ಬೆಂಗಳೂರು(ಏ.22): ವ್ಯಾಪಕವಾಗಿ ಹರಡುತ್ತಿರುವ ಕೋವಿಡ್‌ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಉಸ್ತುವಾರಿ ಜಿಲ್ಲೆಯಲ್ಲಿಯೇ ವಾಸ್ತವ್ಯ ಮಾಡಿ ಪರಿಸ್ಥಿತಿಯನ್ನು ಅವಲೋಕಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಎಲ್ಲಾ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

"

ಈ ಸಂಬಂಧ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪತ್ರ ಬರೆದಿರುವ ಅವರು, ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊರೋನಾ ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ತ್ವರಿತವಾಗಿ ಕ್ರಮ ಕೈಗೊಳ್ಳುವ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಚಿವರು ತಮಗೆ ನೀಡಿರುವ ಉಸ್ತುವಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಸಾರ್ವಜನಿಕರಲ್ಲಿ ಸೋಂಕು ಹರಡುವಿಕೆಯ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಮತ್ತು ಸೋಂಕಿತರಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ತ್ವರಿತ ಕ್ರಮ ಕೈಗೊಂಡು ಪರಿಸ್ಥಿತಿ ಉಲ್ಬಣವಾಗದಂತೆ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ಸಿಎಂ ಪತ್ರದಲ್ಲೇನಿದೆ?

- ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರೂ ಅವರವರ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಬೇಕು

- ಕೋವಿಡ್‌ ಪರಿಸ್ಥಿತಿ ಅವಲೋಕಿಸಿ ತ್ವರಿತ ಕ್ರಮ ಕೈಗೊಳ್ಳಬೇಕು

- ಸರ್ಕಾರ ಸಮರೋಪಾದಿ ಕ್ರಮ ಕೈಗೊಳ್ಳುತ್ತಿದೆ, ಅದನ್ನು ಜನರಿಗೆ ತಲುಪಿಸಬೇಕು

- ಜಿಲ್ಲಾಡಳಿತದ ಜೊತೆ ಸತತ ಸಂಪರ್ಕದಲ್ಲಿದ್ದು ಮುನ್ನೆಚ್ಚರಿಕೆ ವಹಿಸಬೇಕು

- ಕೊರೋನಾ ಸೋಂಕು ಇನ್ನಷ್ಟುಉಲ್ಬಣವಾಗದಂತೆ ನೋಡಿಕೊಳ್ಳಬೇಕು