Asianet Suvarna News Asianet Suvarna News

ಜಮ್ಮು ಕಾಶ್ಮೀರದಲ್ಲಿ ಸಾಮರ್ಥ್ಯ ಹೆಚ್ಚಿಸಿಕೊಂಡ ಬಿಜೆಪಿ; ಸರ್ಕಾರ ರಚನೆಯತ್ತ ಕಾಂಗ್ರೆಸ್ ಮೈತ್ರಿಕೂಟ

Jammu Kashmir Election Result 2024: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ. ಬಿಜೆಪಿ ಸ್ಥಾನ ಹೆಚ್ಚಿಸಿಕೊಂಡಿದೆ.

Jammu Kashmir Election Result Trends Congress and ND ahead BJP mrq
Author
First Published Oct 8, 2024, 11:01 AM IST | Last Updated Oct 8, 2024, 12:00 PM IST

ಶ್ರೀನಗರ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಸದ್ಯದ ಟ್ರೆಂಡ್ ಪ್ರಕಾರ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆ ಮಾಡುವ ಸಾಧ್ಯತೆಗಳಿವೆ. ಎರಡೂ ಪಕ್ಷಗಳು 45ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ 25-26ರಲ್ಲಿ ಮುನ್ನಡೆಯಲ್ಲಿದೆ. ಪಿಡಿಒ ಕೇವಲ ಒಂದಂಕಿಗೆ ಸೀಮಿತವಾಗಿದೆ. ಜಮ್ಮು ಕಾಶ್ಮೀರ 90 ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರ ರಚನೆಗೆ 46 ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. 

2019ರಲ್ಲಿ 370 ನೇ ವಿಧಿ ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ರಚಿಸಲಾಗಿದೆ. ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆಯಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಜಮ್ಮು ಕಾಶ್ಮೀರದ 20 ಜಿಲ್ಲಗಳಲ್ಲಿ 20 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಮಧ್ಯಾಹ್ನ 1 ಗಂಟೆ ವೇಳೆಗೆ ಭಾಗಶಃ ಫಲಿತಾಂಶ ತಿಳಿಯಲಿದೆ. ಕಾಂಗ್ರೆಸ್ ಎಂಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. PDP ಮೂರು ಸ್ಥಾನಗಳಲ್ಲಿ, JPC ಮೂರು ಸ್ಥಾನಗಳಲ್ಲಿ ಮತ್ತು ಸ್ವತಂತ್ರರು 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮತ ಎಣಿಕೆ ಆರಂಭವಾದಾಗಿನಿಂದಲೂ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಮುನ್ನಡೆಯನ್ನು ಕಾಯ್ದುಕೊಳ್ಳುತ್ತಾ ಬಂದಿದೆ. ಮುನ್ನಡೆ ಕುರಿತು ಪ್ರತಿಕ್ರಿಯೆ ನೀಡಿರುವ ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ, ಸಂತಸ ವ್ಯಕ್ತಪಡಿಸಿದ್ದು, ಪಿಡಿಪಿ ಜೊತೆಗಿನ ಸಂಭವನೀಯ ಮೈತ್ರಿಯ ಬಗ್ಗೆ ಮಾತನಾಡಿದರು.

ಜಮ್ಮು ಕಾಶ್ಮೀರ ಫಲಿತಾಂಶ ಅತಂತ್ರವಾದರೆ ರಾಜ್ಯಪಾಲರ ಆಟ?

ನಾವು ಪಿಡಿಪಿ ಬಳಿ ಯಾವುದೇ ಬೆಂಬಲವನ್ನು ಕೇಳಿಲ್ಲ. ಸಂಪೂರ್ಣ ಫಲಿತಾಂಶ ಬರಲಿ. ಸದ್ಯದ ಫಲಿತಾಂಶದ ಪ್ರಕಾರ ನಮಗೆ ಯಾವ ಬೆಂಬಲವೂ ಬೇಕಿಲ್ಲ. ಮೈತ್ರಿ ಬಗ್ಗೆ ಮಾತನಾಡೋದು ಇದು ಸೂಕ್ತ ಸಮಯವಲ್ಲ.  ಫಲಿತಾಂಶಗಳು ಬಂದ ನಂತರ ನಾವು ವಿಶ್ಲೇಷಿಸುತ್ತೇವೆ ಎಂದು ಒಮರ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.

10 ವರ್ಷಗಳ ನಂತರ ವಿಧಾನಸಭೆ ಚುನಾವಣೆ
ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 3 ಹಂತಗಳಲ್ಲಿ ಮತದಾನ ನಡೆದಿತ್ತು. ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದಲ್ಲಿ ಚುನಾವಣೆಯನ್ನು ಎದುರಿಸಿದ್ದು, ಮೆಹಬೂಬಾ ಮುಫ್ತಿ ಅವರ ಪಿಡಿಪಿ ಹಾಗೂ ಬಿಜೆಪಿ ಏಕಾಂಗಿಯಾಗಿಯೇ ಸ್ಪರ್ಧೆ ಮಾಡಿವೆ. ಜಮ್ಮು-ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ ಹಾಗೂ ಆರ್ಟಿಕಲ್ 370 ರದ್ದತಿ ನಡೆದ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ. 

Latest Videos
Follow Us:
Download App:
  • android
  • ios