Asianet Suvarna News Asianet Suvarna News

ಮೋದಿ ಸರ್ಕಾರಕ್ಕೆ ಮತ್ತೊಂದು ಗೆಲುವು, ರಾಜ್ಯಸಭೆಯಲ್ಲೂ ಜಮ್ಮು ಕಾಶ್ಮೀರ ಮೀಸಲು ಮಸೂದೆ ಪಾಸ್!

ಲೋಕಸಭೆಯಲ್ಲಿ ಪಾಸ್ ಆಗಿದ್ದ ಕಾಶ್ಮೀರ ಪಂಡಿತರು, ಪಾಕಿಸ್ತಾನ ಆಕ್ರಮಿತ ನಿರಾಶ್ರಿತರಿಗೆ ಮೀಸಲು ಸ್ಥಾನ ನೀಡಿರುವ ಬಿಲ್ ರಾಜ್ಯಸಭೆಯಲ್ಲೂ ಪಾಸ್ ಆಗಿದೆ. 

Jammu kashmir Reservation and Reorganisation bill passed in Rajya sabha ckm
Author
First Published Dec 11, 2023, 9:32 PM IST

ನವದೆಹಲಿ(ಡಿ.11) ಜಮ್ಮು ಮತ್ತು ಕಾಶ್ಮೀರ ಕುರಿತು ಇಂದು ಮಹತ್ವದ ಬೆಳವಣಿಗೆ ಆಗಿದೆ. ಒಂದೆಡೆ ಸುಪ್ರೀಂ ಕೋರ್ಟ್ ಆರ್ಟಿಕಲ್ 370 ರದ್ದು ಆದೇಶವನ್ನು ಎತ್ತಿಹಿಡಿದಿದೆ. ಇತ್ತ ಕೇಂದ್ರ ಸರ್ಕಾರ ಕಾಶ್ಮೀರ ಕುರಿತು ತಂದ 2 ಬಿಲ್‌ಗಳನ್ನು ರಾಜ್ಯಸಭೆ ಅಂಗೀಕರಿಸಿದೆ.  ಜಮ್ಮು ಮತ್ತು ಕಾಶ್ಮೀರ ಮೀಸಲು (ತಿದ್ದುಪಡಿ) ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್‌ವಿಂಗಡನಾ (ತಿದ್ದುಪಡಿ) ಮಸೂದೆ ಇದೀಗ ರಾಜ್ಯಸಭೆಯಲ್ಲೂ ಪಾಸ್ ಆಗಿದೆ. ಈ ಮಸೂದೆ ತಿದ್ದುಪಡಿಯಲ್ಲಿ ಪ್ರಮುಖ ಅಂಶಗಳ ಪೈಕಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಕಾಶ್ಮೀರದ ಪಂಡಿತರಿಗೆ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಿರಾಶ್ರಿತರಿಗೆ 2 ಸ್ಥಾನ ಮೀಸಲಿಡಲಾಗಿದೆ. 

ಜಮ್ಮು ಮತ್ತು ಕಾಶ್ಮೀರ ಮೀಸಲು (ತಿದ್ದುಪಡಿ) ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್‌ವಿಂಗಡನಾ (ತಿದ್ದುಪಡಿ) ಮಸೂದೆಯನ್ನು ಡಿಸೆಂಬರ್ 6 ರಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದರು. ಈ ಮಸೂದೆಯ ಲೋಕಸಭೆಯಲ್ಲಿ ಪಾಸ್ ಆಗಿತ್ತು. ಇಂದು ರಾಜ್ಯಸಭೆಯಲ್ಲಿ ಈ ಮಸೂದೆ ಮಂಡಿಸಲಾಗಿತ್ತು. ರಾಜ್ಯಸಭೆಯಲ್ಲೂ ಕೇಂದ್ರದ ಈ ಮಸೂದೆಗೆ ಅಂಗೀಕಾರ ದೊರೆತಿದೆ.

ಐತಿಹಾಸಿಕ ಬಿಲ್; J&K ಅಸೆಂಬ್ಲಿಯಲ್ಲಿ ಕಾಶ್ಮೀರಿ ಪಂಡಿತರು, PoK ನಿರಾಶ್ರಿತರಿಗೆ ಸೀಟು ಕಾಯ್ದಿರಿಸಿದ ಕೇಂದ್ರ!

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಜಮ್ಮುಗೆ ಈ ಹಿಂದೆ 37 ಸ್ಥಾನ ಇತ್ತು. ಅದನ್ನು ಇದೀಗ 43ಕ್ಕೆ ಹೆಚ್ಚಿಸಲಾಗಿದೆ. ಅದೇ ರೀತಿ ಕಾಶ್ಮೀರಕ್ಕೆ 46 ಸ್ಥಾನ ಇದ್ದು ಅದನ್ನು 47ಕ್ಕೆ ಹೆಚ್ಚಿಸಲಾಗಿದೆ. ಜೊತೆಗೆ 24 ಸ್ಥಾನಗಳನ್ನು ಪಾಕ್‌ ಆಕ್ರಮಿತ ಕಾಶ್ಮೀರ ಪ್ರದೇಶಕ್ಕೆಂದೇ ಮೀಸಲಿಡಲಾಗಿದೆ ಏಕೆಂದರೆ ಅದು ನಮ್ಮ ಪ್ರದೇಶ ಎಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿ ಮಾತನಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮೀಸಲು ಮಸೂದೆ 2004ರಲ್ಲಿ ತಿದ್ದುಪಡಿ ಮಾಡಲು ಪ್ರಯತ್ನಿಸಲಾಗಿತ್ತು. ಪರಿಶಿಷ್ಠ ಜಾತಿ, ಪಂಡಗಳು, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಸದಸ್ಯರಿಗೆ ವೃತ್ತಿಪರ ಸಂಸ್ಥೆಗಳಲ್ಲಿ ನೇಮಕಾತಿ ಒದಗಿಸಲು ಈ ತಿದ್ದುಪಡಿ ಮಾಡಲಾಗಿತ್ತು. ಇದೀಗ ಈ ಮೀಸಲು ಮಸೂದೆಯಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಸ್ಥಾನ ಮೀಸಲಾತಿಯನ್ನು ಸೇರಿಸಲಾಗಿದೆ.

ಭಾರತದ 2 ಪ್ರಧಾನಿ, 2 ಸಂವಿಧಾನ, 2 ಧ್ವಜ ಪ್ರಮಾದ ಸರಿಪಡಿಸಿದ ಮೋದಿ, ಶಾ ಮಾತಿಗೆ ಸದನ ಸೈಲೆಂಟ್!

Follow Us:
Download App:
  • android
  • ios