ಊರಿಗೆ ಹೊರಟ ಪ್ರಯಾಣಿಕರ ಖಾಸಗಿ ಬಸ್ ಅವಘಡ, ಹೊತ್ತಿ ಉರಿದು ಹಲವರು ಗಂಭೀರ, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಹಲವರ ರಕ್ಷಣೆ ಮಾಡಲಾಗಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಜೈಸಲ್ಮೇರ್ (ಅ.14) ದೀಪಾವಳಿ ಹಬ್ಬದ ರಜೆಗಳು ಆಗಮಿಸುತ್ತಿದೆ. ಊರಿಗೆ ತೆರಳುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಹೀಗೆ ಊರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದೆ. ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಹಗನೆ ಹೊತ್ತಿ ಉರಿದಿದೆ. ಬಸ್ ಹೊತ್ತಿ ಉರಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ.ರಕ್ಷಣಾ ಕಾರ್ಯಾಚರಣೆ ಮೂಲಕ ಬಸ್‌ನಲ್ಲಿದ್ದ ಪ್ರಯಾಣಿಕರ ರಕ್ಷಿಸಿದ್ದಾರೆ. 15 ಪ್ರಯಾಣಿಕರಿಗೆ ಸುಟ್ಟಗಾಯಗಳಾಗಿದೆ. ಸದ್ಯದ ಮಾಹಿತಿ ಪ್ರಕಾರ 19 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ರಾಜಸ್ಥಾನದ ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ ನಡೆದಿದೆ.
ನಿದ್ದೆಗೆ ಜಾರಿದ್ದವರಿಗೆ ಸುಟ್ಟ ಗಾಯ
ಥಯಾತ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೊರಟಿದ್ದ ಈ ಬಸ್ ಸಂಪೂರ್ಣ ಸೀಟು ಭರ್ತಿಯಾಗಿತ್ತು. ಜೈಸಲ್ಮೇರ್‌ನಿಂದ ಮಧ್ಯಾಹ್ನ 3 ಗಂಟೆಗೆ ಹೊರಟ ಬಸ್ ಬೆಂಕಿಗೆ ಆಹುತಿಯಾಗಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದಂತೆ ಹಲವು ಪ್ರಯಾಣಿಕರು ನಿದ್ದೆಗೆ ಜಾರಿದ್ದಾರೆ. ಬಸ್ ಹೆದ್ದಾರಿಯಲ್ಲಿ ಸಾಗುತ್ತದ್ದಂತೆ ಹಿಂಬಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ಹಿಂಭಾಗದ ಸೀಟಿನಲ್ಲಿದ್ದವರಿಗೆ ಸುಟ್ಟಗಾಯಗಳಾವಿಗೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಮಾಹಿತಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ. ಬಸ್ ಗಾಜುಗಳನ್ನು ಒಡೆದು ಪ್ರಯಾಣಿಕರ ರಕ್ಷಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆ ದಾಖಲು
ಮೂಲಗಳ ಪ್ರಕಾರ ಈ ಘಟನೆಯಲ್ಲಿ 19 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. 10 ರಿಂದ 15 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕೆಲವರ ಆರೋಗ್ಯ ಗಂಭೀರವಾಗಿದೆ ಅನ್ನೋ ಮಾಹಿತಿಗಳು ಹೊರಬಿದ್ದಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಕೆಲವರಿಗೆ ಗಾಯಗಳಾಗಿವೆ.
ಬೆಂಕಿ ನಂದಿಸಿದ ಅಗ್ನಿಶಾಮಕ ದಳ
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಧಾವಿಸಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಬಸ್ ಬಾಗಶಃ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಭಿಸಿದ್ದಾರೆ. ಅಗ್ನಿ ಅವಘಡಕ್ಕ ಕಾರಣವೇನು ಅನ್ನೋದು ಪತ್ತೆ ಹಚ್ಚಲು ಮುಂದಾಗಿದ್ದಾರೆ.
