ಕರ್ನಾಟಕದ ಹುಬ್ಬಳ್ಳಿ ಮೂಲದವರಾದ ತೆಲಂಗಾಣದ ಹಿರಿಯ ಐಪಿಎಸ್‌ ಅಧಿಕಾರಿ ವಿ.ಸಿ. ಸಜ್ಜನರ್‌ ಅವರನ್ನು ಹೈದರಾಬಾದ್ ಪೊಲೀಸ್‌ ಕಮಿಷನರ್‌ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 ಹೈದರಾಬಾದ್ : ಕರ್ನಾಟಕದ ಹುಬ್ಬಳ್ಳಿ ಮೂಲದವರಾದ ತೆಲಂಗಾಣದ ಹಿರಿಯ ಐಪಿಎಸ್‌ ಅಧಿಕಾರಿ ವಿ.ಸಿ. ಸಜ್ಜನರ್‌ ಅವರನ್ನು ಹೈದರಾಬಾದ್ ಪೊಲೀಸ್‌ ಕಮಿಷನರ್‌ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿ.ಸಿ. ಸಜ್ಜನರ್‌ ಅವರು ಈವರೆಗೆ ತೆಲಂಗಾಣ ರಸ್ತೆ ಸಾರಿಗೆ ವಿಭಾಗದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ದಕ್ಷತೆಗೆ ಹೆಸರಾಗಿದ್ದ ಅವರು ಸಾರಿಗೆ ಇಲಾಖೆಯಲ್ಲಿ ಲಾಭದ ಹಳಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2019ರಲ್ಲಿ ತೆಲಂಗಾಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಸೈಬರಾಬಾದ್‌ ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾ*ರ, ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಎನ್‌ಕೌಂಟರ್‌ ನಡೆದಿತ್ತು. ಈ ವೇಳೆ ಸಜ್ಜನ್‌ ಅಲ್ಲಿನ ಪೊಲೀಸ್‌ ಕಮಿಷನರ್‌ ಆಗಿದ್ದರು ಹಾಗೂ ಎನ್‌ಕೌಂಟರ್ ಸ್ಪೆಷಲಿಸ್ಟ್‌ ಎಂಬ ಹೆಗ್ಗಳಿಕೆ ಪಡೆದಿದ್ದರು.

ಮೂಲತಃ ಹುಬ್ಬಳ್ಳಿಯವರು:

ಆಂಧ್ರಪ್ರದೇಶ ಕೇಡರ್‌ನ 1996 ಬ್ಯಾಚ್‌ ಅಧಿಕಾರಿಯಾಗಿದ್ದ ಇವರು ಮೂಲತಃ ಕರ್ನಾಟಕದ ಹುಬ್ಬಳ್ಳಿಯವರು. ಹುಬ್ಬಳ್ಳಿಯ ಜೆಜಿ ಕಾಮರ್ಸ್‌ ಕಾಲೇಜಿನಲ್ಲಿ ವಾಣಿಜ್ಯ ಪದವಿ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದಿದ್ದರು.

ದಸರಾ ಬಳಿಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಬದಲಾವಣೆ!

ದಸರಾ ಹಬ್ಬದ ನಂತರ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಾಮೂಹಿಕ ವರ್ಗಾವಣೆಗೆ ಸರ್ಕಾರ ಸಿದ್ಧತೆ ನಡೆಸಿದೆ. ಒಂದೇ ಸ್ಥಳದಲ್ಲಿ ಎರಡು ವರ್ಷ ಪೂರೈಸಿದ ಅಧಿಕಾರಿಗಳು, ಕಾನೂನು ಸುವ್ಯವಸ್ಥೆ ವೈಫಲ್ಯ ಹಾಗೂ ಭ್ರಷ್ಟಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಮೇಜರ್ ಸರ್ಜರಿ ನಡೆಯಲಿದೆ.

 ಬೆಂಗಳೂರು (ಸೆ.26): ದಸರಾ ಹಬ್ಬದ ಸಡಗರ ಮುಗಿದ ಬಳಿಕ ರಾಜ್ಯ ಪೊಲೀಸ್ ಇಲಾಖೆಗೆ ದೊಡ್ಡ ಬದಲಾವಣೆಗೆ ಯೋಜಿಸಿರುವ ರಾಜ್ಯ ಸರ್ಕಾರ, ಹಿರಿಯ ಐಪಿಎಸ್‌ ಅಧಿಕಾರಿಗಳು ಸೇರಿ ಪೊಲೀಸರ ಸಾಮೂಹಿಕ ವರ್ಗಾವಣೆ ಮಾಡಲು ಮುಂದಾಗಿದೆ.

ರಾಜ್ಯದಲ್ಲಿ ಅಸ್ವಿತ್ವದಲ್ಲಿ ಬಂದ ನಂತರ ಎರಡನೇ ಬಾರಿಗೆ ಮೇಜರ್ ಸರ್ಜರಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಇತ್ತ ವರ್ಗಾವಣೆಗೆ ಮುಹೂರ್ತ ನಿಗದಿಯಾದ ಬೆನ್ನಲ್ಲೇ ಆಯಕಟ್ಟಿನ ಸ್ಥಾನಗಳ ಪಡೆಯಲು ಕೆಲ ಅಧಿಕಾರಿಗಳು ಲಾಬಿ ಶುರು ಮಾಡಿದ್ದಾರೆ.

ಒಂದೇ ಕಾರ್ಯಸ್ಥಾನದಲ್ಲಿ ಎರಡು ವರ್ಷ ಪೂರೈಸಿರುವ ಡಿವೈಎಸ್ಪಿ-ಎಸಿಪಿ ಹಾಗೂ ಇನ್ಸ್‌ಪೆಕ್ಟರ್‌ಗಳ ಜತೆ ಐಪಿಎಸ್ ಅಧಿಕಾರಿಗಳ ಸ್ಥಾನ ಪಲ್ಲಟಕ್ಕೂ ಸರ್ಕಾರ ಕೈ ಹಾಕಿದೆ. ಇತ್ತೀಚಿನ ಕೆಲವೆಡೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತಂದ ಗಲಾಟೆಗಳು ಹಾಗೂ ಭ್ರಷ್ಟಾಚಾರ ಪ್ರಕರಣಗಳು ಕೂಡ ಸರ್ಕಾರದ ಕ್ರಮಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

 ಈ ಆಡಳಿತ ಬದಲಾವಣೆ ಸಂಬಂಧ ಕೆಲ ದಿನಗಳ ಹಿಂದೆ ಅಶೋಕನಗರ ಸಮೀಪದಲ್ಲಿರುವ ರಾಜ್ಯ ಸಶಸ್ತ್ರ ಮೀಸಲು ಪಡೆಯ (ಕೆಎಸ್ಆರ್‌ಪಿ) ಮೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಸಭೆಯಲ್ಲಿ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್‌, ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಎಡಿಜಿಪಿ (ಆಡಳಿತ) ಸೌಮೆಂದು ಮುಖರ್ಜಿ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಅಜುಂ ಪರ್ವೇಜ್ ಉಪಸ್ಥಿತರಿದ್ದರು. ಅಲ್ಲದೆ ಪಿಐ-ಡಿವೈಎಸ್ಪಿಗಳ ವರ್ಗಾವಣೆಗೆ ಶಾಸಕರ ಶಿಫಾರಸಿನ ಬಗ್ಗೆ ಸಹ ಚರ್ಚೆ ಕೂಡ ನಡೆದಿದೆ ಎಂದು ತಿಳಿದು ಬಂದಿದೆ.