ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ 1.09 ಲಕ್ಷ ಕೋಟಿ ರೂ. ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 4,504 ಕೋಟಿ ರೂ. ಹಂಚಿಕೆಯಾಗಿದ್ದು, ಅಭಿವೃದ್ಧಿ ಯೋಜನೆಗಳಿಗೆ ಬಲ ಸಿಕ್ಕಿದೆ. ಇದು ಪ್ರಸಕ್ತ ಹಣಕಾಸು ವರ್ಷದ ಎರಡನೇ ಹೆಚ್ಚುವರಿ ಕಂತಾಗಿದೆ.
ಎಲ್ಲ ರಾಜ್ಯಗಳಿಗೆ ಒಟ್ಟಾರೆ ₹1.09 ಲಕ್ಷ ಕೋಟಿ ಮೊತ್ತ ಹಂಚಿಕೆ
ನವದೆಹಲಿ (ನ.1): ಮುಂಬರುವ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಲಾಗುವ ತೆರಿಗೆ ಪಾಲಿನಲ್ಲಿ 1,09,019 ಕೋಟಿ ರು.ಗಳನ್ನು (1.09 ಲಕ್ಷ ಕೋಟಿ ರು.) ಶನಿವಾರ ಬಿಡುಗಡೆ ಮಾಡಿದೆ. ಈ ಪೈಕಿ ಕರ್ನಾಟಕಕ್ಕೆ 4,504 ಕೋಟಿ ರು. ಹಂಚಿಕೆಯಾಗಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳು ಹಾಗೂ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಬಲ ಸಿಕ್ಕಂತಾಗಿದೆ.
ಇದನ್ನೂ ಓದಿ: PM-KISAN ಯೋಜನೆಯಡಿ 24 ನೇ ಕಂತಿನ ₹19,000 ಕೋಟಿ ಹಣ ನೇರ ರೈತರ ಖಾತೆಗೆ! ನಮ್ಮದು ರೈತಪರ ಸರ್ಕಾರ ಎಂದ ಮೋದಿ
ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರದಿಂದ ಎರಡನೇ ಕಂತು
ನಿಯಮಿತ ಮಾಸಿಕ ಹಂಚಿಕೆಯ ಹೊರತಾಗಿ, ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ನೀಡುತ್ತಿರುವ 2ನೇ ಹೆಚ್ಚುವರಿ ಕಂತು ಇದಾಗಿದೆ. ಕಳೆದ ಆಗಸ್ಟ್ನಲ್ಲಿ 1.09 ಲಕ್ಷ ಕೋಟಿ ರು. ಬಿಡುಗಡೆ ಮಾಡಲಾಗಿತ್ತು. ಹಬ್ಬದ ಋತುವಿನಲ್ಲಿ ರಾಜ್ಯಗಳು ವಿವಿಧ ಕಲ್ಯಾಣ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿರುವ ನಿಧಿ ಕೊರತೆಯನ್ನು ನೀಗಿಸಲು ಈ ಮೊತ್ತವನ್ನು ಮುಂಚಿತವಾಗಿ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.






