Asianet Suvarna News Asianet Suvarna News

ಭಾರಿ ಮಳೆ, ಭೂ ಕುಸಿತ: ಕೇರಳ ಸಿಎಂಗೆ ನೆರವಿನ ಭರವಸೆ ನೀಡಿದ ಬೊಮ್ಮಾಯಿ

* ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ 
* ಕೇರಳ ಸಿಎಂಗೆ ನೆರವಿನ ಭರವಸೆ ನೀಡಿದ ಬಸವರಾಜ ಬೊಮ್ಮಾಯಿ
 * ಪಿಣರಾಯಿ ವಿಜಯನ್ ಜತೆ ದೂರವಾಣಿ ಮೂಲಕ ಮಾತನಾಡಿದ ಸಿಎಂ ಬೊಮ್ಮಾಯಿ

Karnataka CM Basavaraj Bommai offers help to rain-hit Kerala rbj
Author
Bengaluru, First Published Oct 20, 2021, 10:39 PM IST
  • Facebook
  • Twitter
  • Whatsapp

ಬೆಂಗಳೂರು, (ಅ.20): ನೆರೆ ರಾಜ್ಯ, ದೇವರ ನಾಡು ಕೇರಳದಲ್ಲಿ (Kerala) ಧಾರಾಕಾರ ಮಳೆಯಿಂದಾಗಿ ಪ್ರವಾಹ (Flood) ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.

 ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಬುಧವಾರ) ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi V)ijayan ಅವರೊಂದಿಗೆ ದೂರವಾಣಿ (Phone) ಮೂಲಕ ಮಾತನಾಡಿ  ಪ್ರವಾಹ ಮತ್ತು ಭೂಕುಸಿತ ದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇರಳ ರಣ ಮಳೆಗೆ 18 ಸಾವು, ಸಿಎಂ ಪಿಣರಾಯಿ ಜೊತೆ ಮೋದಿ ಮಾತುಕತೆ, ನೆರವಿನ ಭರವಸೆ!

ಇದೇ ವೇಳೆ ನಿಮ್ಮೊಂದಿಗೆ ನಾವಿದ್ದೇವೆ.ಸಹಕಾರ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು  ಪಿನರಾಯಿ ವಿಜಯನ್‌ಗೆ ಭರವಸೆ ನೀಡುವ ಮೂಲಕ ಧೈರ್ಯ ತುಂಬಿದ್ದಾರೆ.

ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. 

ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ...

Follow Us:
Download App:
  • android
  • ios