ಮೋದಿ 3.O ಸಂಪುಟದಲ್ಲಿ ಅಣ್ಣಾಮಲೈ? ಸಿಂಗಂಗೆ ಸಿಗುವ ಖಾತೆ ಯಾವುದು?
ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. 2021ರಲ್ಲಿ ಬಿಜೆಪಿ ಅಣ್ಣಾಮಲೈ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇದೀಗ ಚುನಾವಣೆಯಲ್ಲಿ ಸೋತರೂ ಅಣ್ಣಾಮಲೈಗೆ ಸಂಪುಟ ದರ್ಜೆಯ ಸ್ಥಾನಮಾನ ಸಿಗುತ್ತೆ ಎನ್ನಲಾಗುತ್ತಿದೆ.
ನವದೆಹಲಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈಗೆ (Tamil Nadu BJP President Annamalai) ಅವರಿಗೆ ಮೋದಿ 3.O ಕ್ಯಾಬಿನೆಟ್‌ನಲ್ಲಿ (Modi 3.O Cabinet) ಸ್ಥಾನ ಸಿಗುವ ಸಾಧ್ಯತೆಗಳಿವೆ. ಇಂದು ಸಂಜೆ ನರೇಂದ್ರ ಮೋದಿ (Narendra Modi) ಮೂರನೇ ಬಾರಿಗೆ ಪ್ರಧಾನ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ನರೇಂದ್ರ ಮೋದಿ ಜೊತೆಯಲ್ಲಿ ಸುಮಾರು 30 ಸಂಸದರು ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
39 ವರ್ಷದ ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಕೆ ಅಣ್ಣಾಮಲೈ ಈ ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಡಿಎಂಕೆಯ ಗಣಪತಿ ರಾಜ್‌ಕುಮಾರ್ ವಿರುದ್ಧ ಅಣ್ಣಾಮಲೈ 1.18 ಲಕ್ಷ ಮತಗಳ ಅಂತರದಿಂದ ಸೋತಿದ್ದರು. ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. 2021ರಲ್ಲಿ ಬಿಜೆಪಿ ಅಣ್ಣಾಮಲೈ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇದೀಗ ಚುನಾವಣೆಯಲ್ಲಿ ಸೋತರೂ ಅಣ್ಣಾಮಲೈಗೆ ಸಂಪುಟ ದರ್ಜೆಯ ಸ್ಥಾನಮಾನ ಸಿಗುತ್ತೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಣ್ಣಾಮಲೈಯವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವ ಸಾಧ್ಯತೆಗಳಿವೆ.
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಸೋಲು; ಹುಟ್ಟು ಹಬ್ಬದ ದಿನವೇ ಶಾಕ್
ಎನ್‌ಡಿಟಿವಿ ವರದಿ ಪ್ರಕಾರ ಇಂದು ಸಂಜೆ ಸುಮಾರು 30 ಜನರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಕ್ಷಣಾ, ಗಣಿ ಕಲ್ಲಿದ್ದಲು, ನಾಗರಿಕ ವಿಮಾನಾಯನ, ವಿದೇಶಾಂಗ, ಹಣಕಾಸು, ಗೃಣ ಸೇರಿದಂತೆ ಪ್ರಮುಖ ಖಾತೆಗಳ ಹಂಚಿಕೆ ಇಂದೇ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಬಾರಿ ಯಾವ ಪಕ್ಷಕ್ಕೂ ಬಹುಮತ ಸಿಗದ ಹಿನ್ನೆಲೆ ಟಿಡಿಪಿ, ಜೆಡಿಯು ಬೆಂಬಲದೊಂದಿಗೆ ಬಿಜೆಪಿ ಮೂರನೇ ಬಾರಿ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುತ್ತಿದೆ.
ಚುನಾವಣೆ ಸೋಲಿನ ಬಗ್ಗೆ ಅಣ್ಣಾಮಲೈ ಹೇಳಿದ್ದೇನು?
ಅಣ್ಣಾಮಲೈ ಸೋಲನ್ನು ಡಿಎಂಕೆ ನಾಯಕಿ, ಮಾಜಿ ಸಿಎಂ ಕರುಣಾನಿಧಿ ಪುತ್ರಿ ಕನ್ನಿಮೋಳಿ ಕುಹಕವಾಡಿದ್ದಾರೆ. ಇದಕ್ಕೆ ಖಡಕ್ ಪ್ರತಿಕ್ರಿಯೆ ನೀಡಿದ ಅಣ್ಣಾಮಲೈ, ನನ್ನ ತಂದೆ ಕರುಣಾನಿದಿಯಾಗಿದ್ದರೆ ನಾನು ಸುಲಭದಲ್ಲಿ ಗೆಲ್ಲುತ್ತಿದ್ದೆ ಎಂದಿದ್ದಾರೆ.
ಅಣ್ಣಾಮಲೈನನ್ನು ಹರಕೆಯ ಮೇಕೆ ಮಾಡಿ ತಲೆ ಕತ್ತರಿಸಿದ ಡಿಎಂಕೆ ಸದಸ್ಯರು
ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವೋಟ್ ಶೇರ್ ಶೇಕಡಾ 11ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ನೋಟಾ ಪಾರ್ಟಿ ಎಂದು ಹೀಯಾಳಿಸುತ್ತಿದ್ದರು. ಈ ಚುನಾವಣೆಯಲ್ಲಿ ತಮಿಳುನಾಡು ಬಿಜೆಪಿಯತ್ತ ವಾಲುತ್ತಿರುವುದು ಸ್ಪಷ್ಟವಾಗಿದೆ. ಇದೀಗ ಹಲವರು ನಮ್ಮ ಸೋಲನ್ನು ಸಂಭ್ರಮಿಸುತ್ತಿದ್ದಾರೆ. ಆದರೆ 2026ರಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಎಚ್ಚರಿಸಿದ್ದಾರೆ.