ಬಿಹಾರದಿಂದ ರಾಜ್ಯಸಭೆಗೆ ಕನ್ನಡಿಗ ಅನಿಲ್ ಹೆಗ್ಡೆಗೆ ಟಿಕೆಟ್ ನೀಡಿದ ಜೆಡಿಯು

* ಬಿಹಾರ್ ರಾಜ್ಯಸಭಾ ಉಪಚುನಾವಣೆ
* ಬಿಹಾರದಿಂದ ರಾಜ್ಯಸಭೆಗೆ ಕನ್ನಡಿಗ ಅನಿಲ್ ಹೆಗ್ಡೆಗೆ ಟಿಕೆಟ್ ನೀಡಿದ ಜೆಡಿಯು
* ಸುದೀರ್ಘ ಅವಧಿ ವರೆಗೆ ಜಾರ್ಜ್ ಫರ್ನಾಂಡಿಸ್ ರ ಕಾರ್ಯದರ್ಶಿಯಾಗಿದ್ದ ಅನಿಲ್ ಹೆಗ್ಡೆ

JDU Announces  Rajya Sabha by-election ticket for Kannadiga Anil Hegde from Bihar rbj

ಪಾಟ್ನಾ, (ಮೇ.16):ಬಿಹಾರದಿಂದ ರಾಜ್ಯಸಭೆ  ಉಪಚುನಾವಣೆಗೆ ಕನ್ನಡಿಗ ಅನಿಲ್ ಹೆಗ್ಡೆ ಅವರಿಗೆ ಜೆಡಿಯು ಟಿಕೆಟ್ ನೀಡಿದೆ. ಮೂಲತಃ ಮಂಗಳೂರಿನವರಾಗಿದ್ದ ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿ ವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿದ್ದರು.

ಮಹೇಂದ್ರ ಪ್ರಸಾದ್ ಅವರ ನಿಧನದಿಂದ ತೆರವಾದ ರಾಜ್ಯಸಭಾ ಉಪಚುನಾವಣೆಗೆ ಜೆಡಿಯು ಮಂಗಳೂರು ಮೂಲದ ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿದೆ.

57 ರಾಜ್ಯಸಭಾ ಸ್ಥಾನಗಳಿಗೆ ಜೂ.10ರಂದು ಚುನಾವಣೆ

ಕಳೆದ ವರ್ಷ ಡಿಸೆಂಬರ್ 27 ರಂದು ಜನತಾ ದಳ ಯುನೈಟೆಡ್ (ಜೆಡಿಯು) ಸಂಸದ ಮಹೇಂದ್ರ ಪ್ರಸಾದ್ ಅವರ ನಿಧನದ ನಂತರ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಬಿಹಾರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದೇ ಮೇ 30ರಂದು ಉಪಚುನಾವಣೆ ನಡೆಯಲಿದೆ.

 ಕಿಂಗ್ ಮಹೇಂದ್ರ ಎಂದೇ ಖ್ಯಾತರಾಗಿರುವ ಮಹೇಂದ್ರ ಪ್ರಸಾದ್ ಅವರು ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಯಾಗಿ ದಾಖಲೆಯ ಏಳನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 

ರಾಜ್ಯಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ. ಮತದಾನ ಮೇ 30ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಡೆಯಲಿದೆ. ಮತದಾನ ಮುಗಿದ ನಂತರ ಅದೇ ದಿನ ಮತ ಎಣಿಕೆ ನಡೆಯಲಿದೆ.

ಈ ಆಯ್ಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ನಾಯಕರೊಬ್ಬರು, ರಾಜ್ಯಸಭಾ ಉಪಚುನಾವಣೆಗೆ ಅನಿಲ್ ಹೆಗ್ಡೆಯವರ ನಾಮಪತ್ರ ಘೋಷಣೆ ಆಶ್ಚರ್ಯ ತಂದಿದೆ. ಇದು ಸಂಘಟನೆ ಮತ್ತು ಪಕ್ಷಕ್ಕಾಗಿ ಮೌನವಾಗಿ ದುಡಿಯುತ್ತಿರುವ ವ್ಯಕ್ತಿಗೆ ಸಿಕ್ಕ ಪ್ರತಿಫಲವಾಗಿದೆ. ಅವರ ಕೊಡುಗೆಯನ್ನು ಜೆಡಿಯ ಪಕ್ಷ ಗುರುತಿಸಿದೆ. ಅವರು ಬಿಹಾರದಿಂದ ನಾಮನಿರ್ದೇಶಿತರಾಗುತ್ತಾರೆ ಎಂದು ಹೇಳಿದ್ದಾರೆ. 

ಬಿಜೆಪಿಯ ಮಿತ್ರ ಪಕ್ಷವಾದ ಜೆಡಿ (ಯು) ಉಪಚುನಾವಣೆಯಲ್ಲಿ ಸ್ಥಾನವನ್ನು ಪಡೆಯಲು ಸಿದ್ಧವಾಗಿದೆ. ಅನಿಲ್ ಹೆಗ್ಡೆಯವರು ಕರ್ನಾಟಕದ ಮಂಗಳೂರಿನವರು. ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿಕಟವರ್ತಿ ಎಂದು ಪರಿಗಣಿಸಲಾಗಿದೆ. ಅನಿಲ್ ಹೆಗ್ಡೆ ಬಹಳ ವಿನಮ್ರ ಮತ್ತು ಸಂಘಟನಾಶೀಲ ವ್ಯಕ್ತಿಯಾಗಿದ್ದು, ದಶಕಗಳಿಂದ ಜೆಡಿಯು ಪಕ್ಷದೊಂದಿಗೆ ಕೆಲಸ ಮಾಡುತ್ತಿದ್ದಾರೆ. ಅವರು ಪಾಟ್ನಾದಲ್ಲಿ ನೆಲೆಸಿದ್ದಾರೆ ಮತ್ತು ಪಕ್ಷದ ಸಂಘಟನೆಯನ್ನು ಬಲಪಡಿಸಲು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 

Latest Videos
Follow Us:
Download App:
  • android
  • ios