Asianet Suvarna News Asianet Suvarna News

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ!

ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ 5 ತಿಂಗಳು ಕಾದರೂ ಪರಿಹಾರ ಕೊಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

Karnataka govt submitted writ petition to Supreme Court against Union Govt for drought relief sat
Author
First Published Mar 23, 2024, 4:12 PM IST

ಬೆಂಗಳೂರು (ಮಾ.23): ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು. ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ. ಬರದ ಸಂದರ್ಭದಲ್ಲಿ , ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗೆ ಸ್ಪಂದಿಸದ ಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ ಆದರೆ ಇದುವರೆಗೂ ಕೇಂದ್ರ ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ' ಎಂದು ಮಾಹಿತಿ ನೀಡಿದರು. 

ಮಲೆ ಮಹದೇಶ್ವರನಿಗೆ 700 ಕೆಜಿ ಬೆಳ್ಳಿ ಕಾಣಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ; ಮಾಜಿ ಶಾಸಕ ಮಂಜುನಾಥ್ ಮಾಹಿತಿ

ನಿಯಮವಾಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಪರಿಶೀಲನೆ ನಡೆಸಿ ಕೇಂದ್ರಕ್ಕೆ IMCT ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು NDRF ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.

ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರೂ ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. ಬಳಿಕ ನಾನೇ ಡಿಸೆಂಬರ್ 20 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ. ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿಯವರನ್ನು‌ ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ. 

ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 450 ಕೋಟಿ, ಕುಡಿಯುವ ನೀರಿಗೆ 870 ಕೋಟಿಬಿಡುಗಡೆ ಮಾಡಿದೆವು. ಡಿಸಿಗಳ ಬಳಿ ಇನ್ನೂ 800 ಕೋಟಿ ರೂಪಾಯಿ ಹಣ ಬರನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ. 4,600 ಕೋಟಿ ಇನ್ ಪುಟ್ ಸಬ್ಸಿಡಿಗೆ ಹಣ ಬೇಕು. ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ NDRF ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂ ಕೋರ್ಟ್ ಬಾಗಿಲು ಬಡಿಯಬೇಕಾಯಿತು ಎಂದರು.

ಶಿವಮೊಗ್ಗಕ್ಕೆ ಬ್ರಹ್ಮ ಬಂದರೂ ಬಂಡಾಯ ಸ್ಪರ್ಧೆ ವಾಪಸ್ ಪಡೆಯೊಲ್ಲ; ಕೆ.ಎಸ್. ಈಶ್ವರಪ್ಪ

ನಮ್ಮ ನಾಡಿಗೆ, ನಮ್ಮ ನಾಡಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು, NDRF ನಿಧಿ ಕೊಡಿ ಎಂದು ಮೇಲಿಂದ ಮೇಲೆ ಮನವಿ ಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. ಈ ಕಾರಣಕ್ಕೆ ನಾವು ಸುಪ್ರೀಂಕೋರ್ಟ್ ಬಳಿ ನ್ಯಾಯ ಕೇಳದೆ ಬೇರೆ ದಾರಿ ಇರಲಿಲ್ಲ. ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು ಬರತ್ತೆ, ನಾಳೆ ಬರತ್ತೆ ಅಂತ  ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ಇರಲಿಲ್ಲ. ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸೃಷ್ಟಿಸಿದೆ ಎಂದರು. 

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕೇಂದ್ರದಿಂದ NDRF ಪರಿಹಾರ ಪಡೆಯಲು ಇದುವರೆಗೂ ರಾಜ್ಯ ಸರ್ಕಾರ ಮಾಡಿದ ಸಕಲ ಪ್ರಯತ್ನಗಳನ್ನೂ ವಿವರಿಸಿದರು.

Follow Us:
Download App:
  • android
  • ios