ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುವ ಹಿಂದೂಗಳು ಮುಸ್ಲಿಂ ಆಗಿ ಹೊರಬರ್ತಾರೆ: Javed Miandad
ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಎರಡು ತಿಂಗಳ ಮೊದಲು, ಅಯೋಧ್ಯೆಯ ಹೊಸ ರಾಮಮಂದಿರವು ಹಿಂದೂಗಳನ್ನು ಇಸ್ಲಾಂಗೆ ಮತಾಂತರಿಸಲು ಕಾರಣವಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟ್ ನಾಯಕ ಜಾವೇದ್ ಮಿಯಾಂದಾದ್ ಹಳೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗಿದೆ.
ನವದೆಹಲಿ (ನ.17): ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದ ಉದ್ಘಾಟನಾ ಸಮಾರಂಭ ಸಮೀಪಿಸುತ್ತಿದ್ದಂತೆ, ದೇವಾಲಯವನ್ನು ಅವಹೇಳನ ಮಾಡುವ ಮತ್ತು ಅದರ ಮಹತ್ವದ ಬಗ್ಗೆ ಅನುಮಾನವನ್ನು ಉಂಟುಮಾಡುವ ವೀಡಿಯೊಗಳು ಸೋಶಿಯಲ್ ಮೀಡಿಯಾದಲಲ್ಲಿ ಹರಿದಾಡಲು ಪ್ರಾರಂಭಿಸಿವೆ. ಇವುಗಳಲ್ಲಿ ಪ್ರಮುಖವಾಗಿ ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ ಜಾವೇದ್ ಮಿಯಾಂದಾದ್ ಹೊಸ ರಾಮ ಮಂದಿರವು ಹಿಂದೂಗಳು ಇಸ್ಲಾಂಗೆ ಮತಾಂತರಗೊಳ್ಳಲು ಕಾರಣವಾಗುತ್ತದೆ ಎಂದು ಹೇಳಿರುವ ಹಳೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುವ ಹಿಂದೂಗಳು ಮುಸ್ಲಿಮರಾಗಿ ಹೊರಬರುತ್ತಾರೆ. ನಮ್ಮ ಬೇರುಗಳಿಗೆ ಸಂಪರ್ಕವಿರುವ ಸ್ಥಳಗಳಿಗೆ ಭೇಟಿ ನೀಡುವವರ ಮೇಲೆ ನಮ್ಮ ನಂಬಿಕೆ (ಇಸ್ಲಾಂ) ತನ್ನ ಬೆಳಕನ್ನು ಬೆಳಗಿಸುತ್ತದೆ ಎಂಬುದು ನಮ್ಮ ದೃಢವಾದ ನಂಬಿಕೆಯಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಮೂಲಕ ಮೋದಿ ತಪ್ಪು ಮಾಡಿರಬಹುದು, ಆದರೆ ಅದು ನಮಗೆ ವರವಾಗಿ ಕೆಲಸ ಮಾಡುತ್ತದೆ. ಮುಸ್ಲಿಮರು ಮತ್ತೊಮ್ಮೆ ಎದ್ದು ನಿಲ್ಲುವ ಸ್ಥಳ ಇದು ಎಂದು ಅಲ್ಲಾನಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ' ಎಂದು ಮಿಯಾಂದಾದ್ ಈ ವಿಡಿಯೋದಲ್ಲಿ ಹೇಳಿದ್ದಾರೆ.
ಜಾವೇದ್ ಮಿಯಾಂದಾದ್ ಅವರು 2020ರ ಆಗಸ್ಟ್ 8 ರಂದು ಪಿಎಂ ಮೋದಿಯವರಿಂದ ನಿರ್ವಹಿಸಲ್ಪಟ್ಟ ರಾಮ ಮಂದಿರದ ಐತಿಹಾಸಿಕ ಭೂಮಿ ಪೂಜೆ ಸಮಾರಂಭದ ಮೂರು ದಿನಗಳ ನಂತರ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ. ಸಂಪೂರ್ಣ ವೀಡಿಯೊವನ್ನು ಇಲ್ಲಿ ವೀಕ್ಷಿಸಬಹುದು:
ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ನಿಗದಿತ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಎರಡು ತಿಂಗಳ ಮೊದಲು ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ವೈರಲ್ ಆಗಿದೆ. ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.
ಅಯೋಧ್ಯೆ ರಾಮಮಂದಿರದ 3 ಮಹಡಿಯ ಎಲ್ಲಾ 18 ಬಾಗಿಲಿಗೆ ಸ್ವರ್ಣ ಲೇಪನ
ದೇಶದ ಪ್ರಖ್ಯಾತ ಸಂನ್ಯಾಸಿಗಳು, ಪ್ರಮುಖ ವ್ಯಕ್ತಿಗಳು ಮತ್ತು ಹಲವಾರು ಭಕ್ತರು ಪವಿತ್ರ ಸಮಾರಂಭದಲ್ಲಿ ಪಾಲ್ಗೊಳ್ಳಲು ಈಗಾಗಲೇ ಆಹ್ವಾನ ಸ್ವೀಕಾರ ಮಾಡಿದ್ದಾರೆ. ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಅಯೋಧ್ಯೆಯಲ್ಲಿ ಮೂರು ಅಂತಸ್ತಿನ ರಾಮಮಂದಿರದ ನೆಲ ಅಂತಸ್ತಿನ ನಿರ್ಮಾಣವು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳುವ ಹಾದಿಯಲ್ಲಿದೆ ಎಂದು ಇತ್ತೀಚೆಗೆ ದೃಢಪಡಿಸಿದ್ದಾರೆ.
ಅಯೋಧ್ಯೆ ರಾಮಮಂದಿರದಲ್ಲಿ ಅಕ್ಷತೆ ಪೂಜೆ: ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ