್, ಸೇರಿ ಹಲವು ಗಣ್ಯರು ಸಹ ಭಾಗಿಯಾಗಿದ್ದರು. 

Scroll to load tweet…

ದೇಶದ 14ನೇ ಉಪರಾಷ್ಟ್ರಪತಿಯಾಗಿ ಇಂದು ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕಾರ

ಇನ್ನು, ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಗುರುವಾರ ಜಗದೀಪ್‌ ಧನಕರ್‌, ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದರು. 
ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಿದ್ದು, ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಪ್‌ ಧನಕರ್‌ ಇನ್ಮುಂದೆ ರಾಜ್ಯಸಭೆಯ ಸಭಾಪತಿಯೂ ಆಗಿರಲಿದ್ದಾರೆ. 

Scroll to load tweet…

ಇನ್ನೊಂದೆಡೆ, ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ ವೆಂಕಯ್ಯ ನಾಯ್ಡು ಮತ್ತು ಅವರ ಉತ್ತರಾಧಿಕಾರಿ ಧನಕರ್‌ ಅವರಿಗೆ ತಮ್ಮ ನಿವಾಸದಲ್ಲಿ ಆತಿಥ್ಯ ನೀಡಿದರು. ನಾಯ್ಡು ಮತ್ತು ಬಿರ್ಲಾ ಅವರು ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಂಸದೀಯ ವ್ಯವಹಾರಗಳ ವಿಷಯಗಳ ಕುರಿತು ಒಳನೋಟಗಳು ಮತ್ತು ಅನುಭವಗಳನ್ನು ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಧನಕರ್ ಅವರೊಂದಿಗೆ ಹಂಚಿಕೊಂಡಿದ್ದಾರೆ ಎಂದು ಲೋಕಸಭೆ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದೆ.

Scroll to load tweet…

ಬಿಜೆಪಿ ನೇತೃತ್ವದ ನ್ಯಾಶನಲ್ ಡೆಮಾಕ್ರಟಿಕ್ ಅಲಯನ್ಸ್ ಅಭ್ಯರ್ಥಿ (ಎನ್‌ಡಿಎ) (National Democratic Alliance) ಜಗದೀಪ್‌ ಧನಕರ್‌ ಭಾನುವಾರ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ (Vice President Elections) ಶೇಕಡ 74.36 ರಷ್ಟು ಮತಗಳನ್ನು ಗಳಿಸಿದ್ದರು. ಇದು ಕಳೆದ 6 ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಪಡೆದ ಅತಿ ಹೆಚ್ಚು ಶೇಕಡಾವಾರು ಮತಗಳಾಗಿದೆ. ಇನ್ನು, ಜಂಟಿ ವಿರೋಧ ಪಕ್ಷದ ಆಯ್ಕೆಯಾದ ಮಾರ್ಗರೇಟ್ ಆಳ್ವ ಅವರಿಗೆ 182 ಮತಗಳು ಬಂದಿದ್ದರೆ ಧನಕರ್‌ ಅವರು 528 ಮತಗಳನ್ನು ಗಳಿಸಿದ್ದರು. 1997 ರ ಬಳಿಕ ಅತಿ ಹೆಚ್ಚು ಮತಗಳ ಅಂತರದಿಂದ (Highest Margin) ಜಗದೀಪ್‌ ಧನಕರ್‌ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.