Asianet Suvarna News Asianet Suvarna News

ಬಿಡಲಾಗದು ಇಲ್ಲಿಗೆ: ಅಯೋಧ್ಯೆ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ!

ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದ| ಐತಿಹಾಸಿಕ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ| 217 ಪುಟಗಳ ಮೇಲ್ಮನವಿ ಸಲ್ಲಿಸಿದ ಜಮೈತ್- ಉಲಮಾ-ಇ- ಹಿಂದ್| ಸುಪ್ರೀಂ ತೀರ್ಪಿನಿಂದ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ ಎಂದ ಜಮೈತ್- ಉಲಮಾ-ಇ- ಹಿಂದ್|

Jamiat Ulema-e-Hind Files First Review Plea Against SC Ayodhya Verdict
Author
Bengaluru, First Published Dec 2, 2019, 6:09 PM IST
  • Facebook
  • Twitter
  • Whatsapp

ನವದೆಹಲಿ(ಡಿ.02): ಅಯೋಧ್ಯೆ ಬಾಬರಿ ಮಸೀದಿ-ರಾಮ ಜನ್ಮಭೂಮಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ  ಜಮೈತ್- ಉಲಮಾ-ಇ- ಹಿಂದ್ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ಸುಪ್ರೀಂಕೋರ್ಟ್ ತನ್ನ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿ ಜಮೈತ್- ಉಲಮಾ-ಇ- ಹಿಂದ್ 217 ಪುಟಗಳ ಮರು ಪರಿಶೀಲನಾ ಅರ್ಜಿ ಸಲ್ಲಿಸಿದೆ.

ಅಯೋಧ್ಯೆ ತೀರ್ಪು ಮರುಪರಿಶೀಲನೆಗೆ ಮುಸ್ಲಿಂ ಪ್ರಮುಖರ ವಿರೋಧ!

ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿಯೇ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಜಮೈತ್- ಉಲಮಾ-ಇ- ಹಿಂದ್ ಸ್ಪಷ್ಟಪಡಿಸಿದೆ. 

ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾಗಿ ಜಮೈತ್- ಉಲಮಾ-ಇ- ಹಿಂದ್ ಪರ ವಕೀಲರು ತಿಳಿಸಿದ್ದಾರೆ.

ಅಯೋಧ್ಯೆ ವಿಚಾರದಲ್ಲಿ ಸುಪ್ರೀಂ ತೀರ್ಪು ಸರಿ ಇಲ್ಲ : ಪುರಿ ಸ್ವಾಮೀಜಿ ಅಸಮಾಧಾನ

ಆದರೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಇದುವರೆಗೂ ಮೇಲ್ಮನವಿ ಸಲ್ಲಿಸುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಂಡಂತಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಂಡಳಿ ಪರ ವಕೀಲ ಜಫರಯಾಬ್ ಜಿಲಾನಿ, ಇಂದು ಮೇಲ್ಮನವಿ ಸಲ್ಲಿಸದಿರುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆದರೆ ಡಿ.09ರವೆರೆಗೆ ಸಮಯಾವಕಾಶವಿದ್ದು, ಶೀಘ್ರದಲ್ಲೇ ಈ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲಾನಿ ಸ್ಪಷ್ಟಪಡಿಸಿದ್ದಾರೆ.

ಮುಗಿದಿಲ್ಲ ಅಯೋಧ್ಯೆ ವಿಚಾರ: ಮರುಪರಿಶೀಲನೆಗೆ ಅರ್ಜಿ

Follow Us:
Download App:
  • android
  • ios