Asianet Suvarna News Asianet Suvarna News

ನಾಲ್ಕೇ ತಿಂಗಳಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ರಾಜೀನಾಮೆ!

ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಾರ್ಖಂಡ್ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದೆ. ಹಾಲಿ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ.
 

Jharkhand cm champai soren tender his resignation hemant soren likely to return ckm
Author
First Published Jul 3, 2024, 8:03 PM IST

ರಾಂಚಿ(ಜು.04) ಜಾರ್ಖಂಡ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿಯಾಗಿರುವ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಮಖ್ಯಮಂತ್ರಿ ಹೇಮಂತ್ ಸೊರೇನ್ ಬಿಡುಗಡೆಯಾಗುತ್ತಿದ್ದಂತೆ ಇತ್ತ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ.

ರಾಜೀನಾಮ ಬಳಿಕ ಮಾತನಾಡಿದ ಚಂಪೈ ಸೊರೇನ್, ಕೆಲ ದಿನಗಳ ಕಾಲ ನಾನು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ನನಗೆ ಮಹತ್ತರ ಜವಾಬ್ದಾರಿ ನೀಡಲಾಗಿತ್ತು. ಈ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಇದೀಗ ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆಯಾಗಿ ಮರಳಿದ್ದಾರೆ. ಮೈತ್ರಿ ಕೂಟ ಪಕ್ಷಗಳು ಒಮ್ಮತದಿಂದ ಈ ನಿರ್ಧಾರ ತೆಗೆದಕೊಂಡಿದೆ. ಎಲ್ಲಾ ನಾಯಕರು ಹೇಮಂತ್ ಸೊರೇನ್ ಅವರನ್ನು ನಮ್ಮ ನಾಯಕನಾಗಿ ಆಯ್ಕೆ ಮಾಡಿದ್ದೇವೆ ಎಂದು ಚಂಪೈ ಸೊರೇನ್ ಹೇಳಿದ್ದಾರೆ. 

ಅಕ್ರಮ ಹಣ ವರ್ಗಾವಣೆ ಕೇಸ್‌: 5 ತಿಂಗಳ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

ಇಂದು ನಡೆದ ಸಭೆಯಲ್ಲಿ ನಾವು ಹೇಮಂತ್ ಸೊರೇನ್ ಅವರನ್ನು ನಮ್ಮ ನಾಯನಾಗಿ ಆಯ್ಕೆ ಮಾಡಿದ್ದೇವೆ. ನಾಳೆ ಹೇಮಂತ್ ಸೊರೇನ್ ಮುಖ್ಯಮಂತ್ರಿಯಾಗಿ ಅದಿಕಾರವಹಿಸಿಕೊಳ್ಳಲಿದ್ದಾರೆ. ಇತ್ತ ಚಂಪೈ ಸೊರೇನ್ ಅಚ್ಚುಕಟ್ಟಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಇದೀಗ ರಾಜೀನಾಮೆ ನೀಡಿದ್ದಾರೆ ಎಂದು ಜಾರ್ಖಂಡ್ ಸಚಿವ ಬನ್ನಾ ಗುಪ್ತಾ ಹೇಳಿದ್ದಾರೆ. 

ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧಿತರಾಗಿದ್ದ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಸ್ಥಳೀಯ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿತ್ತು. ಇಂದು ಬಿಡುಗಡೆಯಾಗಿದ್ದಾರೆ. 5 ತಿಂಗಳ ಬಳಿಕ ಸೊರೇನ್‌ ಬಂಧಮುಕ್ತರಾಗಿದ್ದಾರೆ. ಸೊರೇನ್‌ ಅವರ ಜಾಮೀನು ಅರ್ಜಿಯ ಆದೇಶವನ್ನು ಹೈಕೋರ್ಟ್ ಜೂನ್ 13ರಂದು ಕಾಯ್ದಿರಿಸಿತ್ತು. ವಿಪಕ್ಷಗಳು ಜಾಮೀನು ಆದೇಶದ ಬಗ್ಗೆ ಹರ್ಷ ವ್ಯಕ್ತಪಡಿಸಿವೆ. ಜಾರ್ಖಂಡ್‌ನಲ್ಲಿ ಸೊರೇನ್‌ ಬೆಂಬಲಿಗರು ಸಂಭ್ರಮಿಸಿದ್ದಾರೆ.

ರಾಂಚಿಯಲ್ಲಿ ಇಂಡಿಯಾ ಮಹಾ ಶಕ್ತಿ ಪ್ರದರ್ಶನ: ಹೇಮಂತ್ ಸೊರೇನ್, ಕೇಜ್ರಿವಾಲ್‌ಗೆ ಖಾಲಿ ಕುರ್ಚಿ ಇಟ್ಟು ಗೌರವ

ಈ ಬಗ್ಗೆ ಹೇಳಿಕೆ ನೀಡಿರುವ ಸೋರೆನ್ ಅವರ ಹಿರಿಯ ವಕೀಲ ಅರುಣಾಭ್ ಚೌಧರಿ, ‘ನ್ಯಾಯಾಲಯವು ಮೇಲ್ನೋಟಕ್ಕೆ ಸೊರೇನ್‌ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಎಂದು ಮನಗಂಡಿದೆ ಮತ್ತು ಜಾಮೀನಿನ ಮೇಲೆ ಬಿಡುಗಡೆ ಆದಾಗ ಅವರು ಅಪರಾಧ ಮಾಡುವ ಸಾಧ್ಯತೆಯಿಲ್ಲ ಎಂದು ಅಭಿಪ್ರಾಯಪಟ್ಟಿದೆ’ ಎಂದಿದ್ದಾರೆ.
 

Latest Videos
Follow Us:
Download App:
  • android
  • ios