ಬೆಂಗಳೂರು(ಮೇ.11): ರಾಜ್ಯದಲ್ಲಿ ಕೊರೋನಾ ಮಹಾಮಾರಿಗೆ ಸೋಮವಾರ ದಾಖಲೆಯ 596 ಮಂದಿ ಬಲಿಯಾಗಿದ್ದಾರೆ. ಮರಣ ದರ ಶೇ. 1.51ಕ್ಕೆ ಜಿಗಿದಿದ್ದು ಆತಂಕಕಾರಿಯಾಗಿದೆ. 39,305 ಮಂದಿಯಲ್ಲಿ ಸೋಂಕು ಧೃಢಪಟ್ಟಿದೆ.

ಮೇ 7 ರಂದು 592 ಮಂದಿ ಮೃತರಾಗಿದ್ದು ಈವರೆಗಿನ ಅತಿ ಹೆಚ್ಚಿನ ಸಂಖ್ಯೆಯಾಗಿತ್ತು. ಹೆಚ್ಚು ಕಮ್ಮಿ ಎರಡೂವರೆ ನಿಮಿಷಕ್ಕೆ ಒಬ್ಬರಂತೆ ಮರಣವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 374 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ 8 ಜಿಲ್ಲೆಯಲ್ಲಿ ಎರಡಂಕಿಯಲ್ಲಿ ಕೋವಿಡ್‌ ಸಾವು ವರದಿಯಾಗಿದೆ. ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಶೇ.1 ಮೀರಿದ ಸಾವಿನ ದರ ದಾಖಲಾಗುತ್ತಿದೆ.

ಈ ಮಧ್ಯೆ ಮೇ 2ರ ಬಳಿಕ ಹೊಸ ಸೋಂಕಿನ ಪ್ರಕರಣ 40 ಸಾವಿರದ ಗಡಿಯೊಳಗೆ ಬಂದಿದೆ. ಆದರೆ ಕೋವಿಡ್‌ ಪರೀಕ್ಷೆಯ ಪ್ರಮಾಣ ಕೂಡ ಸುಮಾರು 30 ರಿಂದ 40 ಸಾವಿರದಷ್ಟುಕಡಿಮೆ ಆಗಿದೆ. ಸೋಮವಾರ 1.24 ಲಕ್ಷ ಕೋವಿಡ್‌ ಪರೀಕ್ಷೆ ನಡೆದಿದೆ. ರಾಜ್ಯದಲ್ಲಿ ಈವರೆಗೆ 19.73 ಲಕ್ಷ ಕೋವಿಡ್‌ ಪ್ರಕರಣ ದಾಖಲಾಗಿದ್ದು 13.83 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,372 ಮಂದಿ ಮರಣವನ್ನಪ್ಪಿದ್ದಾರೆ. ಈವರೆಗೆ ಒಟ್ಟು 2.71 ಕೋಟಿ ಕೋವಿಡ್‌ ಪರೀಕ್ಷೆ ನಡೆದಿದೆ.

"

ಸಾವಿನ ವಿವರ: ಬಳ್ಳಾರಿ 26, ಹಾಸನ 22, ತುಮಕೂರು, ಬಾಗಲಕೋಟೆ ತಲಾ 15, ಮಂಡ್ಯ, ಹಾವೇರಿ ತಲಾ 12, ಉತ್ತರ ಕನ್ನಡ, ಶಿವಮೊಗ್ಗ ತಲಾ 11 ಮಂದಿ ಮೃತರಾಗಿದ್ದಾರೆ. ಕೊಪ್ಪಳ ಹೊರತು ಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಸಾವು ದಾಖಲಾಗಿದೆ.

ಬೆಂಗಳೂರು ನಗರದಲ್ಲಿ 16,747 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ತುಮಕೂರು 2,168, ಹಾಸನ 1,800, ಮೈಸೂರು 1,537, ದಕ್ಷಿಣ ಕನ್ನಡ 1,175, ಮಂಡ್ಯ 1,133, ಧಾರವಾಡ 1,006 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಇನ್ನು ರಾಜ್ಯದಲ್ಲಿ ಸೋಮವಾರ 80,823 ಮಂದಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ.

ಟಾಪ್‌ 5 ರಾಜ್ಯಗಳು

ರಾಜ್ಯ ಕೇಸ್‌ ಸಾವು

ಕರ್ನಾಟಕ 39,305 596

ಮಹಾರಾಷ್ಟ್ರ 37,236 549

ತಮಿಳುನಾಡು 28,978 232

ಕæೕರಳ 27,487 65

ಉತ್ತರ ಪ್ರದೇಶ 21,331 278

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona