ಜಮ್ಮು ಕಾಶ್ಮೀರ: ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 11 ಜನ ದಾರುಣವಾಗಿ ಸಾವನ್ನಪ್ಪಿದ್ದು ಎಂಟು ಜನ ಗಂಭೀರವಾಗಿ ಗಾಯಗೊಂಡ ಘಟನೆ ಕಣಿವೆ ನಾಡು ಜಮ್ಮುಕಾಶ್ಮೀರದಲ್ಲಿ ನಡೆದಿದೆ. ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬರೆರಿ ನಲ್ಲಾ ಎಂಬಲ್ಲಿ ಈ ಅವಘಡ ಸಂಭವಿಸಿದೆ.

ಅಪಘಾತಕ್ಕೀಡಾದ ಈ ಬಸ್ ಸುಜಿಯಾನ್‌ನಿಂದ ಮಂಡಿ ಎಂಬಲ್ಲಿಗೆ ತೆರಳುತ್ತಿತ್ತು. ಘಟನಾ ಸ್ಥಳಕ್ಕೆ ಸೇನಾ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 9 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡ ಹಲವರನ್ನು ಮಂಡಿಯಲ್ಲಿ ಇರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಡಿ ತಹಸೀಲ್ದಾರ್ ಶೆಹ್ಜಾದ್ ಲತೀಫ್ ಹೇಳಿದ್ದಾರೆ. ಘಟನೆಯ ಬಗ್ಗೆ ಜಮ್ಮು ಕಾಶ್ಮೀರದ ರಾಜ್ಯಪಾಲರು ದುಃಖ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೇ ಗಾಯಾಳುಗಳಿಗೆ ಉತ್ತಮವಾದ ಚಿಕಿತ್ಸೆ ನೀಡುವಂತೆ ಸ್ಥಳೀಯಾಡಳಿತಕ್ಕೆ ಆದೇಶಿಸಿದ್ದಾರೆ.