Asianet Suvarna News Asianet Suvarna News

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ, ಸೇನಾಪಡೆಗಳ ಪೂರ್ಣ ನಿಯೋಜನೆಗೆ ಮೋದಿ ಸೂಚನೆ!

ಪ್ರಧಾನಿ ಮೋದಿ ಅವರು ಎನ್‌ಎಸ್‌ಎ ಮತ್ತು ಇತರ ಅಧಿಕಾರಿಗಳೊಂದಿಗೆ ಜೆ & ಕೆ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿಯನ್ನು ನಿಯೋಜಿಸಲು ಮೋದಿ ಸೂಚನೆ ನೀಡಿದ್ದಾರೆ.

JK review meeting PM Modi directs deployment full spectrum counter terror capabilities san
Author
First Published Jun 13, 2024, 4:13 PM IST | Last Updated Jun 13, 2024, 4:13 PM IST

ನವದೆಹಲಿ (ಜೂ.13): ಜಮ್ಮುಕಾಶ್ಮೀರದ ರಯಾಸಿ ಜಿಲ್ಲೆಯಲ್ಲಿ ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಬಸ್‌ನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಇದರಲ್ಲಿ ಒಟ್ಟು 9 ಮಂದಿ ಸಾವು ಕಂಡಿದ್ದರು. ಇದರ ಬೆನ್ನಲ್ಲಿಯೇ ಜಮ್ಮು ಕಾಶ್ಮೀರದ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕಣಿವೆ ರಾಜ್ಯದಲ್ಲಿ ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳನ್ನು ಇನ್ನಷಟು ಬಲಪಡಿಸಬೇಕು. ಅದಕ್ಕಾಗಿ ಸೇನಾಪಡೆಗಳ ಪೂರ್ಣ ನಿಯೋಜನೆಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.  ಸುದ್ದಿ ಸಂಸ್ಥೆ ANI ವರದಿ ಮಾಡಿದಂತೆ, ಜಮ್ಮು ಮತ್ತು ಕಾಶ್ಮೀರದಲ್ಲಿ (ಜೆ & ಕೆ) ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.  ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯ ನಂತರ, ಅವರು ರಾಷ್ಟ್ರದ ಸಂಪೂರ್ಣ ಭಯೋತ್ಪಾದನಾ ಸಾಮರ್ಥ್ಯಗಳನ್ನು ಸಜ್ಜುಗೊಳಿಸಲು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಮತ್ತು ಇತರ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಧಾನಿ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಭದ್ರತಾ ಪಡೆಗಳ ತಕ್ಷಣದ ನಿಯೋಜನೆ ಮತ್ತು ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ಬಗ್ಗೆ ಚರ್ಚೆ ಮಾಡಿದ್ದಾರೆ. ಅದರೊಂದಿಗೆ ಜೆ & ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೂ ಸರ್ಕಾರ ಮಾತುಕತೆ ನಡೆಸಿದ್ದು, ಭಯೋತ್ಪಾದನೆ ನಿಗ್ರಹಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದಾರೆ.
ಜೂನ್ 9 ರಂದು, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ ಕಮರಿಗೆ ಬಿದ್ದಿತು. ಉತ್ತರ ಪ್ರದೇಶ ಮತ್ತು ದೆಹಲಿಯಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಮರಿಗೆ ಬಿದ್ದಿದ್ದರಿಂದ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದರೆ, 33 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪೊಲೀಸ್ ಮತ್ತು ಭದ್ರತಾ ಪಡೆಗಳ ಜಂಟಿ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದಾಗ ಗುಂಡಿನ ಚಕಮಕಿ ನಡೆಯಿತು, ಐವರು ಯೋಧರು ಮತ್ತು ಒಬ್ಬ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಕಥುವಾ ಜಿಲ್ಲೆಯ ಸರ್ತಾಲ್ ಪ್ರದೇಶದ ಗಡಿಯಲ್ಲಿರುವ ಚತ್ತರ್‌ಗಲಾ ಪ್ರದೇಶದಲ್ಲಿನ ಸೇನಾ ನೆಲೆಯಲ್ಲಿ ಪೊಲೀಸ್ ಮತ್ತು ರಾಷ್ಟ್ರೀಯ ರೈಫಲ್ಸ್‌ನ ಜಂಟಿ ಚೆಕ್‌ಪಾಯಿಂಟ್‌ನಲ್ಲಿ ದಾಳಿ ನಡೆದಿದೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಭಯೋತ್ಪಾದಕರು ಚೆಕ್‌ಪಾಯಿಂಟ್‌ನತ್ತ ಗ್ರೆನೇಡ್ ಎಸೆದರು, ಇದರಿಂದಾಗಿ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ನಂತರ, ಜೈಶ್-ಎ-ಮೊಹಮ್ಮದ್-ಸಂಬಂಧಿತ ಭಯೋತ್ಪಾದಕ ಗುಂಪು ಕಾಶ್ಮೀರ ಟೈಗರ್ಸ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿತು.

ಮೋದಿ ಎಂದಾದರೂ ಮುಸ್ಲಿಂ ಟೋಪಿ ಧರಿಸಲಿ: ನಟ ನಾಸಿರುದ್ದೀನ್‌ ಶಾ

ಇನ್ನೊಂದು ಘಟನೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್‌ ಯೋಧ ಸಾವು ಕಂಡಿದ್ದರೆ, ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಲಾಗಿತ್ತು. ಸ್ಥಳೀಯ ನಿವಾಸಿಯೊಬ್ಬರು ಅನುಮಾನಾಸ್ಪದ ಚಲನವಲನವನ್ನು ಗುರುತಿಸಿ ಎಚ್ಚರಿಕೆಯನ್ನು ನೀಡಿದಾಗ ಈ ಘಟನೆ ನಡೆದಿತ್ತು. ಭಯೋತ್ಪಾದಕರು ಗುಂಡು ಹಾರಿಸಿ ಮನೆಯೊಳಗೆ ಆಶ್ರಯ ಪಡೆದಿದ್ದರು. ಗಾಯಗೊಂಡ ನಾಗರಿಕರನ್ನು ಚಿಕಿತ್ಸೆಗಾಗಿ ಕಥುವಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಮೋದಿ ಭೇಟಿಗೂ ಮುನ್ನ ಇಟಲಿಯಲ್ಲಿ ಖಲಿಸ್ತಾನಿ ಉಗ್ರ ಸಂಘಟನೆ ಅಟ್ಟಹಾಸ, ಗಾಂಧಿ ಪ್ರತಿಮೆ ಧ್ವಂಸ!

Latest Videos
Follow Us:
Download App:
  • android
  • ios