ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಆರೋಪದಲ್ಲಿ ತುಮಕೂರು ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಟಿ ಕಂಗನಾ ಹೈ ಕೋರ್ಟ್ ಮೊರೆ ಹೋಗಿದ್ದಾರೆ.
ಬೆಂಗಳೂರು (ಫೆ.28): ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಆರೋಪದಲ್ಲಿ ತುಮಕೂರು ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಟಿ ಕಂಗನಾ ರಾಣಾವತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿದಾರರ ಪರವಾಗಿ ವಕೀಲ ಇರ್ಫಾನಾ ನಜೀರ್ ಫೆ.26ರಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಕಂಗನಾ ವಿರುದ್ಧ ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿರುವ ಖಾಸಗಿ ದೂರು ಹಾಗೂ ಕೋರ್ಟ್ ಆದೇಶದ ಮೇರೆಗೆ ದಾಖಲಿಸಿರುವ ಎಫ್‌ಐಆರ್ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿದ್ದಾರೆ. ಅರ್ಜಿಯಲ್ಲಿ ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ಹಾಗೂ ದೂರುದಾರ ವಕೀಲ ಎಲ್. ರಮೇಶ್ ನಾಯ್‌್ಕ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದು, ಇನ್ನೂ ವಿಚಾರಣೆಗೆ ನಿಗದಿಯಾಗಬೇಕಿದೆ.
ಚಂದದ ಸ್ಮೈಲ್ ಕೊಡ್ತಾ ಬಂದ ಕಂಗನಾ ದಂಡ ಕಟ್ಬೇಕಾಯ್ತು..! ..
ಪ್ರಕರಣದ ಹಿನ್ನೆಲೆ: ದೆಹಲಿ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ನಟಿ ಕಂಗನಾ ರಾಣಾವತ್ 2020 ಸೆಪ್ಟೆಂಬರ್ 21ರಂದು ಟ್ವೀಟ್ ಮಾಡಿ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು ಎಂದು ಆರೋಪಿಸಿದ್ದ ತುಮಕೂರಿನ ವಕೀಲ ಎಲ್. ರಮೇಶ್ ನಾಯ್‌್ಕ, ಈ ಸಂಬಂಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸಬೇಕೆಂದು ಕೋರಿ 2020 ಸೆಪ್ಟೆಂಬರ್ 25 ಸ್ಥಳೀಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಅರ್ಜಿದಾರರ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ ಮುಂದಿನ ಕ್ರಮ ಜರುಗಿಸಲು ಕ್ಯಾತಸಂದ್ರ ಠಾಣೆ ಪೊಲೀಸರಿಗೆ ನಿರ್ದೇಶಿಸಿತ್ತು.
- ತುಮಕೂರಲ್ಲಿ ದಾಖಲಾಗಿರುವ ಪ್ರಕರಣ
- ರೈತರನ್ನು ಉಗ್ರರು ಎಂದು ಕರೆದಿದ್ದ ಆರೋಪ
