Asianet Suvarna News Asianet Suvarna News

ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಖಾಸಗಿ ಅರ್ಜಿ

ಎಸಿಬಿ ರದ್ದು ಮಾಡುವಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಖಾಸಗಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ ಕೂಡ ಈ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ಮಾಡುವುದಾಗಿ ಒಪ್ಪಿಕೊಂಡಿದೆ.
 

Karnataka Government moves Supreme Court against the HC order abolishing the State Anti Corruption Bureau san
Author
Bengaluru, First Published Aug 23, 2022, 11:30 AM IST

ಬೆಂಗಳೂರು (ಆ.23): ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದು ಮಾಡಿ, ಅಲ್ಲಿರುವ ಎಲ್ಲಾ ಕೇಸ್‌ಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದರೊಂದಿಗೆ ಎಸಿಬಿ ಹಾಗೂ ಲೋಕಾಯುಕ್ತ ಯುದ್ಧವೀಗ ಸುಪ್ರೀಂ ಕೋರ್ಟ್‌ ಅಂಗಳಕ್ಕೇರಿದೆ. ಇದಕ್ಕೂ ಮುನ್ನ ಎಸಿಬಿಯನ್ನು ರದ್ದು ಮಾಡುವಂತೆ ಕಳೆದ ವಾರ ಹೈಕೋರ್ಟ್‌ ಅದೇಶ ನೀಡಿತ್ತು. ಇದರ ಬಗ್ಗೆ ಪ್ರತಿಕ್ರಿಯಿಸಿದ್ದ ರಾಜ್ಯ ಸರ್ಕಾರ ಇದರ ವಿರುದ್ಧ ಮೇಲ್ಮನವಿ ಸಲ್ಲಿಸೋದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಖಾಸಗಿ ಮೇಲ್ಮನವಿ ಸಲ್ಲಿಸಿದೆ.  ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ನೇತೃತ್ವದ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಶೀಘ್ರವೇ ಇದರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ. ಇದಕ್ಕೂ ಮುನ್ನ ಸ್ವತಃ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ವರದಿಯಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಖಾಸಗಿ ಮೇಲ್ಮನವಿ ಅರ್ಜಿ ದಾಖಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಸಿಬಿ ರದ್ದು ಮಾಡುವ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ

Follow Us:
Download App:
  • android
  • ios