Asianet Suvarna News Asianet Suvarna News

'ಶೀಘ್ರದಲ್ಲೇ ಪುಲ್ವಾಮಾ ಮಾದರಿ ದಾಳಿ’: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿದ್ಯಾರ್ಥಿ ಬಂಧನ

'ಶೀಘ್ರದಲ್ಲೇ ಪುಲ್ವಾಮಾ ರೀತಿಯ ದಾಳಿ ನಡೆಯಲಿದೆ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಜಾರ್ಖಂಡ್ ಮೂಲದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

jharkhand student detained after social media post on pulwama like attack soon ash
Author
First Published Dec 27, 2023, 3:37 PM IST

ನವದೆಹಲಿ (ಡಿಸೆಂಬರ್ 27, 2023): ಸಾಮಾಜಿಕ ಜಾಲತಾಣದ ಪೋಸ್ಟ್‌ವೊಂದಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ವಿದ್ಯಾರ್ಥಿಯೊಬ್ಬನನ್ನು ಬುಧವಾರ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಜಾರ್ಖಂಡ್ ಮೂಲದ ವಿದ್ಯಾರ್ಥಿ, 'ಶೀಘ್ರದಲ್ಲೇ ಪುಲ್ವಾಮಾ ರೀತಿಯ ದಾಳಿ ನಡೆಯಲಿದೆ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಎಂದು ವಿವರಗಳು ಹೇಳುತ್ತಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಕೂಡ ದಾಖಲಾಗಿದ್ದು, ಆರೋಪಿ ವಿದ್ಯಾರ್ಥಿಯೊಂದಿಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಸಹರಾನ್‌ಪುರ ಪೊಲೀಸರು ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ ಮತ್ತು ತಂಡವು ವಿಚಾರಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ಎಕ್ಸ್‌ ಪೋಸ್ಟ್‌ ( ಈ ಹಿಂದಿನ ಟ್ವಿಟ್ಟರ್‌) ನಲ್ಲಿ ಖಚಿತಪಡಿಸಲಾಗಿದೆ.

ಇದನ್ನು ಓದಿ: ಜಮ್ಮು - ಕಾಶ್ಮೀರದಲ್ಲಿ ಸೇನೆ ಮೇಲೆ ದಾಳಿ: ಚೀನಾ ನಿರ್ಮಿತ ಶಸ್ತ್ರಾಸ್ತ್ರ ಬಳಸ್ತಿರೋ ಭಯೋತ್ಪಾದಕರು

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮೂವರನ್ನು ಬಂಧಿಸಿ ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಶಂಕಿತರನ್ನು ಸೇನೆ ಮತ್ತು ಪೊಲೀಸರು ಜಂಟಿಯಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದೂ ತಿಳಿದುಬಂದಿದೆ.

2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದರು. ಫೆಬ್ರವರಿ 14 ರಂದು ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಬೆಂಗಾವಲು ವಾಹನದ ಮೇಲೆ ಲೆಥಾಪೋರಾದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಿದಾಗ ಈ ಘಟನೆ ಸಂಭವಿಸಿತ್ತು. 

ಇದನ್ನು ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ನಿವೃತ್ತ ಪೊಲೀಸ್ ಅಧಿಕಾರಿ: ಮತ್ತೆ ಭಯೋತ್ಪಾದಕರ ಅಟ್ಟಹಾಸ!

ನಂತರ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಆದರೂ, 2019 ರಲ್ಲಿ ನಡೆದ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಈ ಘಟನೆಯನ್ನು ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿತು. ಹಾಗೆ, ಇದರಿಂದ ಬಿಜೆಪಿಗೆ ಮರಳಿ ಅಧಿಕಾರಕ್ಕೆ ಬರಲು ಲಾಭವಾಯಿತು ಎಂದೂ ಹಲವರು ಆರೋಪಿಸಿದ್ದರು.

ಇದನ್ನು ಓದಿ: ಕಾಶ್ಮೀರಿ ಉಗ್ರರ ಜೊತೆ ಸೇರಿ ಪನ್ನು ಹೊಸ ಉಗ್ರ ಸಂಘಟನೆ! ಕಾಶ್ಮೀರ್ - ಖಲಿಸ್ತಾನ್ ರೆಫರೆಂಡಮ್‌ ಫ್ರಂಟ್‌ ಘೋಷಣೆ

ಉಗ್ರರ ಗುಂಡೇಟಿನಿಂದಾಗಿ 8 ವರ್ಷ ಕೋಮಾದಲ್ಲಿದ್ದ ಯೋಧ ಕರಣ್‌ಬೀರ್‌ ಸಾವು

Follow Us:
Download App:
  • android
  • ios