Asianet Suvarna News Asianet Suvarna News

ಸುಪ್ರೀಂಕೋರ್ಟ್ ನೂತನ ಸಿಜೆಐ ಎನ್​. ವಿ. ರಮಣ ಪ್ರಮಾಣವಚನ ಸ್ವೀಕಾರ!

ಸುಪ್ರೀಂಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ| ಪ್ರಮಾಣವಚನ ಬೋಧಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್| ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮ

Justice NV Ramana Sworn In As New Chief Justice Of India pod
Author
Bangalore, First Published Apr 24, 2021, 12:25 PM IST

ನವದೆಹಲಿ(ಏ.24): ಭಾರತದ ಸುಪ್ರೀಂಕೋರ್ಟ್​​​​ನ  ಮುಖ್ಯನ್ಯಾಯಮೂರ್ತಿಯಾಗಿ ಎನ್​. ವಿ. ರಮಣ ಇಂದು, ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ನೂತನ ಸಿಜೆಐ ರಮಣರಿಗೆ ಪ್ರಮಾಣವಚನ ಬೋಧಿಸಿದ್ದಾರೆ.  ಎನ್​. ವಿ.ರಮಣ ಸಿಜೆಐ ಆಗಿ 2022ರ ಆಗಸ್ಟ್ 26ರವರೆಗೆ ಮುಂದುವರೆಯಲಿದ್ದಾರೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ  ಎನ್​. ವಿ. ರಮಣ ಅಧಿಕಾರ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್ ಈ ಹಿಂದಿನ ಮುಖ್ಯನ್ಯಾಯಮೂರ್ತಿ ಎಸ್. ಎ. ಬೊಬ್ಡೆ ಶುಕ್ರವಾರ ನಿವೃತ್ತಿಗೊಂಡ ಬಳಿಕ ಈ ಸ್ಥಾನವನ್ನು 63 ವರ್ಷದ ನ್ಯಾಯಮೂರ್ತಿ ರಮಣ ತುಂಬಿದ್ದಾರೆ. 

ಎನ್​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ್ದಾರೆ. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಪ್ರಾರಂಭಿಸಿದ ರಮಣರವರು 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು. 

2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್​ ಆಗಿ ನೇಮಕಗೊಂಡಿದ್ದಾರೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ಇತ್ತೀಚೆಗಷ್ಟೇ ಈ ಆರೋಪದಿಂದ ಇವರಿಗೆ ಕ್ಲೀನ್​ಚಿಟ್​ ಪಡೆದಿದ್ದಾರೆ.

Follow Us:
Download App:
  • android
  • ios