Asianet Suvarna News Asianet Suvarna News

Kangana Ranaut ಹೇಳಿಕೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಅವಮಾನ : ಬಿಜೆಪಿ ವಕ್ತಾರ!

*2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ : ಕಂಗನಾ
*ರಣಾವತ್‌ ಹೇಳಿಕೆಗೆ ಹಲವರಿಂದ ತೀವ್ರ ಆಕ್ರೋಶ
*ಹೋರಾಟಗಾರರ ತ್ಯಾಗಕ್ಕೆ ಅವಮಾನ ಎಂದ ಬಿಜೆಪಿ ವಕ್ತಾರ!

Kangana Ranaut India got freedom in 2014 comment an insult to freedom fighters said Praveen shankar Kapoor mnj
Author
Bengaluru, First Published Nov 12, 2021, 9:42 PM IST
  • Facebook
  • Twitter
  • Whatsapp

ನವದೆಹಲಿ(ನ.12): ದೆಹಲಿ ಭಾರತೀಯ ಜನತಾ ಪಕ್ಷದ ವಕ್ತಾರ (BJP spokesperson) ಪ್ರವೀಣ್ ಶಂಕರ್ ಕಪೂರ್ (Praveen shankar Kapoor) ಅವರು ಗುರುವಾರ, ನಟಿ ಕಂಗನಾ ರಣಾವತ್ ಅವರು ಭಾರತಕ್ಕೆ 2014 ರಲ್ಲಿ ಸ್ವಾತಂತ್ರ್ಯ ಸಿಕ್ಕಿತು ಮತ್ತು 1947 ರಲ್ಲಿ ದೇಶಕ್ಕೆ ಸಿಕ್ಕಿದ್ದು ದಾನ ಎಂದು ಹೇಳಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಬಾಲಿವುಡ್‌ ನಟಿ ಕಂಗಾನ ಹೇಳಿಕೆಗೆ ಪ್ರವೀಣ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Kangana Ranaut: ಬೇಗ ಮದ್ವೆಯಾಗ್ಬೇಕು, ಮ್ಯಾರೇಜ್ ಪ್ಲಾನ್ಸ್ ಹೇಳಿದ ಕ್ವೀನ್

ಭಾರತದ ಸ್ವಾತಂತ್ರ್ಯ ಚಳವಳಿಯ ಬಗ್ಗೆ ಮಾತನಾಡಿ, ಕಂಗನಾ ಇತ್ತೀಚೆಗೆ 2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ (Freedom) ಸಿಕ್ಕಿತು ಎಂದು ಹೇಳಿದ್ದಾರೆ. ಸ್ಪಷ್ಟವಾಗಿ ನರೇಂದ್ರ ಮೋದಿ (Narendra Modi) ಪ್ರಧಾನಿಯಾಗುವುದನ್ನು ಉಲ್ಲೇಖಿಸಿ ಹೀಗೆ ಹೇಳಿದ್ದಾರೆ. ವೀರ್ ಸಾವರ್ಕರ್ (Veer Savarkar) ಕುರಿತ ಪ್ರಶ್ನೆಗೆ ಉತ್ತರಿಸಿದ ಕಂಗನಾ, ಕಾಂಗ್ರೆಸ್ ಬ್ರಿಟಿಷರ (Britsh) ವಿಸ್ತರಣೆಯಾಗಿದೆ. ದೇಶಕ್ಕೆ 1947 ರಲ್ಲಿ ಭಿಕ್ಷೆ ಸಿಕ್ಕಿತು. 2014 ರಲ್ಲಿ ನಿಜವಾದ ಸ್ವಾತಂತ್ರ್ಯ ಬಂದಿತು ಎಂದು ಹೇಳಿದ್ದಾರೆ. ಕಂಗನಾ ಹೇಳಿಕೆ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿದ್ದು ಹಲವು ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ ಹೋರಾಟಗಾರರ ತ್ಯಾಗಕ್ಕೆ ಅವಮಾನ !

ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿ ಪ್ರವೀಣ್ ಶಂಕರ್ ಕಪೂರ್ ಅವರು ಟ್ವೀಟ್ (tweet) ಮಾಡಿದ್ದು "ಸ್ವಾತಂತ್ರ್ಯ ಹೋರಾಟಗಾರನ ಮಗನಾಗಿರುವ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದಿರುವ ನನಗೆ ಕಂಗನಾ ರಣಾವತ್ ಅವರ ಹೇಳಿಕೆಯು  ಸ್ವಾತಂತ್ರ್ಯದ ಅತಿದೊಡ್ಡ ದುರುಪಯೋಗ ಮತ್ತು ಸ್ವಾತಂತ್ರ ಹೋರಾಟಗಾರರ ತ್ಯಾಗಕ್ಕೆ ಅವಮಾನ ಎಂದೆನಿಸುತ್ತದೆ" ಎಂದು ಹೇಳಿದ್ದಾರೆ. ಆಕೆಯ ಹೇಳಿಕೆಯನ್ನು ಭಾರತದ ನ್ಯಾಯಾಂಗ ವ್ಯವಸ್ಥೆಯು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದರು. ಈ ಮೂಲಕ ನ್ಯಾಯಾಂಗ ವ್ಯವಸ್ಥೆ ಕಂಗನಾ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 

 

ಡ್ರಗ್ಸ್ ತಗೊಂಡ್ರಾ ಕಂಗನಾ ? ಡೋಸ್ ಜಾಸ್ತಿ ಆಯ್ತು ಎಂದ ಸಚಿವ

2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ಕಂಗನಾ ರಣಾವತ್(Kangana Ranaut) ಹೇಳಿಕೆಯನ್ನು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಖಂಡಿಸಿದ್ದಾರೆ. ಬಾಲಿವುಡ್(Bollywood) ನಟಿ ಮಲಾನಾ ಕ್ರೀಮ್ ಅನ್ನು ಹೆಚ್ಚು ಸೇವಿಸುತ್ತಿರುವಂತೆ ತೋರುತ್ತಿದೆ ಎಂದು ಸಚಿವ ಟೀಕಿಸಿದ್ದಾರೆ. 2014 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎಂದು ನಟಿ ಕಂಗನಾ ರಣಾವತ್ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಕೇಂದ್ರವು ಕಂಗನಾ ಅವರಿಂದ ಪದ್ಮಶ್ರೀ(Padma Shri) ಹಿಂಪಡೆಯಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಸಚಿವರು ಹೇಳಿದ್ದಾರೆ.

1947ರಲ್ಲಿ ದೊರಕಿದ್ದು ಭಿಕ್ಷೆ, 2014ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ! ಕಂಗನಾ ವಿವಾದ

ಈ ಕಾಮೆಂಟ್ ರಾಜಕಾರಣಿಗಳು, ಬಾಲಿವುಡ್ ಸೆಲೆಬ್ರಿಟಿಗಳು ಕಂಗನಾ ವಿರುದ್ಧ ವಾಗ್ದಾಳಿ ನಡೆಸುವುದರೊಂದಿಗೆ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ. ನಟಿ ಕಂಗನಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಂಗನಾ ಅವರ ಕಾಮೆಂಟ್ ಸುದ್ದಿಯಾಗಿದೆ. ಕಂಗನಾರ ಪದ್ಮಶ್ರೀ ಪ್ರಶಸ್ತಿ ವಾಪಸ್ ತೆಗೆದುಕೊಳ್ಳುವಂತೆ ಕಾಂಗ್ರೆಸ್ ಒತ್ತಾಯಿಸಿದರೆ, ಬಿಜೆಪಿ ಸಂಸದ ವರುಣ್ ಗಾಂಧಿ ಇದು ಹುಚ್ಚುತನವೋ ಅಥವಾ ದೇಶದ್ರೋಹವೋ ಎಂದು ಕಿಡಿಕಾರಿದ್ದಾರೆ. ಈಗ ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಅವರು ಸ್ವಾತಂತ್ರ್ಯ ಹೋರಾಟಗಾರನ ಮಗನಾಗಿರುವುದರಿಂದ ಕಂಗನಾ ಅವರ ಹೇಳಿಕೆಯು ವಾಕ್ ಸ್ವಾತಂತ್ರ್ಯದ ಅತ್ಯಂತ ದೊಡ್ಡ ದುರುಪಯೋಗವಾಗಿದೆ ಎಂದು ಹೇಳಿದ್ದಾರೆ.

Follow Us:
Download App:
  • android
  • ios