ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ವಾಹನವು ಗುಡ್ಡದಿಂದ ಉರುಳಿಬಿದ್ದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಪೂಂಚ್‌ನಲ್ಲಿ ಇದೇ ರೀತಿಯ ಘಟನೆ ನಡೆದ ಕೆಲವೇ ದಿನಗಳಲ್ಲಿ ಈ ದುರಂತ ಸಂಭವಿಸಿದೆ.

ಜಮ್ಮು ಕಾಶ್ಮೀರ್ (ಜ.4) ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಕಮರಿಗೆ ಉರುಳಿ ಕರ್ನಾಟಕದ ನಾಲ್ವರು ಯೋಧರು ಸೇರಿ ಹಲವರು ದುರ್ಮರಣಕ್ಕೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಘೋರ ದುರಂತ ನಡೆದುಹೋಗಿದೆ. 

ಶನಿವಾರ (ಜನವರಿ 4, 2025)ರಂದು ಭಾರತೀಯ ಸೇನೆಯ ವಾಹನವು ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಸೈನಿಕರನ್ನ ಹೊತ್ತೊಯ್ಯುತ್ತಿದ್ದ ವೇಳೆ ಗುಡ್ಡದಿಂದ ಉರುಳಿಬಿದ್ದು 2 ಯೋಧರು ದುರ್ಮರಕ್ಕೀಡಾಗಿದ್ದಾರೆ. ಘಟನೆಯಲ್ಲಿ ಐವರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಘಟನೆ ಬಳಿಕ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸುನಾ ಹಲವು ಯೋಧರು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಜಮ್ಮು ಕಾಶ್ಮೀರ ಸೇನಾ ವಾಹನ ದುರಂತದಲ್ಲಿ 5 ಯೋಧರ ಹುತಾತ್ಮ; ಈ ಪೈಕಿ ಮೂವರು ಕರ್ನಾಟಕದ ಯೋಧರು!

ವೈದ್ಯರಿಂದ ಮಾಹಿತಿ

ಉತ್ತರ ಕಾಶ್ಮೀರ ಜಿಲ್ಲೆಯ ಎಸ್‌ಕೆ ಪಯೆನ್ ಬಳಿ ಸೇನಾ ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಮೃತರಾದರೆ, ಮೂವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಕಳುಹಿಸಲಾಗಿದೆ ಎಂದು ಬಂಡಿಪೋರಾದ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಮಸರತ್ ಇಕ್ಬಾಲ್ ವಾನಿ ತಿಳಿಸಿದ್ದಾರೆ .

Scroll to load tweet…