ಇಂದು ಕಾಶ್ಮೀರ, ಹರ್ಯಾಣ ಫಲಿತಾಂಶ: ಮಧ್ಯಾಹ್ನದ ವೇಳೆಗೆ ಚಿತ್ರಣ

ದಶಕದ ಬಳಿಕ ವಿಧಾನಸಭಾ ಚುನಾವಣೆ ಎದುರಿಸಿದ್ದ ಜಮ್ಮು-ಕಾಶ್ಮೀರದ ಫಲಿತಾಂಶ ಭಾರೀ ಕುತೂಹಲಕ್ಕೆ ಕಾರಣವಾಗಿದೆ. 2014ರಲ್ಲಿ ಕಡೆಯ ಬಾರಿ ಚುನಾವಣೆ ನಡೆದಾಗಲೂ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಪಿಡಿಪಿ- ಬಿಜೆಪಿ ಸರ್ಕಾರ ರಚನೆಯಾಗಿತ್ತು. ಬಳಿಕ ಸರ್ಕಾರ ಕುಸಿದುಬಿದ್ದಿತ್ತು. ಅದಾದ ನಂತರ ಇದೀಗ ನಡೆದ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಮತ್ತು ಕಾಂಗ್ರೆಸ್‌ ಮೈತ್ರಿಕೂಟ ಮಾಡಿಕೊಂಡು ಚುನಾವಣೆಗೆ ಸೆಣಸಿವೆ. ಪಿಡಿಪಿ ಮತ್ತು ಬಿಜೆಪಿ ಏಕಾಂಗಿಯಾಗಿ ಕಣಕ್ಕೆ ಇಳಿದಿದಿವೆ.

Jammu Kashmir and Haryana assembly election results will be Announce on October 8th grg

ಚಂಡೀಗಢ/ಜಮ್ಮು/ಶ್ರೀನಗರ(ಅ.08):  ಹರ್ಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯಲಿದೆ. ಮಧ್ಯಾಹ್ನದಷ್ಟೊತ್ತಿಗೆ ಲಭ್ಯವಾಗುವ ಫಲಿತಾಂಶ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಲ ನೀಡಲಿದೆಯೇ ಅಥವಾ ಹಲವು ವರ್ಷಗಳಿಂದ ಉಭಯ ರಾಜ್ಯಗಳಲ್ಲಿ ಅಧಿಕಾರ ವಂಚಿತ ಆಗಿದ್ದ ಕಾಂಗ್ರೆಸ್‌ ಹಾಗೂ ಇತರ ವಿಪಕ್ಷಗಳಿಗೆ ವರವಾಗಲಿದೆಯೇ ಎಂಬುದು ಸ್ಪಷ್ಟವಾಗಲಿದೆ.

ಹರ್ಯಾಣ ವಿಧಾನಸಭೆಯ 90 ಸ್ಥಾನಗಳಿಗೆ ಒಂದೇ ಹಂತದಲ್ಲಿ ಶನಿವಾರ ಚುನಾವಣೆ ನಡೆದಿದ್ದರೆ, ಜಮ್ಮು-ಕಾಶ್ಮೀರದ 90 ಸ್ಥಾನಕ್ಕೆ 3 ಹಂತದಲ್ಲಿ ಇತ್ತೀಚೆಗೆ ಚುನಾವಣೆ ನಡೆದಿತ್ತು. ಎರಡೂ ರಾಜ್ಯಗಳಲ್ಲಿ ಬಹುಮತಕ್ಕೆ 46 ಸ್ಥಾನಗಳು ಬೇಕಾಗಿದೆ.

ಹರ್ಯಾಣದಲ್ಲಿ ಬಿಜೆಪಿಗೆ ಶಾಕ್, ಜಮ್ಮು ಕಾಶ್ಮೀರ ಅತಂತ್ರ; ಮತಗಟ್ಟೆ ಸಮೀಕ್ಷೆ ಪ್ರಕಟ!

ಹರ್ಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಕನಸು:

ಹರ್ಯಾಣದಲ್ಲಿ ಬಿಜೆಪಿ ಸತತ 3ನೇ ಸಲ ಗೆದ್ದು ಅಧಿಕಾರಕ್ಕೇರಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌, ಬಿಜೆಪಿ, ಜೆಜೆಪಿ ಮೈತ್ರಿಕೂಟ, ಐಎನ್‌ಎಲ್‌ಡಿ ಮೈತ್ರಿಕೂಟ, ಆಪ್‌ ಮತ್ತು ಪಕ್ಷೇತರರ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಆದರೆ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ ಬಹುಮತದೊಂದಿಗೆ ಜಯ ಸಾಧಿಸಲಿದ್ದು, ಬಿಜೆಪಿ ಘೋರ ಪರಾಭವ ಅನುಭವಿಸಲಿದೆ ಎಂದಿವೆ.

ಕಾಂಗ್ರೆಸ್ ಗೆದ್ದರೆ ಮಾಜಿ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ ಹಾಗೂ ದಲಿತ ನಾಯಕಿ ಕುಮಾರಿ ಸೆಲ್ಜಾ ನಡುವೆ ಸಿಎಂ ಗಾದಿಗೆ ಪೈಪೋಟಿ ನಡೆಯುವ ಸಾಧ್ಯತೆ ಇದೆ. ಬಿಜೆಪಿ ತಾನು ಗೆದ್ದರೆ ಹಾಲಿ ಸಿಎಂ ನಾಯಬ್‌ ಸಿಂಗ್‌ ಸೈನಿ ಅವರನ್ನೇ ಮುಂದುವರಿಸುತ್ತೇವೆ ಎಂದಿದ್ದರೂ, ಹಿರಿಯ ಕೇಸರಿ ನಾಯಕ ಅನಿಲ್‌ ವಿಜ್‌ ತಾವೂ ಆಕಾಂಕ್ಷಿ ಎಂದಿದ್ದಾರೆ.

ಮೋದಿಯನ್ನ ಇಳಿಸೋವರೆಗೆ ನಾನು ಸಾಯೊಲ್ಲ: ಪ್ರಧಾನಿ ವಿರುದ್ಧ ಖರ್ಗೆ ಗುಡುಗು!

ಕಾಶ್ಮೀರದಲ್ಲಿ 10 ವರ್ಷ ನಂತರ ಚುನಾವಣೆ:ದಶಕದ ಬಳಿಕ ವಿಧಾನಸಭಾ ಚುನಾವಣೆ ಎದುರಿಸಿದ್ದ ಜಮ್ಮು-ಕಾಶ್ಮೀರದ ಫಲಿತಾಂಶ ಭಾರೀ ಕುತೂಹಲಕ್ಕೆ ಕಾರಣವಾಗಿದೆ. 2014ರಲ್ಲಿ ಕಡೆಯ ಬಾರಿ ಚುನಾವಣೆ ನಡೆದಾಗಲೂ ಅತಂತ್ರ  ಪರಿಸ್ಥಿತಿ ನಿರ್ಮಾಣವಾಗಿ ಪಿಡಿಪಿ- ಬಿಜೆಪಿ ಸರ್ಕಾರ ರಚನೆಯಾಗಿತ್ತು. ಬಳಿಕ ಸರ್ಕಾರ ಕುಸಿದುಬಿದ್ದಿತ್ತು. ಅದಾದ ನಂತರ ಇದೀಗ ನಡೆದ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಮತ್ತು ಕಾಂಗ್ರೆಸ್‌ ಮೈತ್ರಿಕೂಟ ಮಾಡಿಕೊಂಡು ಚುನಾವಣೆಗೆ ಸೆಣಸಿವೆ. ಪಿಡಿಪಿ ಮತ್ತು ಬಿಜೆಪಿ ಏಕಾಂಗಿಯಾಗಿ ಕಣಕ್ಕೆ ಇಳಿದಿದಿವೆ.

ಆದರೆ ಇಲ್ಲಿ ಬಹುತೇಕ ಚುನಾವಣಾ ಸಮೀಕ್ಷೆಗಳು ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಮುನ್ನಡೆ ಸಾಧಿಸಲಿದೆ ಎಂದಿದ್ದರೂ ಬಹುಮತದ ಅನುಮಾನ ವ್ಯಕ್ತಪಡಿಸಿವೆ. ಬಿಜೆಪಿ ಜಮ್ಮುವಿನಲ್ಲಿ ಉತ್ತಮ ಸಾಧನೆ ಮಾಡಿದರ ಕಾಶ್ಮೀರದಲ್ಲಿ ಶೂನ್ಯ ಸಂಪಾದನೆ ಭೀತಿ ಎದುರಿಸುತ್ತಿದೆ. ಅತಂತ್ರ ಸ್ಥಿತಿ ಸೃಷ್ಟಿಯಾದರೆ ಪಿಡಿಪಿ ಹಾಗೂ ಸಣ್ಣಪುಟ್ಟ ಪಕ್ಷ/ಪಕ್ಷೇತರರು ನಿರ್ಣಾಯಕ ಆಗಲಿದ್ದಾರೆ.

Latest Videos
Follow Us:
Download App:
  • android
  • ios